ಚಾಮರಾಜನಗರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ (ಸ್ನಾತಕೋತ್ತರ ಮತ್ತು ವೃತ್ತಿಪರ ಕೋರ್ಸುಗಳ ವಿದ್ಯಾರ್ಥಿಗಳು) ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ನ.೨೨ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ದೂ.ಸಂ. ೦೮೨೨೬-೨೨೨೧೮೦ ಸಂಪರ್ಕಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





