ಜಿಲ್ಲೆಗಳು

ಹಣಕಾಸು ಇಲಾಖೆಗೆ ಪ್ರತ್ಯೇಕ ಸಚಿವರನ್ನು ನೇಮಿಸಲಿ: ಎಎಚ್‌ವಿ

ಮೈಸೂರು: ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿಯವರ ಮೂಗಿನಡಿಯಲ್ಲೇ ದೊಡ್ಡ ಭ್ರಷ್ಟಾಚಾರ ನಡೆಯುತ್ತಿರುವ ಕಾರಣ ಹಣಕಾಸು ಖಾತೆಗೆ ಪ್ರತ್ಯೇಕ ಸಚಿವರನ್ನು ನೇಮಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಯವರು ವಿನಿಯೋಗದ ಪವರ್ ಇಟ್ಟುಕೊಂಡರೂ ಸಂಪನ್ಮೂಲ ಕ್ರೋಢೀಕರಣಕ್ಕೆ ನಿಗಾ ಇಡಲು ಬೇರೆಯವರಿಗೆ ವಹಿಸಬೇಕಾಗಿದೆ. ಹಣಕಾಸು ಇಲಾಖೆ ಮೂಲಕ ೧.೨೦ ಲಕ್ಷ ಕೋಟಿ ರೂ. ಆದಾಯ ಸಂಗ್ರಹವಾಗಲಿದೆ. ಆದರೆ, ಸಂಪನ್ಮೂಲ ಸಂಗ್ರಹಿಸುವ ಇಲಾಖೆಯಲ್ಲೇ ದೊಡ್ಡ ಭ್ರಷ್ಟಾಚಾರ ನಡೆಯುತ್ತಿದೆ. ಹಣಕಾಸು ಇಲಾಖೆಯ ಪ್ರಗತಿ ಪರಿಶೀಲನೆ ಮಾಡಲು ಸಾಧ್ಯವಾಗದಿರುವುದರಿಂದ ಆದಾಯ ಸೋರಿಕೆಗೆ ಕಾರಣವಾಗಿದೆ. ಮುಖ್ಯಮಂತ್ರಿಯವರ ಅಧೀನದಲ್ಲಿ ಏಳೆಂಟು ಇಲಾಖೆಗಳಿವೆ. ಇವುಗಳನ್ನು ನಿರ್ವಹಿಸಲು ಸಾಧ್ಯವಾಗದೆ ಸತ್ತು ಹೋಗಿವೆ. ಹಾಗಾಗಿ, ಈ ಇಲಾಖೆಗಳಿಗೆ ಪ್ರತ್ಯೇಕ ಸಚಿವರನ್ನು ನೇಮಕ ಮಾಡಬೇಕು ಎಂದು ಆಗ್ರಹಿಸಿದರು.

ಮಹಾತ್ಮ ಗಾಂಧೀಜಿ ಉಪ್ಪಿನ ಮೇಲೆ ತೆರಿಗೆ ವಿಧಿಸಬೇಡಿ ಎಂದಿದ್ದರು. ಆದರೆ, ಈಗ ಉಪ್ಪಿಗೂ ಜಿಎಸ್‌ಟಿ ವಿಧಿಸಲಾಗುತ್ತಿದೆ. ತಂಬಾಕು ಉತ್ಪನ್ನಗಳ ಮೇಲೆ ಶೇ.೨೮ರಷ್ಟು ಜಿಎಸ್‌ಟಿ ವಿಧಿಸಲಾಗುತ್ತಿದೆ. ೧೦೦ ಕೋಟಿ ರೂ.ಗೆ ೭೦ ಕೋಟಿ ರೂ. ಜಿಎಸ್‌ಟಿ ಆಗುತ್ತಿರುವ ಕಾರಣ ಕಳ್ಳದಾರಿಯಲ್ಲಿ ಹೋಗುತ್ತಿದೆ. ತಮಿಳುನಾಡು, ಆಂಧ್ರ ಪ್ರದೇಶದಲ್ಲಿ ನಿಷೇಧ ಹೇರಿರುವ ಕಾರಣ ಕರ್ನಾಟಕದಲ್ಲಿ ಭಾರೀ ಬೇಡಿಕೆಯಾಗಿದೆ. ಹಾಗಾಗಿ, ಈ ಕಳ್ಳ ದಾರಿಯಲ್ಲಿ ಸಾಗಿಸಲು ಅಧಿಕಾರಿಗಳೇ ದಾರಿ ತೋರಿಸುತ್ತಿದ್ದಾರೆ. ಆದಾಯ ಸಂಗ್ರಹವಾಗುವ ವಾಣಿಜ್ಯ ತೆರಿಗೆ ಇಲಾಖೆಯಲ್ಲೇ ಭ್ರಷ್ಟಾಚಾರ ನಡೆಯುತ್ತಿರುವುದು ಆತಂಕದ ವಿಚಾರವಾಗಿದೆ ಎಂದು ತಿಳಿಸಿದರು.

ಪ್ರಾಥಮಿಕ, ಕಾಲೇಜು ಶಿಕ್ಷಣ ಇಲಾಖೆ ಹರಣ: ಪ್ರಾಥಮಿಕ ಮತ್ತು ಕಾಲೇಜು ಶಿಕ್ಷಣವನ್ನು ಹರಣ ಮಾಡಲಾಗುತ್ತಿದೆ. ಎಸ್.ಎಂ.ಕೃಷ್ಣ ಅವರ ಸರ್ಕಾರದಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ತಂದಿದ್ದಾಗ ಇಡೀ ಅಧಿಕಾರಿಗಳು ಒಂದು ಊರಿನಲ್ಲಿ ವಾಸ್ತವ್ಯ ಹೂಡುತ್ತಿದ್ದರು. ಈಗ ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ಕೇಸರಿಮಯ ಮಾಡಲು ಶಾಲಾ ಕೊಠಡಿಗಳಿಗೆ ಬಣ್ಣ ಬಳಿಯಲಾಗುತ್ತಿದೆ. ಪಕ್ಷದ ತತ್ವ, ಸಿದ್ಧಾಂತವನ್ನು ಮಕ್ಕಳ ಮನಸ್ಸಿನ ಮೇಲೆ ಹೇರುವಂತಹ ಕೆಲಸ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.

ವಿವೇಕ, ವಿವೇಚನೆ ಮತ್ತು ದೂರದೃಷ್ಟಿತ್ವದಿಂದ ಕೆಲಸ ಮಾಡುವ ಬದಲಿಗೆ ಪ್ರಾಥಮಿಕ ಶಿಕ್ಷಣ ವ್ಯವಸ್ಥೆಯನ್ನು ಹಾಳುಗೆಡವಲಾಗುತ್ತಿದೆ. ವಿವಿಗಳನ್ನು ವಿಭಜನೆ ಮಾಡಿ ಮತ್ತೆ ಒಂಬತ್ತು ವಿವಿಗಳನ್ನು ಸ್ಥಾಪನೆ ಮಾಡಲಾಗುತ್ತಿದೆ. ಒಬ್ಬರ ಪಿಎಚ್.ಡಿ. ಪದವಿ ಪ್ರಮಾಣ ಪತ್ರ ನಕಲು ಎಂದು ತಿರಸ್ಕರಿಸಿದ್ದರೂ ಕುಲಪತಿಯನ್ನಾಗಿ ನೇಮಿಸಲಾಗಿದೆ. ೫ ಕೋಟಿ ರೂ. ಕೊಟ್ಟವರಿಗೆ ಕುಲಪತಿಯನ್ನಾಗಿ ನೇಮಿಸಲಾಗುತ್ತಿದೆ. ಐದಾರು ಕೋಟಿ ರೂ. ಕೊಟ್ಟು ಕುಲಪತಿಯಾಗಿ ಬರುವವರು ಜನರನ್ನು ತುಂಬಿ ಹಣ ವಸೂಲಿ ಮಾಡುವಂತಾಗಿದೆ. ವಿವಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಅಧಿಕಾರವನ್ನು ಕುಲಪತಿಗಳಿಂದ ವಾಪಸ್ ಪಡೆದು ಪ್ರತ್ಯೇಕ ಮಂಡಳಿ ರಚನೆ ಮಾಡಬೇಕು ಎಂದು ಆಗ್ರಹಿಸಿದರು.

ಮುಂಬರುವ ಚುನಾವಣೆಯಲ್ಲಿ ನನ್ನ ಪುತ್ರ ಸ್ಪರ್ಧಿಸುವುದಿಲ್ಲ. ಕೆಲ ಅಪ್ಪ-ಮಕ್ಕಳು ಚುನಾವಣೆ ಕಣಕ್ಕೆ ಧುಮುಕಲು ಸಿದ್ಧತೆ ನಡೆಸಿದ್ದಾರೆ. ಅವರಲ್ಲಿ ಶಕ್ತಿ ಇದೆ. ಚುನಾವಣೆಗೆ ನಿಲ್ಲಲು ನಮ್ಮ ಬಳಿ ಹಣವಿಲ್ಲ. ದೇವರಾಜ ಅರಸು ಕಾಲದಿಂದ ಸ್ನೇಹಿತರು, ಅಭಿಮಾನಿಗಳು ಕೊಡುವ ಹಣದಿಂದ ಆಯ್ಕೆಯಾಗಿ ಬರುತ್ತಿದ್ದೆವು. ಈಗ ಐದು, ಆರು ಕೋಟಿ ರೂ. ಹಣ ಎಲ್ಲಿಂದ ತರುವುದು. -ಎ.ಎಚ್.ವಿಶ್ವನಾಥ್

 

ವಿಧಾನಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್ ಅವರು ಮೈಸೂರಿನಲ್ಲಿರುವ ತಮ್ಮ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಸಿದರು.

andolana

Recent Posts

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

3 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

10 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

10 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

10 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

10 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

10 hours ago