ಜಿಲ್ಲೆಗಳು

ನಾಳೆ ಅಪ್ಪು ನಮನ ಕಾರ್ಯಕ್ರಮ, ಬರಲಿದ್ದಾರೆ ಶಿವರಾಜ್ ಕುಮಾರ್

ಯುವದಸರೆಗೆ ಕ್ಷಣಗಣನೆ, ಪೋಸ್ಟರ್ ಬಿಡುಗಡೆ, ಸಮಾರಂಭಕ್ಕೆ ಪಾಸ್ ಬೇಕಿಲ್ಲ

ಮೈಸೂರು: ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು, ಯುವ ದಸರಾ ಕಾರ್ಯಕ್ರಮದ ಪೋಸ್ಟರ್ ಅನ್ನು ಬಿಡುಗಡೆ ಮಾಡಿದರು.
ಬಳಿಕ ಮಾತನಾಡಿದ ಸಚಿವರು, ಸೆ.28ಕ್ಕೆ “ಅಪ್ಪು ನಮನ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ದಸರಾಗೆ ಸಾಕಷ್ಟು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಎಲ್ಲವೂ ಸುಸೂತ್ರವಾಗಿ ನಡೆಯುತ್ತಿದೆ. ಯುವ ದಸರಾದಲ್ಲಿ ಗೋಲ್ಡ್ ಪಾಸ್ ಹೊರತುಪಡಿಸಿ ಯಾವುದೇ ಪಾಸ್ ಇರುವುದಿಲ್ಲ ಎಂದರು.
ಯುವ ಸಂಭ್ರಮ/ಯುವ ದಸರಾ ಉಪ ಸಮಿತಿ ವತಿಯಿಂದ ಸೆ. 28ರಿಂದ ಅ.3ರವರೆಗೆ ಯುವ ದಸರಾ ಕಾರ್ಯಕ್ರಮವನ್ನು ಮಹಾರಾಜ ಕಾಲೇಜು ಮೈದಾನದಲ್ಲಿ ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ.

ಯುವ ದಸರಾ ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರಾಗಿ ದಿ.ನಟ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಹಾಗೂ ನಟ ಶಿವರಾಜ್ ಕುಮಾರ್ ಆಗಮಿಸಲಿದ್ದಾರೆ. ಶಾಸಕ ಎಲ್.ನಾಗೇಂದ್ರ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ನಾಳೆ ಸಂಜೆ 7 ಗಂಟೆಯಿಂದ ಅಪ್ಪು ನಮನ ಕಾರ್ಯಕ್ರಮ ನಡೆಯಲಿದ್ದು ಖ್ಯಾತ ಹಿನ್ನೆಲೆ ಗಾಯಕರಾದ ಗುರುಕಿರಣ್, ವಿಜಯ ಪ್ರಕಾಶ್, ಕುನಾಲ್ ಗಾಂಜಾವಾಲ ಕಾರ್ಯಕ್ರಮ ನೀಡಲಿದ್ದಾರೆ.

ಸೆ.29ರಂದು ಯುವ ಸಂಭ್ರಮ ವಿಜೇತರಿಂದ ನೃತ್ಯ ಪ್ರದರ್ಶನ, ಸ್ಥಳೀಯ ನೃತ್ಯ ತಂಡದಿಂದ ನೃತ್ಯ ಪ್ರದರ್ಶನ, ಪವನ್ ಡ್ಯಾನ್ಸರ್ ಹಾಗೂ ಇತರರಿಂದ ನೃತ್ಯ ರೂಪಕ, ಹಿನ್ನೆಲೆ ಗಾಯಕಿ ಕನ್ನಿಕಾ ಕಪೂರ್ ರವರಿಂದ ಸಂಗೀತ ರಸಸಂಜೆ ನಡೆಯಲಿದೆ. ಸೆ.30ರಂದು ಯುವ ಸಂಭ್ರಮ ವಿಜೇತರಿಂದ ನೃತ್ಯ ಪ್ರದರ್ಶನ, ಸ್ಥಳೀಯ ಕಲಾವಿದರಿಂದ ಕಾರ್ಯಕ್ರಮ, ಲೇಸರ್ ಆಕ್ಟ್ & ಸಿಗ್ನೇಚರ್ ಗ್ರೂಪ್ ನೃತ್ಯ ತಂಡದಿಂದ ನೃತ್ಯ ರೂಪಕ, ಸ್ಯಾಂಡಲ್ ವುಡ್ ನೈಟ್ ನಡೆಯಲಿದೆ.

ಅ.1ರಂದು ಯುವ ಸಂಭ್ರಮ ವಿಜೇತರಿಂದ ನೃತ್ಯ ಪ್ರದರ್ಶನ, ಹಿನ್ನೆಲೆ ಗಾಯಕ ಸೋನು ನಿಗಮ್, ಗಾಯಕಿ ಡಾ.ಶಮಿತಾ ಮಲ್ನಾಡ್ ರಿಂದ ಸಂಗೀತ ರಸಮಂಜರಿ ಇರಲಿದೆ.
ಅ.2ರಂದು ಯುವ ಸಂಭ್ರಮ ವಿಜೇತರಿಂದ ನೃತ್ಯ ಪ್ರದರ್ಶನ, ಖ್ಯಾತ ಚಿತ್ರತಾರೆಯರಾದ ಹರ್ಷಿಕಾ ಪೂಣಚ್ಚ, ವಿಜಯರಾಘವೇಂದ್ರ ಅವರಿಂದ ಕನ್ನಡ ಸ್ಟಾರ್ ನೈಟ್, ಗಾಯಕಿ ಮಂಗ್ಲಿ ಅವರಿಂದ ಸಂಗೀತ ರಸಮಂಜರಿ, ಗಾಯಕ ಅಮಿತ್ ತ್ರಿವೇದಿ ಅವರಿಂದ ಸಂಗೀತ ರಸಮಂಜರಿ ನಡೆಯಲಿದೆ.

ಅ.3ರಂದು ಯುವ ಸಂಭ್ರಮ ವಿಜೇತರಿಂದ ನೃತ್ಯ ಪ್ರದರ್ಶನ, ಸುಪ್ರಿಯಾ ರಾಮ್ &ಮಹಿಳಾ ಬ್ಯಾಂಡ್ ತಂಡದವರಿಂದ ಪ್ರದರ್ಶನ, ಫ್ಯಾಷನ್ ಶೋ, ಗಾಯಕಿ ಸುನಿಧಿ ಚೌಹಾಣ್ ರಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಲಿದೆ ಎಂದು ಯುವ ದಸರಾ ಉಪ ಸಮಿತಿ ವಿಶೇಷಾಧಿಕಾರಿ ಆರ್.ಚೇತನ್ ಇದೇ ವೇಳೆ ತಿಳಿಸಿದರು.

ಭಿತ್ತಿ ಪತ್ರ ಬಿಡುಗಡೆ ಸಮಾರಂಭದಲ್ಲಿ ಸಂಸದ ಪ್ರತಾಪ್ ಸಿಂಹ, ಮೇಯರ್ ಶಿವಕುಮಾರ್, ಸಮಿತಿಯ ಕಾರ್ಯಾಧ್ಯಕ್ಷ ವೆಂಕಟರಾಜು ಎನ್ ಸಿ, ಅಧ್ಯಕ್ಷ ಕಿರಣ್ ಗೌಡ, ಉಪಾಧ್ಯಕ್ಷರುಗಳಾದ ಎಂ.ಬದರೀಶ್, ಸಂತೋಷ್ ಕುಮಾರ್, ಎಂ.ಮಹೇಂದ್ರ, ಕಾರ್ಯದರ್ಶಿ ಆಶಾದ್ ರೆಹಮಾನ್ ಷರೀಫ್, ಡಾ.ನಿಂಗರಾಜು ಆರ್ ಮತ್ತಿತರರು ಉಪಸ್ಥಿತರಿದ್ದರು.

andolanait

Recent Posts

ಜಾತೀಯತೆ ತೊಲಗಲಿ : ಡಾ.ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…

8 hours ago

ರಂಗಾಯಣ | ಐದು ದಿನಗಳ ʼನಿರಂತರ ರಂಗ ಉತ್ಸವʼಕ್ಕೆ ತೆರೆ

ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…

8 hours ago

ಭೀಕರ ಸರಣಿ ಅಪಘಾತ : ಇಬ್ಬರು ಸಾವು, 20ಕ್ಕೂ ಹೆಚ್ಚು ವಾಹನ ಹಾನಿ

ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…

8 hours ago

ವಿದ್ಯಾವಂತರಲ್ಲಿ ಹೆಚ್ಚುತ್ತಿರುವ ಮೌಢ್ಯತೆ, ಕಂದಾಚಾರ : ಸಿಎಂ ವಿಷಾದ

ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…

8 hours ago

ವಸ್ತುಪ್ರದರ್ಶನದಲ್ಲಿ ಜನಾಕರ್ಷಿಸಿದ ಚಿತ್ರ ಸಂತೆ

ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…

8 hours ago

ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕನಿಗೆ ಲುಕ್‌ಔಟ್‌ ನೋಟಿಸ್‌ ಜಾರಿ

ಬೆಂಗಳೂರು : ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…

8 hours ago