ಭಾರತೀನಗರ: ಇಲ್ಲಿಗೆ ಸಮೀಪದ ದೊಡ್ಡರಸಿನಕೆರೆ ಗ್ರಾಮದಲ್ಲಿ ನಡೆದಿದ್ದ ರೌಡಿಶೀಟರ್ ಅರುಣಾ ಅಲಿಯಾಸ್ ಕಪ್ಪೆ(೨೨) ಹತ್ಯೆ ಪ್ರಕರಣದ ೭ ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ದೊಡ್ಡರಸಿನಕೆರೆ ಗ್ರಾಮದ ದೊಡ್ಡಯ್ಯ, ದೇವರಾಜು, ಅಭಿ ಅಲಿಯಾಸ್ ಗಾಂಜಾ, ಪುಟ್ಟಸ್ವಾಮಿ ಅಲಿಯಾಸ್ ಬೆಲ್ಲ, ಅರವಿಂದ್, ಚಂದು ಅಲಿಯಾಸ್ ಚಂದ್ರು, ರಾಘವೇಂದ್ರ ಎಂಬವರು ಅರುಣ್‌ನನ್ನು ಹತ್ಯೆಗೈದು ತಲೆ ಮರೆಸಿಕೊಂಡಿದ್ದ
೭ ಮಂದಿ ಆರೋಪಿಗಳನ್ನು ೩ ದಿನಗಳ ಹಿಂದೆ ಕೆ.ಎಂ.ದೊಡ್ಡಿ ಪೊಲೀಸರು ಬಂಧಿಸಿದ್ದರು.
ಬಂಧಿಸಿದ ನಂತರ ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡ ಪೊಲೀಸರು ಮದ್ದೂರು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿ ನಂತರ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದರು.
ರೌಡಿ ಶೀಟರ್ ಅರುಣನ ಅತ್ಯೆ ನಡೆದಿದ್ದ ಸ್ಥಳ ಹಾಗೂ ಕೃತ್ಯಕ್ಕೆ ಬಳಸಿದ್ದ ವಸ್ತುಗಳನ್ನು ವಶಕ್ಕೆ ತೆಗೆದುಕೊಂಡು ಆರೋಪಿಗಳ ಸಮ್ಮುಖದಲ್ಲಿ ಮಹಜರು ನಡೆಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ವಿಕೋಪಕ್ಕೆ ತಿರುಗಿದ ಜಗಳ: ಹಳೆದ್ವೇಷದ ಹಿನ್ನೆಲೆಯಲ್ಲಿ ಅರುಣ ಹಾಗೂ ದೊಡ್ಡಯ್ಯ, ದೇವರಾಜು ಎಂಬವರ ನಡುವೆ ಕಳೆದ ಭಾನುವಾರ ಸಂಜೆ ಗ್ರಾಮದಲ್ಲಿ ಜಗಳ ನಡೆದಿತ್ತು. ಜಗಳ ವಿಕೋಪಕ್ಕೆ ತಿರುಗಿದ ಕಾರಣ ಅರುಣನ ಮುಖ ಮತ್ತು ಇತರ ಕಡೆಗಳಿಗೆ ದೇವರಾಜು ಮತ್ತು ದೊಡ್ಡಯ್ಯ ಹಲ್ಲೆ ನಡೆಸಿದ್ದರು. ಹಲ್ಲೆಯಿಂದಾಗಿ ಅರುಣನ ಮುಖದಲ್ಲಿ ಗಾಯಗಳಾಗಿದ್ದವು. ಮೂಗಿನಿಂದ ರಕ್ತ ಸೋರುತ್ತಿತ್ತು. ನಂತರ ಆತ ಕೆ.ಎಂ.ದೊಡ್ಡಿ ಆಸ್ಪತ್ರೆಗೆ ಬೈಕ್‌ನಲ್ಲಿ ಹೋಗುತ್ತಿದ್ದವನನ್ನು ಹಿಂಬಾಲಿಸಿದ ೭ ಮಂದಿಯೂ ಎತ್ತಿನ ಗಾಡಿಯ ಚಕ್ರಕ್ಕೆ ಸಿಲುಕಿಸುವ ಕೊಂಡಿಯಿಂದ ಅರುಣನ ಮೇಲೆ ಹಲ್ಲೆ ನಡೆಸಿದ್ದರು.
ತೀವ್ರವಾಗಿ ಗಾಯಗೊಂಡು ಅಸ್ವಸ್ಥನಾಗಿ ಕುಸಿದುಬಿದ್ದಿದ್ದ. ತಕ್ಷಣ ಸಾರ್ವಜನಿಕರು ಈತನನ್ನು ಭಾರತೀಗರದ ಜಿ. ವಾದೇಗೌಡ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅರುಣ ಸೋಮವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಈ ಸಂಬಂಧ ಕೆ.ಎಂ.ದೊಡ್ಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇಸ್ಲಾಮಾಬಾದ್: ಭಾರತದಲ್ಲಿ ಈ ಹಿಂದೆ ನಡೆದಿದ್ದ ಹಲವಾರು ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ…
ಮಡಿಕೇರಿ: ಸಿದ್ದಾಪುರದಿಂದ ಮೈಸೂರಿಗೆ ಸಂಪರ್ಕ ಕಲ್ಪಿಸುವ ಮಾಲ್ದಾರೆ ಗ್ರಾಮ ಸಮೀಪದ ಕುಶಾಲನಗರ ಹಾಗೂ ದೇವಮತಿ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರಿಗೆ ಹುಲಿಯೊಂದು…
ಬೆಂಗಳೂರು: ನಾನು ಬಿಜೆಪಿಗೆ ಮರಳುವ ಚಿಂತನೆ ಮಾಡಿಲ್ಲ. ಕಾಂಗ್ರೆಸ್‌ಗೆ ಹೋಗುತ್ತೇನೆ ಎಂದು ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…
ನಳಂದಾ: ಬಿಹಾರದ ನಳಂದಾ ಜಿಲ್ಲೆಯ ಶೀತಲಾ ದೇವಸ್ಥಾನದ ಧಾರ್ಮಿಕ ಸಮಾರಂಭವೊಂದರಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಂದಿ ಮಹಿಳೆಯರು ಸಾವನ್ನಪ್ಪಿದ್ದಾರೆ.…
ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ…
ಬೆಂಗಳೂರು: ಸೌದೆ ಮುಕ್ತ ಭಾರತ ಮಾಡ್ತೀವಿ ಎಂದು ಹೇಳಿ ಎಲ್ಲಾ ಕಡೆ ಗ್ಯಾಸ್ ತಂದರು. ಹಳ್ಳಿಗಳಲ್ಲೂ ಗ್ಯಾಸ್ ಬಂತು. ಈಗ…