ಮೈಸೂರು: ಮೂವರು ಸರಗಳ್ಳರನ್ನು ಬಂಧಿಸಿರುವ ಸರಸ್ವತಿಪುರಂ ಪೊಲೀಸರು 13 ಲಕ್ಷ ರೂ. ಮೌಲ್ಯದ 220 ಗ್ರಾಂ ಚಿನ್ನದ ಆಭರಣಗಳನ್ನು ಮತ್ತು ಎರಡು ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ.
ನಗರದ ಸರಸ್ವತಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಗಂಗೋತ್ರಿ ಬಡಾವಣೆಯ ಮಹಿಳೆಯೊಬ್ಬರು ಜ.23ರಂದು ಮಾರುತಿ ಟೆಂಪಲ್ ಬಳಿಯಿರುವ ಲಾಯಲ್‌ವರ್ಲ್ಡ್‌ನಲ್ಲಿ ಸಾಮಾಗ್ರಿಗಳನ್ನು ಖರೀದಿ ಮಾಡಿಕೊಂಡು ಹೋಗುತ್ತಿರುವಾಗ ಮಹಿಳೆಯ ಕುತ್ತಿಗೆಯಲ್ಲಿದ್ದ ಸುಮಾರು 30 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು ಖದೀಮರು ಕಸಿದು ಪರಾರಿಯಾಗಿದ್ದರು. ಈ ಸಂಬಂಧ ಸರಸ್ವತಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ ಸರಸ್ವತಿಪುರಂ ಪೊಲೀಸರು ಫೆ.2ರಂದು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 7 ಸರಗಳ್ಳತನ ಪ್ರಕರಣಗಳಿಗೆ ಸಂಬಂಧಪಟ್ಟಂತೆ ರೂ 13 ಲಕ್ಷ ರೂ. ಬೆಲೆ ಬಾಳುವ 220 ಗ್ರಾಂ ತೂಕದ ಚಿನ್ನದ ಸರಗಳು ಹಾಗೂ ಕೃತ್ಯಕ್ಕೆ ಬಳಸಿದ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಕಾರ್ಯಚರಣೆಯಿಂದ ಸರಸ್ವತಿಪುರಂ ಪೊಲೀಸ್ ಠಾಣೆಯ 3, ವಿಜಯನಗರ ಪೊಲೀಸ್ ಠಾಣೆಯ ೨, ವಿದ್ಯಾರಣ್ಯಪುರಂ ಠಾಣೆಯ, ಹೆಬ್ಬಾಳ್ ಠಾಣೆಯಲ್ಲಿ ತಲಾ 1 ಸರಗಳ್ಳತನ ಪ್ರಕರಣಗಳು ಪತ್ತೆಯಾಗಿವೆ.
ಡಿಸಿಪಿ ಎಸ್.ಜಾಹ್ನವಿ ಮತ್ತು ಎಸಿಪಿ ಎಸ್.ಇ.ಗಂಗಾಧರಸ್ವಾಮಿ ಮಾರ್ಗದರ್ಶನದಲ್ಲಿ ಪಿಐ
ಗೋವಿಂದರಾಜು, ಪಿಎಸ್‌ಐ ರಮೇಶ್, ಎಎಸ್‌ಐ ಚೌಡಪ್ಪ ಹಾಗೂ ಸಿಬ್ಬಂದಿ ಮೋಹನ್‌ಕುಮಾರ್,
ರಾಘವೇಂದ್ರ, ಉಮೇಶ್, ಹರೀಶ್‌ಕುಮಾರ್, ಕುಮಾರ್, ಮಂಜುನಾಥ್ ಮತ್ತು ಸಾಗರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…