ಮೈಸೂರು: ಮೈಸೂರು ಅರಮನೆಯಲ್ಲಿ ಆಯುಧಪೂಜೆಯ ಪೂಜಾ ಕೈಂಕರ್ಯ ಆರಂಭವಾಗಿದ್ದು, ಆನೆಬಾಗಿಲು ಮೂಲಕ ಪಟ್ಟದ ಆನೆ, ಕುದುರೆ, ಹಸುಗಳು ಬಂದಿವೆ. ಪಾರಂಪರಿಕ ಆಯುಧ ಪಲ್ಲಕ್ಕಿಯನ್ನು ರಾಜವಂಶಸ್ಥರು, ಅರಮನೆ ಸಿಬ್ಬಂದಿ ನೇತೃತ್ವದಲ್ಲಿ ತರಲಾಯಿತು. ಕೋಡಿಸೋಮೇಶ್ವರ ದೇಗುಲದಲ್ಲಿ ಪಾರಂಪರಿಕ ಆಯುಧಗಳನ್ನು ಅಲಂಕರಿಸಿದ ರಾಜಪುರೋಹಿತರು ವಿಶೇಷ ಪೂಜೆ ನೆರವೇರಿಸಲಾಯಿತು.
ಅರಮನೆ ನಗರಿಯಲ್ಲಿ ಆಯುಧಪೂಜೆಯ ಸಂಭ್ರಮ ಕಳೆಗಟ್ಟಿದೆ. ಬೆಳಗ್ಗೆ 6 ಗಂಟೆಯಿಂದಲೇ ಚಂಡಿ ಹೋಮದ ವಿಧಿಗಳು ಆರಂಭವಾಗಿದ್ದು, 9 ಗಂಟೆಗೆ ಚಂಡಿಹೋಮ ಪೂರ್ಣಾಹುತಿ ನಡೆಯಿತು. 11.02ರಿಂದ 11.25ರ ಶುಭ ಮುಹೂರ್ತದಲ್ಲಿ ಯದುವೀರ ಕೃಷದತ್ತ ಚಾಮರಾಜ ಒಡೆಯರ್ ಪೂಜೆ ಆಯುಧಗಳಿಗೆ ಪೂಜೆ ಸಲ್ಲಿಸಲಾಗುವುದು. ಇಂದು ರಾತ್ರಿ ಈ ವರ್ಷದ ಖಾಸಗಿ ದರ್ಬಾರ್ನ ಕೊನೆಯ ದಿನ. ದರ್ಬಾರ್ ನಂತರ ಸಿಂಹಾಸನದ ಸಿಂಹ ವಿಸರ್ಜಿಸಲಾಗುವುದು. ರಾತ್ರಿ ದೇವರ ಮನೆಯಲ್ಲಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಕಂಕಣ ವಿಸರ್ಜನೆ ಮಾಡಲಿದ್ದಾರೆ.
ಆನೆಗಳಿಗೆ ಚಿತ್ತಾರ
ಮೈಸೂರು ಅರಮನೆಯ ಪಟ್ಟದ ಆನೆಗಳಾದ ಭೀಮ ಮತ್ತು ಧನಂಜಯ್ಗೆ ಚಿತ್ತಾರದ ಅಲಂಕಾರ ಮಾಡಲಾಗಿದೆ. ಅರಮನೆಯ ಎರಡು ಹೆಣ್ಣು ಆನೆಗಳೂ ಕೋಡಿ ಸೋಮೇಶ್ವರ ದೇವಸ್ಥಾನಕ್ಕೆ ಆಗಮಿಸಿವೆ. ಪಟ್ಟದ ಆನೆಗಳ ಮೇಲೆ ಮೈಸೂರು ರಾಜಮನೆತನದ ಲಾಂಛನವಾದ ಗಂಡಬೇರುಂಡ, ಕಾಲುಗಳಿಗೆ ಎಲೆ ಬಳ್ಳಿ, ಕಿವಿಗಳಿಗೆ ಶಂಕು-ಚಕ್ರ, ಸೊಂಡಿಲಿಗೆ ಹೂ ಬಳ್ಳಿ ಚಿತ್ತಾರಗಳನ್ನು ಮೈಸೂರು ಮೂಲದ ಕಲಾವಿದ ರಾಜು ಬಿಡಿಸಿದ್ದಾರೆ.
ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ವಿಜಯದಶಮಿಯಂದು (ಅ 5) ನಡೆಯಲಿದೆ. ಮೆರವಣಿಗೆ ಸಾಗುವ ರಸ್ತೆ, ಪ್ರಮುಖ ಸ್ಥಳಗಳಲ್ಲಿ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ತಪಾಸಣೆ ನಡೆಸಿದರು.
ಲಕ್ಷಾಂತರ ಜನರು ಸೇರಬಹುದೆಂಬ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ ಮೈಸೂರು ನಗರದಾದ್ಯಂತ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಅರಮನೆಯಿಂದ ಜಂಬೂ ಸವಾರಿ ಹೊರಬರುವ ಬಲರಾಮ ಗೇಟ್ ಬಳಿ ಬಾಂಬ್ ಸ್ಕ್ವಾಡ್, ಶ್ವಾನದಳದಿಂದ ತಪಾಸಣೆ ನಡೆಸಲಾಗಿದೆ. ಕಸದ ಡಸ್ಟ್ಬಿನ್ ಸೇರಿದಂತೆ ಪ್ರತಿಯೊಂದು ವಸ್ತುವನ್ನೂ ಅರಮನೆ ಮೈದಾನದಿಂದ ಬನ್ನಿಮಂಟಪವರೆಗೂ ತಪಾಸಣೆ ನಡೆಸಲಾಯಿತು.
ಬೆಂಗಳೂರು: ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿಯು ಬೆಳಗಾವಿ ಚಲೋ ನಡೆಸಲು ಮುಂದಾಗಿದೆ. ಈ ಬಗ್ಗೆ…
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗದೊಂದಿಗೆ ಸಭೆ ನಡೆಸಿ ಕಾಂಗ್ರೆಸ್ ಸರ್ಕಾರ ರೈತರ…
ಹಾಸನ: ಈ ಜಿಲ್ಲೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬ ನೀಡಿದ ಕೊಡುಗೆ ಏನು ಎಂದು ಕೇಳಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ…
ಮೈಸೂರು: ಎಂಎಲ್‌ಸಿ ಸಿ.ಟಿ.ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಫೇಕ್ ಎನ್‌ಕೌಂಟರ್ ಮಾಡಲು ಯತ್ನಿಸಿದ್ದರು ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…
50 ವರ್ಷಗಳ ದೂರದೃಷ್ಟಿಯ ಡಿಪಿಆರ್ ಸಿದ್ಧ ಆಗಬೇಕು • ಭಾಮಿ ವಿ ಶೆಣೈ, ಮೈಸೂರು ಗ್ರಾಹಕರ ಪರಿಷತ್ ಮೈಸೂರು ಜಿಲ್ಲಾ…
ಹಾಸನ: ಸಿ.ಟಿ.ರವಿ ಪ್ರಕರಣದಲ್ಲಿ ಬೆಳಗಾವಿ ಪೊಲೀಸರು ನಡೆದುಕೊಂಡ ರೀತಿಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು;…