ಮೈಸೂರು :ನಗರದ ಪೊಲೀಸ್ ವಿಶೇಷ ವಿಭಾಗದ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಗೋಪಿನಾಥ್ ಅವರ ಮಗಳು ಗಿರಿಜಾಲಕ್ಷ್ಮಿ (19) ಆತ್ಮಹತ್ಯೆ ಮಾಡಿಕೊಂಡು ಸಾವಿಗೀಡಾಗಿದ್ದಾರೆ.
ಜಲಪುರಿ ಪೊಲೀಸ್ ವಸತಿಗೃಹದ ಸಿ.ಬ್ಲಾಕ್ ನಲ್ಲಿ ಗೋಪಿನಾಥ್ ನೆಲೆಸಿದ್ದು, ಸಂಜೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹೊರಹೋಗಿದ್ದ ಮನೆಯವರು ಸಂಜೆ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣವೇ ಆಕೆಯನ್ನು ಸಮೀಪದ ಗೋಪಾಲಗೌಡ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸುವ ಪ್ರಯತ್ನ ಮಾಡಿದರೂ, ಅಷ್ಟರ ವೇಳೆಗೆ ಪ್ರಾಣ ಹೋಗಿತ್ತು.
ಗಿರಿಜಾಲಕ್ಷ್ಮಿ ನಗರದ ಟೆರೇಷಿಯನ್ ಕಾಲೇಜಿನಲ್ಲಿ ಪ್ರಥಮ ಬಿಕಾಂ ಪದವಿ ವ್ಯಾಸಂಗ ಮಾಡುತ್ತಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಗಿರಿಜಾ ಮೃತದೇಹ ಕೆ.ಆರ್.ಆಸ್ಪತ್ರೆಯಲ್ಲಿ ಇದ್ದು, ನಾಳೆ ಮರಣೋತ್ತರ ಪರೀಕ್ಷೆ ಬಳಿಕ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಪ್ರಕರಣ ಕುರಿತು ನಜರ್ ಬಾದ್ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಐದು ದಿನಗಳ ಹಿಂದಷ್ಟೇ ಗೋಪಿನಾಥ್ ಅವರ ಅಣ್ಣ ವಿಧಿವಶರಾಗಿದ್ದರು. ಇದೀಗ ಈ ದುರಂತ ನಡೆದಿದೆ. ಆ ಕುಟುಂಬಕ್ಕೆ ಮೇಲಿಂದ ಮೇಲೆ ಅಘಾತವಾಗಿದೆ.
ಬೆಂಗಳೂರು: ಇಲ್ಲಿನ ಲಾಲ್‌ಬಾಗ್ ಉದ್ಯಾನವನದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡ ತೋಟಗಾರಿಕೆ ಇಲಾಖೆ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ಫಲಪುಷ್ಪ ಪ್ರದರ್ಶನ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಸಿದಂತೆ ಆರೋಪಿಗಳಾದ ಪವಿತ್ರಾ ಗೌಡ ಹಾಗೂ ದರ್ಶನ್ ಸೇರಿದಂತೆ ಡಿ ಗ್ಯಾಂಗ್‌ನ ಹಲವು…
ಮೈಸೂರು: ಒಂಟಿಕೊಪ್ಪಲ್‌ನ ಲಕ್ಷ್ಮೀ ವೆಂಕಟರಮಣ ಸ್ವಾಮಿ ಹಾಗೂ ವಿಜಯನಗರದ ಯೋಗಾನರಸಿಂಹ ಸ್ವಾಮಿ ದೇವಸ್ಥಾನ ಸೇರಿದಂತೆ ಹಲವು ಕಡೆಗಳಲ್ಲಿ ವೈಕುಂಠ ಏಕಾದಶಿ…
ಮೈಸೂರಿನ ಕುವೆಂಪುನಗರ, ಅರವಿಂದನಗರ, ಶ್ರೀರಾಂಪುರ, ಶಾರದಾದೇವಿ ನಗರ ಸೇರಿದಂತೆ ಹಲವು ಬಡಾವಣೆಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ರಾತ್ರಿಯಾಗುತ್ತಿದ್ದಂತೆ ಜನರು…
ರಾಜ್ಯ ಸರ್ಕಾರದ ವತಿಯಿಂದ ಕೆಎಸ್‌ಆರ್‌ಟಿಸಿ ನೌಕರರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಆರೋಗ್ಯ ಯೋಜನೆಗೆ ಸಿಎಂ ಸಿದ್ದರಾಮಯ್ಯನವರು ಇತ್ತೀಚೆಗೆ…
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ ಹದಿನಾರಕ್ಕೆ ಕಾಲಿಡುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ಸಾಂಸ್ಕೃತಿಕ ವೈಭವದ ಕೀರ್ತಿ ಪತಾಕೆಯನ್ನು ಎತ್ತಿ ಹಿಡಿಯುತ್ತಿರುವ ಈ ಉತ್ಸವಕ್ಕೆ…