ಗುಂಡ್ಲುಪೇಟೆ : ಕಾಂಗ್ರೆಸ್ ಪಕ್ಷದ ವತಿಯಿಂದ ಆಯೋಜನೆ ಮಾಡಲಾಗಿರುವ ಭಾರತ್ ಜೋಡೊ ಯಾತ್ರೆಯು ನಾಳೆ ಗುಂಡ್ಲುಪೇಟೆಯ ಮೂಲಕ ರಾಜ್ಯವನ್ನು ಪ್ರವೇಶ ಮಾಡಲಿದ್ದು, ಈ ಸಂಬಂಧವಾಗಿ ಕಾಂಗ್ರೆಸ್ ನಾಯಕರ ಫ್ಲೆಕ್ಸ್ ಗಳನ್ನು ಪಟ್ಟಣದಾದ್ಯಂತ ಹಾಕಲಾಗಿದ್ದು, ಇಂದು ಬೆಳ್ಳಂಬೆಳಿಗ್ಗೆ ಕಿಡಿಗೇಡಿಗಳು ಫ್ಲೆಕ್ಸ್ ಹಾಕುವ ಮೂಲಕ ಹರಿದು ಹಾಕಲಾಗಿತ್ತು.
ಈ ಸಂಬಂಧವಾಗಿ ಚಾಮರಾಜನಗರ ಜಿಲ್ಲೆಯ ಬಿಜೆಪಿ ಜಿಲ್ಲಾ ಯೂವ ಮೋರ್ಚಾಅಧ್ಯಕ್ಷ ಪ್ರಣಯ್ ಅವರು ಕುಮ್ಮಕ್ಕು ನೀಡುತಲಿದ್ದು, ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆಂದು ಪ್ರಣಯ್ ಅವರ ಮೇಲೆ ಆರೋಪಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಬಿಜೆಪಿ ಜಿಲ್ಲಾಧ್ಯಕ್ಷ ಪ್ರಣಯ್ ಅವರು ಫ್ಲೆಕ್ಸ್ಗಳಿಗೆ ಬ್ಲೇಡ್ ಹಾಕಿರುವ ಸಂಬಂಧ ದೂರು ದಾಖಲಾಗಿರವುದರ ಕುರಿತು ಪೊಲೀಸಿನವರು ಕ್ರಮ ಕೈಗೊಂಡು ಕಿಡಿಗೇಡಿಗಳನ್ನು ಬಂಧಿಸುತ್ತಾರೆ, ಅವರ ಮೇಲೆ ಸೂಕ್ತ ಕಾನೂಕು ಕ್ರಮಗಳನ್ನು ಕೈಗೊಳ್ಳುತ್ತಾರೆ, ಅಂತಹ ಹೇಯ ಹಾಗೂ ಲಜ್ಜೆಗೆಟ್ಟ ಕೆಲಸವನ್ನು ಸಾಮಾನ್ಯ ಕಾರ್ಯಕರ್ತರು ಮಾಡುವುದಿಲ್ಲ. ಫ್ಲೆಕ್ಸ್ಗಳನ್ನು ಹರಿದು ಹಾಕಿರುವ ಕೆಲಸ ಯಾರೇ ಮಾಡಿದರು ಅದು ತಪ್ಪು ಅಂತವರಿಗೆ ಶಿಕ್ಷೆಯಾಗಲಿ,ಅದು ಬಿಟ್ಟು ಆರೋಪವನ್ನು ಮಾಡುವುದು, ಕುಮ್ಮಕ್ಕು ಮಾಡುತ್ತಿದ್ದಾರೆನ್ನುವುದು ತಪ್ಪು, ನನ್ನನ್ನು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವ ಮತ್ತು ಉಳಿಸುವ ಬಗ್ಗೆ ನನ್ನ ಪಕ್ಷ ತೀರ್ಮಾನ ಮಾಡುತ್ತದೆ. ಅದು ಪಕ್ಷಕ್ಕೆ ಬಿಟ್ಟ ವಿಚಾರ ಎಂದು ತಿಳಿಸಿದ್ದಾರೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…