ಮೈಸೂರು ನಗರಪಾಲಿಕೆ ವ್ಯಾಪ್ತಿಯ ೧೦ ಕಿ.ಮೀ. ಒಳಗೆ ಅನುಮತಿ ಇಲ್ಲ
ಬೆಂಗಳೂರು; ನಗರಗಳು ಮತ್ತು ನಗರ ಪುರಸಭೆ ಪರಿಮಿತಿಯೊಳಗೆ ಬಗರ್ ಹುಕುಂ ಭೂಮಿ ಮಂಜೂರು ಮಾಡದಿರುವಂತೆ ಕರ್ನಾಟಕದ ಕಂದಾಯ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ಕಂದಾಯ ಇಲಾಖೆಯ ಕಾರ್ಯದರ್ಶಿ ಎನ್. ಜಯರಾಮ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ನಿರ್ದಿಷ್ಟಪಡಿಸಿರುವ ಪರಿಮಿತಿಯ ಅಂತರದೊಳಗೆ ಬರುವ ಭೂಮಿಯನ್ನು ಮಂಜೂರು ಮಾಡತಕ್ಕದ್ದಲ್ಲ ಎಂದು ಸೂಚನೆ ನೀಡಲಾಗಿದೆ.
ಕರ್ನಾಟಕ ಭೂ ಕಂದಾಯ ಕಾಯ್ದೆ ೧೯೬೪ರ ಕಲಂ ೯೪(ಎ)ರನ್ವಯ ವಿಧಾನಸಭಾ ಕ್ಷೇತ್ರವಾರು ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಗಳನ್ನು ರಚಿಸಿ, ಅವುಗಳ ಮುಖಾಂತರ ಕರ್ನಾಟಕ ಭೂ ಕಂದಾಯ ಕಾಯ್ದೆ, ೧೯೬೪ರ ಕಲಂ ೯೪ಎ, ೯೪ಬಿ ಹಾಗೂ ೯೪ಎ(೪)ರಡಿ ಮಂಜೂರು ಮಾಡಲು ಅವಕಾಶವಿರುತ್ತದೆ.
ಅದರಂತೆ, ರಚಿತವಾದ ಸಮಿತಿಗಳು ಕಲಂ ೯೪ಎ(೪)ರನ್ವಯ ನಗರಗಳು ಮತ್ತು ನಗರ ಪುರಸಭೆಗಳ ಪರಿಮಿತಿಯೊಳಗೆ ಬರುವ ಪ್ರದೇಶಗಳಲ್ಲಿ ನಿರ್ದಿಷ್ಟಪಡಿಸಿರುವ ಪರಿಮಿತಿಗಳಿಂದ ಅಂತರದೊಳಗೆ ಬರುವ ಭೂಮಯನ್ನು ಮಂಜೂರು ಮಾಡತಕ್ಕದ್ದಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆದೇಶವನ್ನು ಕಳಿಸಲಾಗಿದ್ದು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹಾಗೂ ಅದರ ಸರಹದ್ದಿನಿಂದ ನಿರ್ಬಂಧಿಸಿರುವ ಅಂತರದ ಒಳಗೆ ಇರುವ ಜಮೀನುಗಳನ್ನು ಸಕ್ರಮಗೊಳಿಸುವುದು ಕಾನೂನು ಬಾಹಿರವೆಂದು ಸರ್ಕಾರದ ಸುತ್ತೋಲೆಯಲ್ಲಿ ತಿಳಿಸಲಾಗಿರುತ್ತದೆ.
ಎಲ್ಲಿ ಎಷ್ಟು ವ್ಯಾಪ್ತಿ?
* ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಅಂತರ ೧೮ ಕಿ.ಮೀ.
* ಮೈಸೂರು, ಬೆಳಗಾವಿ, ಕಲಬುರಗಿ, ಹುಬ್ಬಳ್ಳಿ- ಧಾರವಾಡ, ಮಂಗಳೂರು ನಗರ ಪಾಲಿಕೆಗಳ ೧೦ ಕಿ.ಮೀ.
* ಎಲ್ಲಾ ನಗರ ಪೌರಸಭೆಗಳು ೫ ಕಿ.ಮೀ.
* ಎಲ್ಲಾ ಪೌರಸಭೆಗಳು ಮತ್ತು ಪಟ್ಟಣ ಪಂಚಾಯಿತಿಗಳು ೩ ಕಿ.ಮೀ.
ಬಿಬಿಎಂಪಿ/ ನಗರ/ ನಗರ ಪೌರಸಭೆ/ ಪಟ್ಟಣ ಪಂಚಾಯಿತಿಗಳ ಪರಿಮಿತಿಯಲ್ಲಿ ಬರುವ ಜಮೀನುಗಳನ್ನು ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯ ಅಕ್ರಮವಾಗಿ ಮಂಜೂರು ಮಾಡಿದಲ್ಲಿ ಅಂತಹ ಜಮೀನುಗಳನ್ನು ಕರ್ನಾಟಕ ಭೂ ಕಂದಾಯ ನಿಯಮಗಳು, ೧೯೬೬ರ ನಿಯಮ ೧೦೮(ಕೆ) ರನ್ವಯ ರದ್ದುಗೊಳಿಸಿ ಒಂದು ತಿಂಗಳೊಳಗಾಗಿ ವರದಿ ಸಲ್ಲಿಸಬೇಕು.
-ಎನ್.ಜಯರಾಮ್, ಕಂದಾಯ ಇಲಾಖೆಯ ಕಾರ್ಯದರ್ಶಿ
ಮೈಸೂರು: ಕ್ರಿಸ್‌ಮಸ್ ಆಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದ್ದರೆ, ಚರ್ಚ್‌ಗಳ ಅಂಗಳವನ್ನು ವಿದ್ಯುತ್ ದೀಪಗಳಿಂದ ಸಿಂಗರಿಸುವ ಕಾರ್ಯ…
ಕೆ.ಬಿ.ರಮೇಶನಾಯಕ ಟಿಎಚ್‌ಒ ಹುದ್ದೆಗೆ ಡಿಎಚ್‌ಒ ವರ್ಗಾವಣೆ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ…
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…