ಶಿವಮೊಗ್ಗ : ಹಿರಿಯ ಸಾಹಿತಿ ಭಗವಾನ್ ಅವರನ್ನು ದೂರಿನ ವಿಚಾರಣೆಗೆ ಸಂಬಂಧಪಟ್ಟಂತೆ ಕೋರ್ಟಿಗೆ ಹಾಜರುಪಡಿಸಬೇಕೆಂದು ಮೈಸೂರು ಎಸ್ಪಿಗೆ ಸಾಗರ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಭಗವಾನ್ ಅವರು ಬರೆದಿರುವ ರಾಮ ಮಂದಿರ ಏಕೆ ಬೇಡ ಎಂಬ ಕೃತಿಗೆ ಸಂಬಂಧಪಟ್ಟಂತೆ ಕೃತಿಯ ವಿರುದ್ಧವಾಗಿ ಸಾಗರ ತಾಲೂಕಿನ ಇಕ್ಕೇರಿಯ ಸಂಘ ಪರಿವಾರದ ಮಹಾಬಲೇಶ್ವರ್ ಎಂಬುವರು ನೀಡಿರುವ ದೂರಿನ ವಿಚಾರಣೆಗೆ ಸಂಬಂಧಪಟ್ಟಂತೆ ಭಗವಾನ್ ಅವರು ನ್ಯಾಯಾಲಯಕ್ಕೆ ಹಾಜರಾಗದ ಕುರಿತು ಪೊಲೀಸರ ವಿರುದ್ಧ ಸಾಗರದ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಸಾಗರದ ಜೆಎಂಎಫ್‌ಸಿ ನ್ಯಾಯಾಲಯ ಸಾಹಿತಿ ಭಗವಾನ್ ರನ್ನು ಕೋರ್ಟಿಗೆ ಹಾಜರುಪಡಿಸಬೇಕೆಂದು ಎಸ್ ಪಿ ಗೆ ನೋಟಿಸ್ ನೀಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗಾಗಿ ಸಾಗರ ಕೋರ್ಟ್ 30- 8 -2022 ರಂದು ಭಗವಾನ್ ರನ್ನು ಕೋರ್ಟಿಗೆ ಹಾಜರಾಗಲು ನೋಟಿಸ್ ಜಾರಿ ಮಾಡಿತ್ತು. ಆದರೆ ಸಾಗರದ ಟೌನ್ ಪೋಲೀಸರು ಸಾಹಿತಿ ಭಗವಾನ್ ಅವರಿಗೆ ನೋಟಿಸ್ ಜಾರಿ ಮಾಡಿದ ಹಿನ್ನೆಲೆಯಲ್ಲಿ ನ್ಯಾಯಾಲಯದ ನ್ಯಾಯಾಧೀಶರು ಮೈಸೂರಿನ ಎಸ್ ಪಿ ಗೆ 2-11-2022 ರಂದು ಭಗವಾನ್ ಅವರನ್ನು ಕೋಟಿಗೆ ಹಾಜರುಪಡಿಸುವಂತೆ ನೋಟಿಸ್ ಜಾರಿ ಮಾಡಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…