ಜಿಲ್ಲೆಗಳು

ಬಂಡೀಪುರ ನಿರ್ಬಂಧಿತ ಪ್ರದೇಶದಲ್ಲಿ ಯುವಕರ ಮೋಜು-ಮಸ್ತಿ

ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಅರಣ್ಯದ ನಿರ್ಬಂಧಿತ ಪ್ರದೇಶದ ಸೂಕ್ಷ್ಮ ಅರಣ್ಯ ಪರಿಸರ ವ್ಯಾಪ್ತಿಗೆ ಒಳಪಡುವ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಲ್ಲಿರುವ ಹಿರೀಕೆರೆಯಲ್ಲಿ ಯುವಕರು ಕುಡಿದು ಮೋಜು-ಮಸ್ತಿಯಲ್ಲಿ ತೊಡಗಿಕೊಂಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

ಹಿರೀಕೆರೆಯು ಅಭಯಾರಣ್ಯ ವ್ಯಾಪ್ತಿಗೆ ಒಳಪಡುವ ಕಾರಣ ಈ ಪ್ರದೇಶಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರಾಕರಿಸಲಾಗಿದೆ. ಆದರೆ ಕೆರೆ ವೀಕ್ಷಣೆ ಮಾಡುವ ನೆಪದಲ್ಲಿ ಕೋಡಿ ಸ್ಥಳದಲ್ಲಿ ಕುಳಿತು ಮದ್ಯ ಸೇವಿಸಿದ್ದಾರೆ.

ನಿರ್ಬಂಧಿತ ಪ್ರದೇಶ: ಗೋಪಾಲಸ್ವಾಮಿ ಬೆಟ್ಟ ವಲಯ ವ್ಯಾಪ್ತಿಗೆ ಬರುವ ಹಿರೀಕೆರೆ ಸೂಕ್ಷ್ಮ ಪರಿಸರ ಪ್ರದೇಶವಾಗಿರುವ ಹಿನ್ನೆಲೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಲಾಗಿದೆ. ಸ್ಥಳೀಯರು ಮತ್ತು ಕೆರೆ ವೀಕ್ಷಣೆಗೆ ಇತರೆಡೆಯಿಂದ ಬರುವ ಪ್ರವಾಸಿಗರು ಕೆರೆಗೆ ನೋಡಲು ತೆರಳಿದ ವೇಳೆ ಅರಣ್ಯ ಸಿಬ್ಬಂದಿ ಒಳಗೆ ಬಿಡುವುದಿಲ್ಲ. ಹೀಗಿದ್ದರೂ ಮೋಜು ಮಸ್ತಿ ಮಾಡಲು ಅನುಮತಿ ನೀಡಿದವರು ಯಾರು? ಎಂಬ ಪ್ರಶ್ನೆ ಎದ್ದಿದೆ.

ಬಂಡೀಪುರ ಅಭಯಾರಣ್ಯದ ವಾಹನಗಳನ್ನು ಹೊರತುಪಡಿಸಿದ ಹಿರೀಕೆರೆ ಸೂಕ್ಷ್ಮ ಪರಿಸರ ವಲಯದಲ್ಲಿ ಖಾಸಗಿ ವ್ಯಕ್ತಿಗಳ ಬೈಕ್, ಕಾರು ಸೇರಿದಂತೆ ಇನ್ನಿತರ ವಾಹನಗಳು ತೆರಳಲು ಅವಕಾಶವಿಲ್ಲ. ಆದರೆ ಅಧಿಕಾರಿಗಳ ಕೃಪಕಟಾಕ್ಷದಿಂದ ಕೆಲವು ಮಂದಿ ತಮ್ಮ ವಾಹನದ ಸಮೇತ ಬೀಡುಬಿಟ್ಟು ಮಸ್ತಿಯಲ್ಲಿ ತೊಡಗುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅರಣ್ಯಾಧಿಕಾರಿಗಳ ಈ ನಿರ್ಲಕ್ಷ್ಯವನ್ನು ಕಂಡು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

andolanait

Recent Posts

ಶ್ರೀ ಮುತ್ತಪ್ಪ ಭಗವತಿ ದೇವಾಲಯದ ವಾರ್ಷಿಕೋತ್ಸವಕ್ಕೆ ತೆರೆ

ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…

4 hours ago

ಹನೂರು| ಆಕಸ್ಮಿಕ ಬೆಂಕಿ ತಗುಲಿ ಜೋಳದ ಮೆದೆ ಸಂಪೂರ್ಣ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…

4 hours ago

ಗಾಂಜಾ ಮಾರಾಟ, ಸೇವನೆ: ಪ್ರತ್ಯೇಕ ಪ್ರಕರಣದಲ್ಲಿ ನಾಲ್ವರ ಬಂಧನ

ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…

4 hours ago

ಹನೂರು| ತಾಲ್ಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…

4 hours ago

ಟಿ.ನರಸೀಪುರ: ಕೆಎಸ್‌ಐಸಿ ಫ್ಯಾಕ್ಟರಿ ಆವರಣದಲ್ಲಿ ಸ್ಟೇಡಿಯಂ ನಿರ್ಮಿಸುವ ಪ್ರಸ್ತಾವನೆ: ಬೀದಿಗಿಳಿದ ಕಾರ್ಮಿಕರು

ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್‌ಐಸಿ ಫಿಲೇಚರ್‌ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…

5 hours ago

ಕೇರಳ ಇನ್ನು ಮುಂದೆ ಕೇರಳಂ: ಹೆಸರು ಬದಲಾವಣೆಗೆ ಕೇಂದ್ರ ಸರ್ಕಾರ ಅಸ್ತು

ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…

5 hours ago