ಜಿಲ್ಲೆಗಳು

ಬನ್ನಹಳ್ಳಿ ಹುಂಡಿ ಸರ್ಕಾರಿ ಶಾಲೆ ಆವರಣದಲ್ಲಿ ಮಿನಿ ಕೆರೆ

ಶಾಲೆಯಲ್ಲಿ ಓದುತ್ತಿರುವ 133 ಮಕ್ಕಳಿಗೆ ಸಮಸ್ಯೆ; ಮಳೆ ನೀರು ಹರಿದುಹೋಗಲು ಸಮರ್ಪಕ ವ್ಯವಸ್ಥೆ ಮಾಡಲು ಆಗ್ರಹ

ಎಂ.ನಾರಾಯಣ

ತಿ.ನರಸೀಪುರ: ತಾಲ್ಲೂಕಿನ ಬನ್ನಹಳ್ಳಿ ಹುಂಡಿ ಗ್ರಾಮದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಮಳೆ ನೀರು ಕೆರೆಯಂತೆ ನಿಂತಿರುವುದರಿಂದ ಶಾಲಾ ಮಕ್ಕಳಿಗೆ ತೀವ್ರ ತೊಂದರೆ ಎದುರಾಗಿದೆ.

ತಾಲ್ಲೂಕಿನಿಂದ ಸುಮಾರು 4 ಕಿ.ಮೀ.ಹೊರಗಿರುವ ನಂಜನಗೂಡು ರಸ್ತೆಯಲ್ಲಿ ನಿರ್ಮಾಣವಾಗಿರುವ ಶಾಲೆಯಲ್ಲಿ 9 ಮತ್ತು 10 ನೇ ತರಗತಿಯ 133 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, 7 ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇತ್ತೀಚೆಗೆ ತಾಲ್ಲೂಕಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಶಾಲಾ ಆವರಣದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ನೀರು ಕೆರೆಯಂತೆ ಶೇಖರಣೆಯಾಗಿ ಸಮಸ್ಯೆ ಉಂಟಾಗಿದೆ.


ಶಾಲೆಯು ರಸ್ತೆ ಮಟ್ಟಕ್ಕಿಂತ ಕೆಳ ಹಂತದಲ್ಲಿ ನಿರ್ಮಾಣವಾಗಿರುವುದರಿಂದ ಸಮಸ್ಯೆ ಎದುರಾಗಿದೆ. ಶಾಲೆಯು ಅನೇಕ ವರ್ಷಗಳ ಹಿಂದೆೆಯೇ ನಿರ್ಮಾಣವಾಗಿದ್ದರೂ, ಕೆಲ ವರ್ಷಗಳ ಹಿಂದೆ ರಸ್ತೆಯನ್ನು ಎತ್ತರಿಸಿ ಅಭಿವೃದ್ಧಿಪಡಿಸಿದ ಹಿನ್ನೆಲೆಯಲ್ಲಿ ಶಾಲೆ ಮತ್ತಷ್ಟು ಆಳಕ್ಕೆ ಇಳಿದಿದೆ. ಬಿದ್ದ ಮಳೆ ನೀರು ಹೋಗಲು ಚರಂಡಿ ವ್ಯವಸ್ಥೆ ಸಮರ್ಪಕವಾಗಿ ಮಾಡದ ಹಿನ್ನೆಲೆಯಲ್ಲಿ ಮಳೆಯಿಂದ ಬಿದ್ದ ನೀರೆಲ್ಲಾ ಇಳಿಜಾರಿನಲ್ಲಿ ಇಳಿದು ಶಾಲಾ ಆವರಣದಲ್ಲಿ ಶೇಖರಣೆಯಾಗುತ್ತಿದೆ.
ಈ ಸಮಸ್ಯೆ ಹೊಸದೇನಲ್ಲ. ಕಳೆದ ಹಲವಾರು ವರ್ಷಗಳಿಂದಲೂ ಇದೇ ತೊಂದರೆ ಎದುರಾಗುತ್ತಿದ್ದರೂ ಜನಪ್ರತಿನಿಧಿಗಳು ಸಮಸ್ಯೆ ಬಗೆಹರಿಸುವ ಗೋಜಿಗೆ ಹೋಗಿಲ್ಲದಿರುವುದು ಮಕ್ಕಳ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ಶಾಲೆಯ ಮುಂಭಾಗದ ಆವರಣದಲ್ಲಿ 15 ಅಡಿ ಆಳದ ಜಾಗವೊಂದಿದ್ದು, ಮಳೆ ಬಿದ್ದ ವೇಳೆ ಆಳದಲ್ಲಿ ನೀರು ತುಂಬಿ ಹೆಚ್ಚುವರಿ ನೀರು ಶಾಲೆಯ ಮುಂಭಾಗದಲ್ಲಿ ಬಂದು ನಿಲ್ಲುತ್ತದೆ.ಹಳ್ಳದಿಂದ ನೀರು ಹೋಗಲು ಚರಂಡಿ ಇಲ್ಲದ ಕಾರಣ ತುಂಬಿದ ನೀರು ರೈತರ ಜಮೀನಿನ ಮೇಲೆ ಹರಿದು ಹೋಗುವುದರಿಂದ ರೈತರು ಇದಕ್ಕೆ ಅವಕಾಶ ನೀಡುತ್ತಿಲ್ಲ ಎಂಬುದು ಮತ್ತೊಂದು ಸಮಸ್ಯೆಯಾಗಿ ಪರಿಣಮಿಸಿದೆ.
ಶಾಲೆಯ ಆವರಣದಲ್ಲಿ ನೀರು ಕೆರೆಯಂತೆ ನಿಂತಿರುವುದರಿಂದ ಶಾಲಾ ಮಕ್ಕಳು ಓಡಾಡುವ ವೇಳೆ ಯಾವುದಾದರೂ ಅನಾಹುತ ಸಂಭವಿಸಬಹುದೆನ್ನುವ ಆತಂಕ ಪೋಷಕರು ಮತ್ತು ಶಾಲೆಯ ಶಿಕ್ಷಕರದ್ದಾಗಿದೆ. ಶಾಲೆಯ ಆಡಳಿತ ಮಂಡಳಿಯು ಸಮಸ್ಯೆ ಸರಿಪಡಿಸುವಂತೆ ಸಂಬಂಧಿಸಿದ ಇಲಾಖೆಗೆ ಮನವಿ ಮಾಡಿದ್ದರೂ ಪ್ರೋಂಜನವಾಗಿಲ್ಲ. ಶಾಲಾ ಆವರಣದಲ್ಲಿ ನಿಂತಿರುವ ನೀರು ಅಲ್ಲಿಂದ ಸುಲಲಿತವಾಗಿ ಹೊರಹೋಗಲು ಅನುಸರಿಸಬೇಕಾದ ಕ್ರಮದ ಬಗ್ಗೆ ಗಮನ ಹರಿಸಬೇಕಾದ ಅವಶ್ಯಕತೆ ಇದೆ ಅಥವಾ ನೀರು ನಿಲ್ಲುತ್ತಿರುವ ತಗ್ಗು ಪ್ರದೇಶಕ್ಕೆ ಮಣ್ಣು ತುಂಬಿ ಸ್ಥಳವನ್ನು ಎತ್ತರಿಸಬೇಕಾಗಿದೆ. ಇವೆರಡರ ಹೊರತು ಸಮಸ್ಯೆ ಬಗೆಹರಿಸಲು ಯಾವುದೇ ಅನ್ಯ ದಾರಿ ಇಲ್ಲದಂತಾಗಿದೆ.

ಕೊಠಡಿಗಳ ಸ್ಥಳಾಂತರ: ಮಳೆಯ ನೀರು ಶಾಲೆಯ ಕೊಠಡಿಯ ಮುಂಭಾಗದಲ್ಲೇ ಶೇಖರಣೆಯಾಗಿ ಕೆರೆಯಂತಾಗಿರುವುದನ್ನು ಗಮನಿಸಿದ ಬಿಇಓ ಮರಿಸ್ವಾಮಿ,ಮಳೆ ನೀರು ನಿಂತಿರುವ ಸ್ಥಳದಲ್ಲಿದ್ದ ಕೊಠಡಿಗಳಿಂದ ವಿದ್ಯಾರ್ಥಿಗಳನ್ನು ಬೇರೆ ಕೊಠಡಿಗೆ ಸ್ಥಳಾಂತರ ಮಾಡುವಂತೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಠಿಯನ್ನು ಗಮನದಲ್ಲಿಟ್ಟುಕೊಂಡು ಬೇರೆ ಕೊಠಡಿಗೆ ಸ್ಥಲಾಂತರಿಸಲಾಗಿದೆ ಎಂದು ಶಾಲೆಯ ಮುಖ್ಯೋಪಾಧ್ಯಾಯ ಮಂಟೇಸ್ವಾಮಿ ಪತ್ರಿಕೆಗೆ ಮಾಹಿತಿ ನೀಡಿದರು.

ಇಓ, ಪಿಡಿಓ ಭೇಟಿ; ಭರವಸೆ
ಸಮಸ್ಯೆ ಬಗೆಹರಿಸುವ ಶಾಲೆಗೆ ಭೇಟಿ ನೀಡಿದ್ದ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಕೃಷ್ಣ, ಕರೋಹಟ್ಟಿ ಗ್ರಾ.ಪಂ. ಪಿಡಿಓ ಲಿಂಗರಾಜು ಅವರಿಗೆ ನೀರನ್ನು ಹೊರಹಾಕಲು ಅಗತ್ಯ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.ಜಿ.ಪಂ.ಯಿಂದ ನೀರು ನಿಲ್ಲುವ ಸ್ಥಳಕ್ಕೆ ಮಣ್ಣು ತುಂಬಿಸಿ ಸಮತಟ್ಟು ಮಾಡಲು ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

andolanait

Recent Posts

ವಾಹನ ಸವಾರರ ಗಮನಕ್ಕೆ ; ಏಪ್ರಿಲ್‌ 1 ರಿಂದ ಟೋಲ್‌ಗಳಲ್ಲಿ ಇಲ್ಲ ನಗದು ಪಾವತಿ

ಹೊಸದಿಲ್ಲಿ : ಮುಂಬರುವ ಏಪ್ರಿಲ್‌ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…

45 mins ago

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಗಂಭೀರ ; ಅರಣ್ಯ ಇಲಾಖೆ ಸಿಬ್ಬಂದಿಗೂ ಗಾಯ

ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…

3 hours ago

ಫೆ.28ರಿಂದ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…

3 hours ago

ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…

3 hours ago

ಸ್ನೇಹಮಯಿ ಕೃಷ್ಣ ಮನೆಯಲ್ಲಿ ಸಿಸಿಬಿ ಪೊಲೀಸರಿಂದ ತಲಾಶ್‌ ; ಮಹತ್ವದ ದಾಖಲೆ ಲಭ್ಯ

ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…

3 hours ago

ಹುಲಿ ಕಳೇಬರ ಪತ್ತೆ ಪ್ರಕರಣ : ಓರ್ವ ಬಂಧನ

ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…

3 hours ago