ಜಿಲ್ಲೆಗಳು

ಬನ್ನೇರುಘಟ್ಟ ಮೃಗಾಲಯ : ವಿಚಿತ್ರ ಸೋಂಕು ತಗುಲಿ 3 ಹುಲಿಗಳ ಸಾವು

ಆನೇಕಲ್: ಭಾರತದಲ್ಲಿರುವ ಮೃಗಗಳ ಜೀವಕ್ಕೆ ಸೋಂಕಿನ ಭೀತಿ ಎದುರಾಗಿದ್ದು, ಮೃಗಾಲಯದಲ್ಲಿನ ಹುಲಿಗಳು ಸಾವನ್ನಪ್ಪುತ್ತಿವೆ. ಬೆಂಗಳೂರಿನ ದಕ್ಷಿಣ ಭಾಗದಲ್ಲಿ ಸುಮಾರು 22ಕಿ.ಮೀ ದೂರದಲ್ಲಿರುವ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಕಳೆದ ಮೂರು ತಿಂಗಳಲ್ಲಿ ಮೂರು ಹುಲಿಗಳು ಸಾವನ್ನಪ್ಪಿವೆ. ಮೃಗಾಲಯದಲ್ಲಿನ ಬೆಂಗಾಲ್ ಟೈಗರ್​ಗಳಿಗೆ ವಿಚಿತ್ರ ಸೋಂಕು ತಗುಲಿದ್ದು, ಬ್ಯಾರೆಕ್ ಒಳಗಡೆ ಹರಡಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೆ ಇತರ ಹುಲಿಗಳಿಗೂ ಸೋಂಕು ಹರಡುವ ಭೀತಿ ಎದುರಾಗಿದೆ.
ಒಂದೆಡೆ ಭಾರತಕ್ಕೆ ವಿದೇಶಗಳಿಂದ ವನ್ಯ ಪ್ರಾಣಿಗಳನ್ನು ತರಲಾಗುತ್ತಿದೆ. ಇದು ಒಳ್ಳೆಯ ಕೆಲಸವಾಗಿದ್ದರೂ ಕೆಲವು ಮೃಗಾಲಯಗಳಲ್ಲಿ ಪ್ರಾಣಿಗಳ ಆರೋಗ್ಯವನ್ನು ನಿರ್ಲಕ್ಷ್ಯಿಸಲಾಗುತ್ತಿದೆ ಎಂಬ ಅನುಮಾನ ಹುಟ್ಟುಹಾಕಿದೆ. ಇದಕ್ಕೆ ಬನ್ನೇರುಘಟ್ಟ ಜೈವಿಕ ಉದ್ಯಾನವನದ ಹುಲಿ ಸಾವುಗಳೇ ಸಾಕ್ಷಿ ಎಂಬಂತಿದೆ. ಮೂರು ವರ್ಷ ಕಿರಣ್, ಐದು ವರ್ಷದ ಶಿವು ಸೇರಿದಂತೆ ಒಟ್ಟು ಮೂರು ಹುಲಿಗಳು ಕಳೆದ ಮೂರು ತಿಂಗಳಲ್ಲಿ ಸಾವನ್ನಪ್ಪಿವೆ.
ಸದ್ಯ ಹುಲಿಗಳ ಸಾವಿನ ಪರಿಣಾಮ ದೇಶದಲ್ಲಿ ಹುಲಿಗಳ ಸಂಖ್ಯೆಯಲ್ಲಿ ಕಡಿಮೆಯಾಗುತ್ತಿದೆ. ಹುಲಿಗಳ ಆರೋಗ್ಯಕ್ಕಾಗಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡಲಾಗುತ್ತದೆ. ಹಲವು ಗಣ್ಯ ವ್ಯಕ್ತಿಗಳು ಕೆಲವೊಂದು ಹುಲಿಗಳನ್ನು ದತ್ತು ತೆಗೆದುಕೊಂಡಿದ್ದಾರೆ. ಆದರೆ ಹುಲಿಗಳ ಸಾವುಗಳನ್ನು ನೋಡಿದಾಗ ಹುಲಿಗಳಿಗೆ ಮಾಡಬೇಕಾದ ವ್ಯವಸ್ಥೆ ಕುಂಠಿತವಾಗಿದೆಯೇ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಹೊಟ್ಟೆ ನೋವು, ಅಜೀರ್ಣ, ಮಲಬದ್ಧತೆಯಿಂದ ನರಳಿದ್ದ ಹುಲಿಗಳ ಆರೋಗ್ಯದ ಬಗ್ಗೆ ಪಾರ್ಕ್ ಆಡಳಿತ ಮಂಡಳಿ ಅಷ್ಟಾಗಿ ತಲೆ ಕೆಡಿಸಿಕೊಳ್ಳದಿರುವುದು ಬೇಸರದ

andolanait

Recent Posts

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

27 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

1 hour ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

4 hours ago