ಜಿಲ್ಲೆಗಳು

ನಾಡಹಬ್ಬ ಯಶಸ್ಸುಗೊಳಿಸಿದ್ದಕ್ಕೆ ಜಿಲ್ಲಾಡಳಿತ, ಜನಪ್ರತಿನಿಧಿಗಳು, ಉಪ ಸಮಿತಿ ಸದಸ್ಯರಿಗೆ ಔತಣಕೂಟ

ಮೈಸೂರು: ಮೈಸೂರಿನ ಮಹಾಜನತೆ, ಜಿಲ್ಲಾಡಳಿತ, ಪಾಲಿಕೆ ಸದಸ್ಯರು, ಜನಪ್ರತಿನಿಧಿಗಳ ಸಹಕಾರದಿಂದ ಬಹಳ ಯಶಸ್ವಿಯಾಗಿ ದಸರಾ ನಡೆಸಿದ್ದೇವೆ. ೪೭ ಸ್ತಬ್ಧಚಿತ್ರ, ೬೬ ಕಲಾತಂಡಗಳು ಪಾಲ್ಗೊಂಡು ೨ ಗಂಟೆ ಮೆರವಣಿಗೆ ಸಾಗಿದೆ. ನಾಡಹಬ್ಬದಲ್ಲಿ ಅಳಿಲು ಸೇವೆ ಸಲ್ಲಿಸಲು ಅವಕಾಶ ನೀಡಿದ ಹಿಂದಿನ ಸಿಎಂ ಬಿ.ಎಸ್.ಯಡಿಯೂರಪ್ಪ, ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಸರಾ ಭದ್ರತೆಗೆ ೬ ಸಾವಿರ ಪೊಲೀಸರನ್ನು ನಿಯೋಜಿಸಲಾಗಿತ್ತು. ಯಾವುದೇ ಲೋಪವಾಗದಂತೆ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಡಿಸಿಪಿ ಪ್ರದೀಪ್ ಗುಂಟಿ ಅವರು ಜವಾಬ್ದಾರಿ ನಿರ್ವಹಿಸಿದ್ದಾರೆ. ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಕೋಪ ಮಾಡಿಕೊಳ್ಳದೇ, ಅಸಮಾಧಾನ ವ್ಯಕ್ತಪಡಿಸಿದೇ ಸಹಕಾರ ನೀಡಿದ್ದಾರೆ. ಎಸ್‌ಪಿ ಆರ್.ಚೇತನ್ ಯುವ ಸಂಭ್ರಮ, ಯುವ ದಸರಾ ಯಶಸ್ವಿಗೊಳಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಅಂಬಾರಿ ಕಟ್ಟುವುದು ತಡವಾಗಿದ್ದರಿಂದ ಪುಷ್ಪಾರ್ಚನೆ ಸಮಯ ಮುಂದಕ್ಕೆ ಹೋಯಿತು. ಇದರಿಂದ ಯಾವುದೇ ಲೋಪವಾಗಿಲ್ಲ. ಪುರೋಹಿತರು ೬ ಗಂಟೆಯವರೆಗೆ ಪುಷ್ಪಾರ್ಚನೆ ಮಾಡಬಹುದು ಎಂದು ಹೇಳಿದ್ದರು. ಅಂಬಾರಿ ಕಟ್ಟುವ ನಟ್ಟು ಬೋಲ್ಟು ಸರಿಯಾಗಿ ಇರಲಿಲ್ಲ. ಹಾಗಾಗಿ ತಡವಾಯಿತು ಎಂದು ಸಮರ್ಥಿಸಿಕೊಂಡರು.

ಕ್ಷಮೆ ಕೇಳಿದ ಸಚಿವ: ಜಂಬೂಸವಾರಿ ಮತ್ತು ಪಂಜಿನ ಕವಾಯತು ವೀಕ್ಷಿಸಲು ನಿರೀಕ್ಷೆಗೂ ಮೀರಿ ಜನರು ಬಂದಿದ್ದಾರೆ. ಲಕ್ಷಾಂತರ ಜನರು ಪಾಲ್ಗೊಂಡ ವೇಳೆ ಸಣ್ಣಪುಟ್ಟ ತಪ್ಪುಗಳಾಗುತ್ತವೆ. ಜನ ಸಾಮಾನ್ಯರಿಗೆ ಅನಾನುಕೂಲವಾಗಿದ್ದರೆ ಕ್ಷಮೆ ಕೋರುತ್ತೇನೆ. ದಸರಾ ಅತ್ಯಂತ ಯಶಸ್ವಿಯಾಗಿ ನಡೆದಿದೆ. ಸಣ್ಣಪುಟ್ಟ ಲೋಪಗಳನ್ನು ದೊಡ್ಡದು ಮಾಡಿ ಕಳಂಕ ಅಂಟಿಸುವುದು ಬೇಡ ಎಂದು ಮನವಿ ಮಾಡಿದರು.

ಶಾಸಕ ಎಲ್.ನಾಗೇಂದ್ರ, ಸಂಸದ ಪ್ರತಾಪ್ ಸಿಂಹ, ಮಹಾಪೌರ ಶಿವಕುಮಾರ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಎಸ್‌ಪಿ ಆರ್.ಚೇತನ್, ಡಿಸಿಪಿ ಪ್ರದೀಪ್ ಗುಂಟಿ, ಜಿಪಂ ಸಿಇಒ ಬಿ.ಆರ್.ಪೂರ್ಣಿಮಾ, ಪಾಲಿಕೆ ಆಯುಕ್ತ ಜಿ.ಲಕ್ಷ್ಮೀಕಾಂತ್ ರೆಡ್ಡಿ, ಎಡಿಸಿ ಡಾ.ಬಿ.ಎಸ್.ಮಂಜುನಾಥಸ್ವಾಮಿ, ಮುಡಾ ಆಯುಕ್ತ ಜಿ.ಟಿ.ದಿನೇಶ್‌ಕುಮಾರ್, ಕಾರ್ಯದರ್ಶಿ ಎನ್.ಸಿ.ವೆಂಕಟರಾಜು, ನಿಗಮಮಂಡಳಿ ಅಧ್ಯಕ್ಷರಾದ ಕೋಟೆ ಎಂ.ಶಿವಣ್ಣ, ಎಸ್.ಮಹದೇವಯ್ಯ, ಮಿರ್ಲೆ ಶ್ರೀನಿವಾಸಗೌಡ, ಬಿಜೆಪಿ ನಗರ ಅಧ್ಯಕ್ಷ ಟಿ.ಎಸ್.ಶ್ರೀವತ್ಸ, ಗ್ರಾಮಾಂತರ ಅಧ್ಯಕ್ಷೆ ಮಂಗಳಾ ಸೋಮಶೇಖರ್ ಮುಂತಾದವರು ಹಾಜರಿದ್ದರು.

ಯಶ್ವಂತಪುರದವರು ದಸರಾ ವೀಕ್ಷಿಸಬಾರದೇ?: ಎಸ್‌ಟಿಎಸ್

ಈ ಬಾರಿಯ ದಸರಾ ಮಹೋತ್ಸವದಲ್ಲಿ ಪಾಸ್ ಹಂಚಿಕೆಯಲ್ಲಿ ಯಶವಂತಪುರ ಕ್ಷೇತ್ರದವರಿಗೆ ಆದ್ಯತೆ ನೀಡಲಾಗಿತ್ತೇ ಎಂಬ ಪತ್ರಕರ್ತರ ಪ್ರಶ್ನೆಗೆ ಗರಂ ಆದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಯಶ್ವಂತಪುರದವರು ದಸರಾ ನೋಡಬಾರದೇ ಎಂದು ಪ್ರಶ್ನಿಸಿದರಲ್ಲದೆ, ಪಾಸ್ ಮಾಹಿತಿ ಬೇಕಾದರೆ ಆರ್‌ಟಿಐಗೆ ಅರ್ಜಿ ಸಲ್ಲಿಸಿ ಮಾಹಿತಿ ಪಡೆಯಿರಿ ಎಂದು ಖಾರವಾಗಿ ಹೇಳಿದರು.

andolana

Recent Posts

ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು

ಮೈಸೂರು: ಕಾನೂನು ಬಾಹಿರವಾಗಿ ಸಿ.ಎ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ನಾಗೇಂದ್ರ ಎಂಬುವವರು…

15 mins ago

ಕಪಿಲಾ ನದಿಗೆ ಮತ್ತೊಂದು ಸೇತುವೆ

ನಂಜನಗೂಡು: ವರುಣ ಕ್ಷೇತ್ರ ಹಾಗೂ ನಂಜನಗೂಡು ವಿಧಾನಸಭಾ ಕ್ಷೇತ್ರವನ್ನು ಸಂಪರ್ಕಿಸಲು ಕಪಿಲಾ ನದಿಗೆ ಮತ್ತೊಂದು ಸೇತುವೆ ಮಂಜೂರಾಗಿದೆ. ತಾಲ್ಲೂಕಿನ ನಂಜನಗೂಡು-ಹುಲ್ಲಹಳ್ಳಿ…

38 mins ago

ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಸಂಕಷ್ಟ

ಮೈಸೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಭಾರೀ ಸಂಕಷ್ಟ ಎದುರಾಗಿದೆ ಎಂಬ ಮಾಹಿತಿ…

43 mins ago

ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಮೈಸೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ಕೋರ್ಸ್‌ಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ…

1 hour ago

ನಿಜ್ಜರ್ ಹತ್ಯೆ ಪ್ರತಿಧ್ವನಿ-ಕೆನಡಾ ಭಾರತೀಯರಲ್ಲಿ ಆತಂಕ

ಅಮಿತ್ ಶಾ, ಅಜಿತ್‌ ದೋವಲ್ ಮೇಲೆಯೂ ಆರೋಪ ಡಿ.ವಿ.ರಾಜಶೇಖರ ಖಾಲಿಸ್ತಾನ್ ಉಗ್ರವಾದಿ ನಾಯಕ ಹರದೀಪ್‌ ಸಿಂಗ್ ನಿಜ್ಜರ್ ಹತ್ಯೆಯ ನಂತರದ…

1 hour ago

ಸೈಕಲ್ ಎಂಬ ಮಾಯಾಂಗನೆಯನೇರಿ..!

ಮೂಲ : ಪೂಜ ಹರೀಶ್‌, ಮೈಸೂರು ಅನುವಾದ: ಎನ್.ನರಸಿಂಹಸ್ವಾಮಿ, ನಾಗಮಂಗಲ ಜೀವನ ಒಂದು ಸೈಕಲ್ ಸವಾರಿಯಂತೆ, ಆಯ ತಪ್ಪದಿರಲು ಮುಂದೆ…

1 hour ago