ಜಿಲ್ಲೆಗಳು

ಬೆನಕನ ಅಮಾವಾಸ್ಯೆ : ಬೆಟ್ಟದಲ್ಲಿ ಮಾದಪ್ಪನಿಗೆ ಕುಂಭಾಭಿಷೇಕ

ಹನೂರು : ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಶ್ರಾವಣ ಮಾಸ ಮುಕ್ತಾಯವಾದ ಹಿನ್ನೆಲೆ ಹಾಗೂ ಬೆನಕನ ಅಮಾವಾಸ್ಯೆ ಪ್ರಯುಕ್ತ ಶನಿವಾರ ಸಾಲೂರು ಬೃಹಾನ್ಮಠದ ಅಧ್ಯಕ್ಷ ವಿದ್ವಾನ್ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರ ಸಮ್ಮುಖದಲ್ಲಿ ಸ್ವಾಮಿಗೆ ಕುಂಭಾಭಿಷೇಕವನ್ನು ಸಂಪ್ರದಾಯದಂತೆ ನೆರವೇರಿಸಲಾಯಿತು.

ಬೆನಕನ ಅಮಾವಾಸ್ಯೆ ಹಿನ್ನೆಲೆ ದೇಗುಲ ಗರ್ಭಗುಡಿ ಸೇರಿದಂತೆ ದೇವಸ್ಥಾನದ ಹೊರಾಂಗಣ ಬಸವ, ರುದ್ರಾಕ್ಷಿ ಹಾಗೂ ಹುಲಿವಾಹನದ ಉತ್ಸವ ವಾಹನಗಳನ್ನು ವಿವಿಧ ಪುಷ್ಪ ಹಾಗೂ ತಳಿರು ತೋರಣಗಳಿಂದ ಸಿಂಗಾರ ಮಾಡಲಾಗಿತ್ತು. ಸಾಂಪ್ರದಾಯದಂತೆ ಬೇಡಗಂಪಣ ಅರ್ಚಕರಿಂದ ಸ್ವಾಮಿಗೆ ಎಣ್ಣೆ ಮಜ್ಜನ ಸೇವೆ ಹಾಗೂ ಕುಂಭಾಭಿಷೇಕವನ್ನು ಸಂಪ್ರದಾಯದಂತೆ ನೆರವೇರಿಸಲಾಯಿತು.

ಎಣ್ಣೆ ಮಜ್ಜನ ಸೇವೆ: ಬೆನಕನ ಅಮಾವಾಸ್ಯೆಯಿಂದಲೇ ಶುಕ್ರವಾರ ರಾತ್ರಿ ಮಾದಪ್ಪನ ಸನ್ನಿಧಿಯಲ್ಲಿ ಸ್ವಾಮಿಗೆ ಬೇಡಗಂಪಣ ಅರ್ಚಕ ವೃಂದದವರಿಂದ ಎಣ್ಣೆ ಮಜ್ಜನ ಸೇವೆಯನ್ನು ನೆರವೇರಿಸಲಾಯಿತು. ಶನಿವಾರ ಶ್ರಾವಣ ಮಾಸ ಮುಕ್ತಾಯವಾದ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಮುಂಜಾನೆ 3.30 6ರವರೆಗೆ ವಿಶೇಷ ಪೂಜೆಯನ್ನು ಸಲ್ಲಿಸುವುದರ ಮೂಲಕ 108 ಬೇಡಗಂಪಣ ಅರ್ಚಕರಿಂದ ಮಾದಪ್ಪನಿಗೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಂಪ್ರದಾಯಿಕ ಕುಂಭಾಭಿಷೇಕವನ್ನು ನೆರವೇರಿಸಲಾಯಿತು.

ಶನಿವಾರ ಬೆಳಗ್ಗೆ 9:30 ರಲ್ಲಿ ಬೇಡಗಂಪಣ ಸಮುದಾಯದ 108 ಅರ್ಚಕರು ಮಂಗಳವಾದ್ಯ ಸತ್ತಿಗೆ ಸೂರಪಾನಿ, ಛತ್ರಿ ಚಾಮರದೊಂದಿಗೆ ದೇಗುಲದ ಸಮೀಪವಿರುವ ಮಜ್ಜನ ಬಾವಿಗೆ ತೆರಳಿ ಧಾರ್ಮಿಕ ವಿಧಿ ವಿಧಾನದ ಮೂಲಕ ಶಿವ ಪಾರ್ವತಿ ವಿಗ್ರಹ ಮೂರ್ತಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು. ಬಳಿಕ ಕಳಸಗಳಿಗೆ ನೀರು ತುಂಬಿ ಪೂಜೆಯನ್ನು ಸಲ್ಲಿಸಿದ್ದ 108 ಕುಂಭ ಕಳಸವನ್ನು ಹೊತ್ತ ಅರ್ಚಕರು ಮೆರವಣಿಯ ಮೂಲಕ ದೇಗುಲಕ್ಕೆ ಆಗಮಿಸಿ ಪ್ರದಕ್ಷಿಣೆ ಹಾಕಿದರು. ನಂತರ ಕುಂಭ ಕಳಸವನ್ನು ಗರ್ಭಗುಡಿಗೆ ತಂದು ವಿಶೇಷ ಪೂಜೆಯನ್ನು ಸಲ್ಲಿಸಿ ಸ್ವಾಮಿಗೆ ಅಭಿಷೇಕವನ್ನು ನೆರವೇರಿಸಿ ಮಹಾ ಮಂಗಳಾರತಿ ಬೆಳಗಿಸುವುದರ ಮೂಲಕ ಕುಂಭಾಭಿಷೇಕವನ್ನು ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ದೇವಿ, ಉಪ ಕಾರ್ಯದರ್ಶಿ ಬಸವರಾಜು, ಪ್ರಧಾನ ಆಗಮಿಕ ಕರವೀರ ಸ್ವಾಮಿ, ಲೆಕ್ಕಾಧಿಕ್ಷಕ ಪ್ರವೀಣ್ ಪಾಟೀಲ್, ದ್ವಿತೀಯ ದರ್ಜೆ ಸಹಾಯಕ ಮಹಾದೇವಸ್ವಾಮಿ ಪ್ರಾಧಿಕಾರದ ನೌಕರರು ದೇಗುಲದ ಸಿಬ್ಬಂದಿಗಳು ಹಾಜರಿದ್ದರು.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

15 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

18 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

18 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

19 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

19 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

19 hours ago