ನಂಜನಗೂಡು: ತಾಲ್ಲೂಕಿನ ಅನೇಕ ಕಡೆ ಭತ್ತದ ಬೆಳೆಗೆ ಬೆಂಕಿ ರೋಗ ರೋಗ ಕಾಣಿಸಿಕೊಂಡಿದ್ದು, ರೋಗ ತಡೆಗೆ ಕೃಷಿ ಇಲಾಖೆ ಸೂಚಿಸಿರುವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಾಲ್ಲೂಕು ಕೃಷಿ ಇಲಾಖೆಯ ಅಧಿಕಾರಿ ದೀಪಕ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಭತ್ತದ ಬೆಳೆಯ ಬೆಂಕಿ ರೋಗದ ನಿಯಂತ್ರಣಕ್ಕಾಗಿ ಟ್ರೈಸೈಕ್ಲೋಜೋಲ್ ೬ ಗ್ರಾಂ ಅನ್ನು 10 ಲೀಟರ್ ನೀರಿನಲ್ಲಿ ಬೆರೆಸಿ 1 ಎಕರೆಗೆ 120ರಿಂದ 150 ಗ್ರಾಂ ವರೆಗೆ ಅಥವಾ ಕಾರ್ಬನ್ ಡೈಜಿಂ ಔಷಧವನ್ನು ಪ್ರತಿ ಲೀಟರಿಗೆ 1 ಗ್ರಾಂ ನಂತೆ ಬೆರೆಸಿ ಸಿಂಪಡಿಸಬೇಕು . ಸಿಂಪಡಿಸುವಾಗ ಗದ್ದೆಯಲ್ಲಿನ ನೀರನ್ನು ಖಾಲಿ ಮಾಡಿ ಸಿಂಪಡಿಸಬೇಕು ಎಂದು ಅವರು ತಿಳಿಸಿದ್ದಾರೆ.
ಫಸಲ್ ಬಿಮಾ ಯೋಜನೆಗೆ ಒಳಪಡಲು ಸಲಹೆ
ನಂಜನಗೂಡು: 2020-21 ನೇ ಸಾಲಿನಲ್ಲಿ ಬೆಳೆ ಸಮೀಕ್ಷೆಯಲ್ಲಿ ದಾಖಲಾತಿಗಳನ್ನು ಸಮರ್ಪಕವಾಗಿ ನೀಡಲಾಗದೇ ತಿರಸ್ಕೃತಗೊಂಡವರ ಪಟ್ಟಿಯನ್ನು ಪ್ರಕಟಿಸಲಾಗಿದ್ದು , ಅಂಥವರು ಇನ್ನು 15 ದಿನಗಳ ಒಳಗಾಗಿ ತಾವು ಬೆಳೆದಿರುವ ಬೆಳೆಗಳ ಕುರಿತಾದ ಸಮಗ್ರ ಮಾಹಿತಿಯನ್ನು ತಾಲ್ಲೂಕು ಕೃಷಿ ಇಲಾಖೆಗೆ ಸಲ್ಲಿಸಿ ಫಸಲ್ ಬೀಮಾ ಯೋಜನೆಯ ಫಲಾನುಭವಿಗಳಾಗುವಂತೆ ಅವರು ಮನವಿ ಮಾಡಿದ್ದಾರೆ.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…