ಬೆಟ್ಟದಪುರ : ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಜಾನುವಾರು ಸಂತೆಗಳನ್ನು ನಿಷೇಧಿಸಿದ್ದರೂ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದ ಹರದೂರು ಗೇಟ್‌ನಲ್ಲಿ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಜಾತ್ರೋತ್ಸವದ ಅಂಗವಾಗಿ ದನಗಳ ಜಾತ್ರೆ ಆರಂಭವಾಗಿದೆ.
ಪಿರಿಯಾಪಟ್ಟಣ ಸುತ್ತಮುತ್ತಲಿನ ರೈತರು ದನಗಳನ್ನು ತಂದು ಜಾತ್ರೆಯಲ್ಲಿ ಕಟ್ಟುತ್ತಿದ್ದಾರೆ. ಜಿಲ್ಲಾಡಳಿತವು ಜಿಲ್ಲೆಯಾದ್ಯಂತ ಜಾನುವಾರು ಸಂತೆ ಮತ್ತು ಸಾಗಣೆ ಮಾಡುವುದನ್ನು ನಿಷೇಧಿಸಿದೆ. ಆದರೂ ಜಾನುವಾರುಗಳನ್ನು ತರುತ್ತಿರುವುದು ಆತಂಕ ಮೂಡಿಸಿದೆ.
ಈ ಕುರಿತು ರೈತ ಹರದೂರು ಗಿರೀಶ್ ಮಾತನಾಡಿ, ನಾವು ತಾತನ ಕಾಲದಿಂದಲೂ ದನಗಳ ಜಾತ್ರೆಗಳಲ್ಲಿ ದನಗಳನ್ನು ಕಟ್ಟುತ್ತಿದ್ದೇವೆ. ಇದು ನಮ್ಮ ಸಂಪ್ರದಾಯ. ನಾವು ಗೋವುಗಳನ್ನು ಅಲಂಕಾರ ಮಾಡಿ ಸಂತೋಷಕ್ಕಾಗಿ ಕಟ್ಟುತ್ತೇವೆ. ಜಿಲ್ಲಾಡಳಿತ ನಮಗೆ ಕುಡಿಯುವ ನೀರು, ವಿದ್ಯುತ್ ಯಾವುದೇ ಸೌಕರ್ಯಗಳು ಒದಗಿಸಿ ಕೊಟ್ಟಿಲ್ಲ. ಮಾರಾಟ ಮಾಡದಿದ್ದರೂ ತೊಂದರೆ ಇಲ್ಲ, 4 ದಿವಸ ಇದ್ದು ಹೋಗುತ್ತೇವೆ ಎಂದರು.
ಪಶು ಸಂಗೋಪನೆ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಸೋಮಯ್ಯ ಪತ್ರಿಕೆಯೊಂದಿಗೆ ಮಾತನಾಡಿ, ಜಿಲ್ಲೆಯಲ್ಲಿ ಚರ್ಮ ಗಂಟು ರೋಗ ಇರುವುದರಿಂದ ಜಾನುವಾರುಗಳಿಗೆ ಲಸಿಕೆ ನೀಡುತ್ತಿದ್ದೇವೆ. ತಾಲ್ಲೂಕಿನಲ್ಲಿ 200 ಜಾನುವಾರುಗಳಿಗೆ ಚರ್ಮಗಂಟು ರೋಗ ಕಂಡುಬಂದಿದ್ದು , ಲಸಿಕೆ ನೀಡಿದ್ದೇವೆ. ಇದೊಂದು ಸಾಂಕ್ರಾಮಿಕ ರೋಗವಾಗಿರುವುದರಿಂದ ದನಗಳ ಜಾತ್ರೆಗಳಲ್ಲಿ ದನಗಳಿಗೆ ಹರಡುವ ಸಾಧ್ಯತೆಯಿದೆ. ಆದ್ದರಿಂದ ಡಿಸಿ ಅವರು ದನಗಳ ಜಾತ್ರೆ ನಿಷೇಧ ಮಾಡಿದ್ದಾರೆ. ಆದ್ದರಿಂದ ಪೊಲೀಸ್ ಇಲಾಖೆ ಮುಖಾಂತರ ಜಾನುವಾರುಗಳನ್ನು ತೆರವುಗೊಳಿಸಲಾಗುವುದು ಎಂದು ತಿಳಿಸಿದರು.
ಅಮರಾವತಿ : ಹಿಂದಿನ ವೈಎಸ್‍ಆರ್‍ಸಿಪಿ ಆಡಳಿತದ ಅವಧಿಯಲ್ಲಿ ಆಂಧ್ರ ವಿಧಾನಸಭೆಯ ಪ್ರಸ್ತುತ ಉಪಸಭಾಪತಿ ಕೆ. ರಘುರಾಮ ಕೃಷ್ಣ ರಾಜು ಅವರ…
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ…
ವಾಷಿಂಗ್ಟನ್ : ಕಾನೂನುಬಾಹಿರವಾಗಿ ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹವನ್ನ ಅಮೆರಿಕ ನಿಲ್ಲಿಸಲಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಗಡಿ…
ಬೆಂಗಳೂರು : ಸಫಾರಿಯಿಂದ ಬರುವ ಆದಾಯದಲ್ಲಿ ಶೇ.35ರಷ್ಟನ್ನು ಕಾಡಿನಂಚಿನ ಗ್ರಾಮದ ಜನರ ಕಲ್ಯಾಣಕ್ಕಾಗಿ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಗ್ರಾಮಗಳಲ್ಲಿ…
ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ…
ಚಿಕ್ಕಬಳ್ಳಾಪುರ : ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್…