ಜಿಲ್ಲೆಗಳು

ಬೆಟ್ಟದಪುರ : ನಿಷೇಧವಿದ್ದರೂ ಜಾನುವಾರು ತಂದ ರೈತರು

ಬೆಟ್ಟದಪುರ : ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಜಾನುವಾರು ಸಂತೆಗಳನ್ನು ನಿಷೇಧಿಸಿದ್ದರೂ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದ ಹರದೂರು ಗೇಟ್‌ನಲ್ಲಿ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಜಾತ್ರೋತ್ಸವದ ಅಂಗವಾಗಿ ದನಗಳ ಜಾತ್ರೆ ಆರಂಭವಾಗಿದೆ.

ಪಿರಿಯಾಪಟ್ಟಣ ಸುತ್ತಮುತ್ತಲಿನ ರೈತರು ದನಗಳನ್ನು ತಂದು ಜಾತ್ರೆಯಲ್ಲಿ ಕಟ್ಟುತ್ತಿದ್ದಾರೆ. ಜಿಲ್ಲಾಡಳಿತವು ಜಿಲ್ಲೆಯಾದ್ಯಂತ ಜಾನುವಾರು ಸಂತೆ ಮತ್ತು ಸಾಗಣೆ ಮಾಡುವುದನ್ನು ನಿಷೇಧಿಸಿದೆ. ಆದರೂ ಜಾನುವಾರುಗಳನ್ನು ತರುತ್ತಿರುವುದು ಆತಂಕ ಮೂಡಿಸಿದೆ.

ಈ ಕುರಿತು ರೈತ ಹರದೂರು ಗಿರೀಶ್ ಮಾತನಾಡಿ, ನಾವು ತಾತನ ಕಾಲದಿಂದಲೂ ದನಗಳ ಜಾತ್ರೆಗಳಲ್ಲಿ ದನಗಳನ್ನು ಕಟ್ಟುತ್ತಿದ್ದೇವೆ. ಇದು ನಮ್ಮ ಸಂಪ್ರದಾಯ. ನಾವು ಗೋವುಗಳನ್ನು ಅಲಂಕಾರ ಮಾಡಿ ಸಂತೋಷಕ್ಕಾಗಿ ಕಟ್ಟುತ್ತೇವೆ. ಜಿಲ್ಲಾಡಳಿತ ನಮಗೆ ಕುಡಿಯುವ ನೀರು, ವಿದ್ಯುತ್ ಯಾವುದೇ ಸೌಕರ್ಯಗಳು ಒದಗಿಸಿ ಕೊಟ್ಟಿಲ್ಲ. ಮಾರಾಟ ಮಾಡದಿದ್ದರೂ ತೊಂದರೆ ಇಲ್ಲ, 4 ದಿವಸ ಇದ್ದು ಹೋಗುತ್ತೇವೆ ಎಂದರು.

ಪಶು ಸಂಗೋಪನೆ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಸೋಮಯ್ಯ ಪತ್ರಿಕೆಯೊಂದಿಗೆ ಮಾತನಾಡಿ, ಜಿಲ್ಲೆಯಲ್ಲಿ ಚರ್ಮ ಗಂಟು ರೋಗ ಇರುವುದರಿಂದ ಜಾನುವಾರುಗಳಿಗೆ ಲಸಿಕೆ ನೀಡುತ್ತಿದ್ದೇವೆ. ತಾಲ್ಲೂಕಿನಲ್ಲಿ 200 ಜಾನುವಾರುಗಳಿಗೆ ಚರ್ಮಗಂಟು ರೋಗ ಕಂಡುಬಂದಿದ್ದು , ಲಸಿಕೆ ನೀಡಿದ್ದೇವೆ. ಇದೊಂದು ಸಾಂಕ್ರಾಮಿಕ ರೋಗವಾಗಿರುವುದರಿಂದ ದನಗಳ ಜಾತ್ರೆಗಳಲ್ಲಿ ದನಗಳಿಗೆ ಹರಡುವ ಸಾಧ್ಯತೆಯಿದೆ. ಆದ್ದರಿಂದ ಡಿಸಿ ಅವರು ದನಗಳ ಜಾತ್ರೆ ನಿಷೇಧ ಮಾಡಿದ್ದಾರೆ. ಆದ್ದರಿಂದ ಪೊಲೀಸ್ ಇಲಾಖೆ ಮುಖಾಂತರ ಜಾನುವಾರುಗಳನ್ನು ತೆರವುಗೊಳಿಸಲಾಗುವುದು ಎಂದು ತಿಳಿಸಿದರು.

andolanait

Recent Posts

ಮದ್ದೂರಿನಲ್ಲಿ ನಿವೃತ್ತ ಹಾಸ್ಟೆಲ್ ಅಧೀಕ್ಷಕನ ಮನೆ ಮೇಲೆ ಲೋಕಾಯುಕ್ತ ದಾಳಿ

ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…

26 mins ago

ಮಂಡ್ಯದಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…

3 hours ago

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

8 hours ago

ಓದುಗರ ಪತ್ರ: ನಿಜವಾದ ಭಾವೈಕ್ಯತೆಯ ಸಂಗಮ

ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…

8 hours ago

ಓದುಗರ ಪತ್ರ: ನಾಡಿಗೆ ಮಾದರಿ!

ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…

8 hours ago

ಓದುಗರ ಪತ್ರ: ಪ್ರೀತಿಯ ಅಣ್ಣ ಪ್ರತಾಪ್ ಸಿಂಹ…

ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…

8 hours ago