ಹನೂರು: ಸಮಾಜದಲ್ಲಿನ ಶ್ರೇಣಿಕೃತ ಜಾತಿ ವ್ಯವಸ್ಥೆಯನ್ನು ಕಟುವಾಗಿ ತಮ್ಮ ಕೀರ್ತನೆಗಳ ಮೂಲಕ ಖಂಡಿಸಿದ ಭಕ್ತ ಶ್ರೇಷ್ಠ ಕನಕದಾಸರ ತತ್ವ ಆದರ್ಶಗಳು ಪ್ರಸ್ತುತ ಸಮಾಜಕ್ಕೆ ಅನುಕರಣಿಯ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು .
ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಭಕ್ತ ಶ್ರೇಷ್ಠ ಕನಕದಾಸರ ಜಯಂತಿ ಕಾರ್ಯಕ್ರಮಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಕುಲ ಕುಲ ಕುಲವೆಂದು ಹೊಡೆದಾಡಾದಿರಿ ನಿಮ್ಮ ಕುಲದ ನೆಲೆಯನ್ನು ಬಲ್ಲಿರಾ ಎನ್ನುವ ಮೂಲಕ 15-16ನೇ ಶತಮಾನದಲ್ಲೇ ಸಮಾಜದ ಅಂಕುಡೊಂಕುಗಳನ್ನು ತಮ್ಮ ಕೀರ್ತನೆಗಳ ಮೂಲಕ ಹೊರಹಾಕಿದ್ದರು. ಕನಕದಾಸರು ಒಂದು ಸಮುದಾಯಕ್ಕೆ ಸೀಮಿತವಾದ ವ್ಯಕ್ತಿಯಲ್ಲ ಎಂದು ತಿಳಿಸಿದರು.
ನಿರಂತರ ಮಳೆ ನಡುವೆ ಮೆರವಣಿಗೆ : ಶುಕ್ರವಾರ ಬೆಳಿಗ್ಗೆ ಪ್ರಾರಂಭವಾದ ಜಿಟಿಜಿಟಿ ಮಳೆಯ ನಡುವೆಯೂ ಕಲಾತಂಡಗಳು, ವಾದ್ಯ ಮೇಳಗಳೊಂದಿಗೆ ಸಾಗಿತು. ಈ ವೇಳೆ ಶಾಸಕ ಆರ್. ನರೇಂದ್ರ, ತಹಸಿಲ್ದಾರ್ ಆನಂದಯ್ಯ, ಅವರು ಸೇರಿದಂತೆ ವಿವಿಧ ಮುಖಂಡರುಗಳು ಮೆರವಣಿಗೆಯಲ್ಲಿ ಸಾಗಿದರು. ನಿರಂತರ ಮಳೆಯಲ್ಲೂ ವೀರಗಾಸೆಯವರು ತಾಳಮೇಳಗಳ ಸದ್ದಿಗೆ ಕುಣಿದು ಕುಪ್ಪಳಿಸಿದರು.
ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್…
ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ…
ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…
ಹುಣಸೂರು : ಲಾರಿ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲ್ಲೂಕಿನ…
ಬೆಂಗಳೂರು : ಮುಂದಿನ ಮಾರ್ಚ್ ತಿಂಗಳ 2ರೊಳಗೆ ಸರ್ಕಾರ ತಮ್ಮ ಬೇಡಿಕೆ ಈಡೇರಿಸಬೇಕೆಂದು ಗಡುವು ನೀಡಿರುವ ಸಾರಿಗೆ ನೌಕರರು, ಶುಕ್ರವಾರದಿಂದ…
ಮಂಡ್ಯ : ಮಾರ್ಚ್ 23ರಿಂದ ಏಪ್ರಿಲ್ 5ರವರೆಗೆ ವೈರಮುಡಿ ಬ್ರಹ್ಮೋತ್ಸವ 2026 ನಡೆಯಲಿದೆ. ಮಾರ್ಚ್ 28 ಶನಿವಾರದಂದು ವೈರಮುಡಿ ಕಿರೀಟಧಾರಣೆ…