ಮೈಸೂರು : ಕಾಂಗ್ರೆಸ್ ಪಕ್ಷದ ವತಿಯಿಂದ ನಡೆಸಲಾಗುತ್ತಿರುವ ಐಕ್ಯತಾ ಯಾತ್ರೆಯು ಇಂದು ಬದನವಾಳುವಿನಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು.
ರಾಹುಲ್ ಗಾಂಧಿ ಅವರು ಖಾದಿ ಗ್ರಾಮೋದ್ಯೋಗ ಕೇಂದ್ರಕ್ಕೆ ಭೇಟಿ ನೀಡಿ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಗೆ ಪುಷ್ಪ ನಮನವನ್ನು ಸಲ್ಲಿಸಿ ಅಲ್ಲಿ ಕೆಲಸ ನಿರ್ವಹಿಸುತ್ತಿರುವ ಮಹಿಳೆಯರೊಟ್ಟಿಗೆ ಮಾತನಾಡಿ ಅವರ ಕಷ್ಟಗಳನ್ನು ಆಲಿಸಿದರು.
ಬಳಿಕ ಗ್ರಾಮದಲ್ಲಿ ಬಳಕೆಯಾಗದೆ ಇದ್ದ ರಸ್ತೆಗೆ ಪೇವರ್ಸ್ ಜೋಡಿಸುವ ಮೂಲಕ ಆ ರಸ್ತೆಗೆ ‘ಭಾರತ್ ಜೋಡೊ ರಸ್ತೆ’ ಎಂದು ನಾಮಕರಣ ಮಾಡುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸರ್ಜೇವಾಲ, ಕೆ ಸಿ ವೇಣುಗೋಪಾಲ್ ಮುಂತಾದವರು ಇದ್ದರು.