ಮಂಡ್ಯ : ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೊ ಯಾತ್ರೆಗೆ ಎರಡು ದಿನಗಳ ಕಾಲ ಬ್ರೇಕ್ ನೀಡಲಾಗಿದೆ.
ಸೋನಿಯಾ ಗಾಂಧಿ ಅವರು ಮಡಿಕೇರಿಯಲ್ಲಿ ವಾಸ್ತವ್ಯ ಇರುವ ಕಾರಣ ಎರಡು ದಿನಗಳ ಕಾಲ ಯಾತ್ರೆಯನ್ನು ರದ್ದುಗೊಳಿಸಲಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ಯಾತ್ರೆಯನ್ನು ನಿಗದಿಪಡಿಸಲಾಗಿತ್ತು.
ರಾಹುಲ್ ಗಾಂಧಿ ನೇತೃತ್ವದ ಯಾತ್ರೆ ಮೈಸೂರಿನ ಮೂಲಕ ಮಂಡ್ಯಕ್ಕೆ ಆಗಮಿಸಿದ್ದು ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವಿನಹಳ್ಳಿ ಗೇಟ್ ಬಳಿ ತಾರಾ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ರಾಹುಲ್ ಗಾಂಧಿಯವರನ್ನು ಅದ್ದೂರಿಯಾಗಿ ಸ್ವಾಗತಿಸಿದರು. ಬಳಿಕ ಅಲ್ಲಿಂದ ನಡೆದ ಜಾತ್ರೆಯು ಸುಮಾರು 6 ಕಿ.ಮೀ ನಡೆಯಿತು. ರಾಹುಲ್ ಗಾಂಧಿಯವರು ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲು ಮೈಸೂರಿಗೆ ಹೊರಟರು. ತದನಂತರ ಚಾಮುಂಡಿ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿ ಮತ್ತೆ ಶ್ರೀರಂಗಪಟ್ಟಣಕ್ಕೆ ಬಂದು ಯಾತ್ರೆಯಲ್ಲಿ ಪಾಲ್ಗೊಂಡರು.