ಮಂಡ್ಯ : ಕಾಂಗ್ರೆಸ್ ವತಿಯಿಂದ ನಡೆಸಲಾಗುತ್ತಿರುವ ಭಾರತ್ ಜೋಡೊ ಯಾತ್ರೆಯು ಎರಡು ದಿನಗಳ ಬಿಡುವಿನ ನಂತರ ಇಂದಿನಿಂದ ಮತ್ತೆ ಆರಂಭಗೊಂಡಿದೆ.
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಇಂದು ಮಂಡ್ಯದ ಪಾಂಡವಪುರ ಬೆಳ್ಳಾಲೆ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಪಾದಯಾತ್ರೆ ಆರಂಭಿಸಿದ್ದಾರೆ.
ಪಾದಯಾತ್ರೆಯಲ್ಲಿ ರಾಹುಲ್ ಗಾಂಧಿ ಜೊತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರು ಕೆಲ ಹೊತ್ತು ಹೆಜ್ಜೆ ಹಾಕುವ ಮೂಲಕ ಯಾತ್ರೆಗೆ ಮತ್ತಷ್ಟು ಬಲತಂದಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಹರಿಪ್ರಸಾದ್ ಸೇರಿದಂತೆ ಹಲವಾರು ಕಾರ್ಯಕರ್ತರು ಭಾಗಿಯಾಗಿದ್ದರು.
ಪಾದಯಾತ್ರೆಯೂ 11:00 ವರೆಗೆ ನಡೆದು ಬಳಿಕ ಖಾರಾದ್ಯ ಕೆರೆ ಬಳಿ ವಿಶ್ರಾಂತಿ ಪಡೆಯಲಿದ್ದಾರೆ. ತದನಂತರ ಸಂಜೆ 4:00ಗೆ ಖಾರಾದ್ಯ ಕೆರೆಯಿಂದ ಆರಂಭವಾಗುವ ಪಾದಯಾತ್ರೆ, ಸಂಜೆ 7:00ವರೆಗೆ ನಡೆದು ಮಂಡ್ಯದ ಬ್ರಹ್ಮದೇವರಹಳ್ಳಿ ಗ್ರಾಮವನ್ನು ತಲುಪಲಿದೆ.





