ಜಿಲ್ಲೆಗಳು

ಭಾರತ್ ಜೋಡೊ ಯಾತ್ರೆ ಸಂಬಂಧ ಐಜಿಪಿ ಸ್ಥಳ ಪರಿಶೀಲನೆ

ಮೈಸೂರು : ಕಾಂಗ್ರೆಸ್‌ ಪಕ್ಷದ ವತಿಯಿಂದ ಆಯೋಜನೆ ಮಾಡಿರುವ ಭಾರತ್‌ ಜೋಡೊ ಯಾತ್ರೆಯು ನಾಳೆ ರಾಜ್ಯಕ್ಕೆ ಪ್ರವೇಶ  ಮಾಡಲಿರುವ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಸಿದ್ದತೆಗಲನ್ನು ಮಾಡಿಕೊಳ್ಳಲಾಗಿದೆ.
ಇಂದು ದಕ್ಷಿಣ ವಲಯ ಐಜಿಪಿ ಯವರಾದ ಪ್ರವೀಣ್‌ ಮಧುಕರ್ ಪವಾರ್  ರವರು ಕಳಲೆ , ಬದನವಾಳು, ಕಡಕೊಳ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು .ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಚೇತನ್.ಆರ್ ಐಪಿಎಸ್ ಸೇರಿದಂತೆ ಹಲವರು ಹಾಜರಿದ್ದರು.
ಗುಂಡ್ಲುಪೇಟೆಗೆ ಆಗಮಿಸಲಿರುವ ಪಾದಯಾತ್ರೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಮುನಿಯಪ್ಪ ಸೇರಿದಂತೆ ಇನ್ನಿತರೆ ರಾಜ್ಯ ಮಟ್ಟದ ಹಿರಿಯ ನಾಯಕರು, ಸಂಸದರು, ಶಾಸಕರು ಭಾಗಿಯಾಗಲಿದ್ದಾರೆ. ಬೆಳಗ್ಗೆ 9ಕ್ಕೆ ವೇದಿಕೆ ಕಾರ್ಯಕ್ರಮ ಪ್ರಾರಂಭವಾಗಲಿದೆ. ಬಳಿಕ ಪಾದಯಾತ್ರೆ ನಡೆಯಲಿದೆ.

ಬದನವಾಳು ಖಾದಿ ಗ್ರಾಮೋದ್ಯಮ ಕೇಂದ್ರಕ್ಕೆ ಭೇಟಿ 
ಭಾರತ್‌ ಜೋಡೋ ಪಾದ ಯಾತ್ರೆಯ ( ಅಕ್ಟೋಬರ್‌ 1 ಮತ್ತು 2ನೇ ತಾರೀಖು) 3ನೇ ದಿನ ಮೈಸೂರಿನ ಬದನವಾಳು ಖಾದಿ ಗ್ರಾಮೋದ್ಯಮ ಕೇಂದ್ರಕ್ಕೆ ಭೇಟಿ ನೀಡಲಿದ್ದು, ಮಧ್ಯಾಹ್ನ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ರಾಹುಲ್‍ಗಾಂಧಿ ಪೂಜೆ ಸಲ್ಲಿಸಲಿದ್ದಾರೆ.
ನಂತರ ಕಡಕೋಳ ಕೈಗಾರಿಕಾ ಪ್ರದೇಶದಿಂದ ಪಾದಯಾತ್ರೆ ಮುಂದುವರೆಯಲಿದ್ದು, ಮೈಸೂರು ನಗರದ ಅರಮನೆ ಮೈದಾನದ ಎದುರಿನ ವಸ್ತು ಪ್ರದರ್ಶನದ ಆವರಣದಲ್ಲಿ ತಂಗಲಿದೆ.
ಅ.3ರಂದು ಅಂದರೆ ನಾಲ್ಕನೆ ದಿನ ಮೈಸೂರಿನಿಂದ ಯಾತ್ರೆ ಆರಂಭಗೊಳ್ಳಲಿದೆ ಆ ದಿನಗಳಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾ ಆರಂಭಗೊಂಡಿರುತ್ತದೆ. ಇಲ್ಲಿಂದ ಹೊರಟ ಯಾತ್ರೆಯು ಕೆನಲು ಗ್ರಾಮದ ವನಜಸುಂದರ ಸಭಾಂಗಣದಲ್ಲಿ ಉಪಾಹಾರ ಸೇವಿಸಿ ಟಿ.ಎಸ್.ಛತ್ರ ಗ್ರಾಮದಿಂದ ಮಂಡ್ಯ ಪ್ರವೇಶಿಸಲಿದೆ. ರಾತ್ರಿ ಅಲ್ಲಿನ ಶ್ರೀ ವೆಂಕಟರಮಣಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಉಳಿದುಕೊಳ್ಳಲಿದೆ.

ಅ.4 ಮತ್ತು 5ರಂದು ಪಾದಯಾತ್ರೆಗೆ ವಿಶ್ರಾಂತಿ ಇದ್ದು, ಏಳನೆ ದಿನ ಮಂಡ್ಯದ ಶ್ರೀ ಮಹದೇಶ್ವರ ದೇವಸ್ಥಾನದಿಂದ ಪುನರಾರಂಭಗೊಳ್ಳಲಿದೆ.  ನಾಗಮಂಗಲದ ಚೌಡೇನಹಳ್ಳಿ ಗೇಟ್‍ನಿಂದ ನಡೆಯುವ ಪಾದಯಾತ್ರೆ ರಾತ್ರಿ ಎಂ.ಹೊಸೂರು ಗೇಟ್‍ನ ಬರಮದೇವರಹಳ್ಳಿಯಲ್ಲಿ ತಂಗಲಿದೆ. ಎಂಟನೆ ದಿನ ವಿಸ್ಡಂ ಶಾಲೆಯಿಂದ ಆರಂಭಗೊಂಡು ನಾಗಮಂಗಲದ ಅಂಚೆಚಿಟ್ಟನಹಳ್ಳಿಯಿಂದ ಮುಂದುವರೆದು ಆದಿಚುಂಚನಗಿರಿ ಮಠದ ಬೇಳ್ಳುರು ಟೌನ್‍ನಲ್ಲಿ ರಾತ್ರಿ ವಿಶ್ರಾಂತಿ ಪಡೆಯಲಿದೆ.

 

andolanait

Recent Posts

ಕನ್ನಡಿಗರಿಗೆ ಉದ್ಯೋಗ ನೀಡದ ಸಾಹಿತ್ಯ ಸಮ್ಮೇಳನ: ವಾಟಲ್‌ ನಾಗರಾಜ್‌ ಆಕ್ರೋಶ

ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…

9 hours ago

ಹಾಸ್ಯ ಸಾಹಿತ್ಯ ಆಧುನಿಕ ಬದುಕಿಗೆ ಔಷಧಿ: ಪ್ರೊ.ಕರಿಯಪ್ಪ

ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…

9 hours ago

ಸಿ & ಡಿ ಲ್ಯಾಂಡ್ ಸಮಸ್ಯೆ ಪರಿಹಾರಕ್ಕೆ ಉನ್ನತ ಮಟ್ಟದ ಸಮಿತಿ: ಯು.ಟಿ. ಖಾದರ್

ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…

9 hours ago

ಸಿ.ಟಿ ರವಿ ಕೊಲೆಗೆ ಪೊಲೀಸರ ಸಂಚು: ಅಶೋಕ್‌ ಆರೋಪ

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…

9 hours ago

ವಿರಾಜಪೇಟೆ | ಬಿಟ್ಟಂಗಾಲದಲ್ಲಿ ಚಿರತೆ ಬೆಕ್ಕು ಸಾವು

ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…

10 hours ago

ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ನಟ ದರ್ಶನ್‌ ವಾಸ್ತವ್ಯ

ಮೈಸೂರು: ನಟ ದರ್ಶನ್‌ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…

10 hours ago