ರಾಮನಗರ ( ಬಿಡದಿ ): ಬಿಡದಿ ಬೈಪಾಸ್‌ನ ಒಂದು ಕ್ಯಾರೆಜ್ ವೇ ಅನ್ನು ಸಾರ್ವಜನಿಕ ಸೇವೆಗೆ ಇಂದು ತೆರವು ಮಾಡಲಾಗಿದೆ. ಇನ್ನೆರಡು ದಿನಗಳಲ್ಲಿ ಎರಡನೇ ಕ್ಯಾರೇಜ್ ರೆ ಅನ್ನೂ ಓಪನ್ ಮಾಡಲಾಗುವುದು. ಬಿಡದಿ ರಾಮನಗರ 23 ಕಿ.ಮೀ ಬೈಪಾಸ್ ರಸ್ತೆಯನ್ನು ಗೌರಿ ಗಣೇಶ ಹಬ್ಬದೊಳಗೆ ಸಾರ್ವಜನಿಕ ಸೇವೆಗೆ ತೆರವು ಮಾಡಲಾಗುವುದು. ಎಂದು ಪ್ರತಾಪ್ ಸಿಂಹ ಅವರು ಫೇಸ್ಬುಕ್ ಮೂಲಕ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಈ ಬಿಡದಿ ಬೈಪಾಸ್ ಮಂಗಳವಾರದಿಂದ ಏಕಮುಖ ಸಂಚಾರಕ್ಕೆ ಮುಕ್ತವಾಗಿದೆ. ರಾಮನಗರ ಚನ್ನಪಟ್ಟಣ ಬೈಪಾಸ್ ಇದೆ 30 ರಿಂದ ಸಂಚಾರಕ್ಕೆ ಲಭ್ಯವಾಗುವ ಸಾಧ್ಯತೆ ಇದೆ.
ಬೈಪಾಸಿನ ಒಂದು ಭಾಗದಲ್ಲಿ ಬೆಟ್ಟ ಕೊರೆಯುವ ಕಾಮಗಾರಿ ವಿಳಂಬ ಆದ ಕಾರಣಕ್ಕೆ ರಸ್ತೆಯನ್ನು ತಡವಾಗಿ ಉದ್ಘಾಟಿಸಲಾಗುತ್ತಿದೆ. ಸದ್ಯ ಮೈಸೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುವವರು ಈ ಬೈಪಾಸ್ ಬಳಸಬಹುದು.
ಇನ್ನೆರಡು ದಿನದಲ್ಲಿ ಇನ್ನೊಂದು ಬದಿಯನ್ನು ಮುಕ್ತಗೊಳಿಸಲಾಗುತ್ತದೆ. ರಾಮನಗರ ಚನ್ನಪಟ್ಟಣ ಬೈಪಾಸಿನ 23 ಕಿಲೋಮೀಟರ್ ಉದ್ದದ ಕಾಮಗಾರಿಗಳು ಅಂತಿಮ ಹಂತದಲ್ಲಿವೆ. ಅವುಗಳು ಸಹ ಗೌರಿ ಹಬ್ಬದ ವೇಳೆಗೆ ತೆರೆದುಕೊಳ್ಳಲಿದೆ ಸರ್ವಿಸ್ ರಸ್ತೆ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದರು.