ಜಿಲ್ಲೆಗಳು

ಬಿಡದಿ ಬೈಪಾಸ್ ಮಂಗಳವಾರದಿಂದ ಏಕಮುಖ ಸಂಚಾರಕ್ಕೆ ಮುಕ್ತ

ರಾಮನಗರ ( ಬಿಡದಿ ): ಬಿಡದಿ ಬೈಪಾಸ್‌ನ ಒಂದು ಕ್ಯಾರೆಜ್ ವೇ ಅನ್ನು ಸಾರ್ವಜನಿಕ ಸೇವೆಗೆ ಇಂದು ತೆರವು ಮಾಡಲಾಗಿದೆ. ಇನ್ನೆರಡು ದಿನಗಳಲ್ಲಿ ಎರಡನೇ ಕ್ಯಾರೇಜ್ ರೆ ಅನ್ನೂ ಓಪನ್ ಮಾಡಲಾಗುವುದು. ಬಿಡದಿ ರಾಮನಗರ 23 ಕಿ.ಮೀ ಬೈಪಾಸ್ ರಸ್ತೆಯನ್ನು ಗೌರಿ ಗಣೇಶ ಹಬ್ಬದೊಳಗೆ ಸಾರ್ವಜನಿಕ ಸೇವೆಗೆ ತೆರವು ಮಾಡಲಾಗುವುದು. ಎಂದು ಪ್ರತಾಪ್ ಸಿಂಹ ಅವರು ಫೇಸ್ಬುಕ್  ಮೂಲಕ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಈ ಬಿಡದಿ ಬೈಪಾಸ್ ಮಂಗಳವಾರದಿಂದ ಏಕಮುಖ ಸಂಚಾರಕ್ಕೆ ಮುಕ್ತವಾಗಿದೆ. ರಾಮನಗರ ಚನ್ನಪಟ್ಟಣ ಬೈಪಾಸ್ ಇದೆ 30 ರಿಂದ ಸಂಚಾರಕ್ಕೆ ಲಭ್ಯವಾಗುವ ಸಾಧ್ಯತೆ ಇದೆ.

ಬೈಪಾಸಿನ ಒಂದು ಭಾಗದಲ್ಲಿ ಬೆಟ್ಟ ಕೊರೆಯುವ ಕಾಮಗಾರಿ ವಿಳಂಬ ಆದ ಕಾರಣಕ್ಕೆ ರಸ್ತೆಯನ್ನು ತಡವಾಗಿ ಉದ್ಘಾಟಿಸಲಾಗುತ್ತಿದೆ. ಸದ್ಯ ಮೈಸೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುವವರು ಈ ಬೈಪಾಸ್ ಬಳಸಬಹುದು.

ಇನ್ನೆರಡು ದಿನದಲ್ಲಿ ಇನ್ನೊಂದು ಬದಿಯನ್ನು ಮುಕ್ತಗೊಳಿಸಲಾಗುತ್ತದೆ. ರಾಮನಗರ ಚನ್ನಪಟ್ಟಣ ಬೈಪಾಸಿನ 23 ಕಿಲೋಮೀಟರ್ ಉದ್ದದ ಕಾಮಗಾರಿಗಳು ಅಂತಿಮ ಹಂತದಲ್ಲಿವೆ. ಅವುಗಳು ಸಹ ಗೌರಿ ಹಬ್ಬದ ವೇಳೆಗೆ ತೆರೆದುಕೊಳ್ಳಲಿದೆ ಸರ್ವಿಸ್ ರಸ್ತೆ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದರು.

andolanait

Recent Posts

ಶ್ರೀ ಮುತ್ತಪ್ಪ ಭಗವತಿ ದೇವಾಲಯದ ವಾರ್ಷಿಕೋತ್ಸವಕ್ಕೆ ತೆರೆ

ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…

11 hours ago

ಹನೂರು| ಆಕಸ್ಮಿಕ ಬೆಂಕಿ ತಗುಲಿ ಜೋಳದ ಮೆದೆ ಸಂಪೂರ್ಣ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…

11 hours ago

ಗಾಂಜಾ ಮಾರಾಟ, ಸೇವನೆ: ಪ್ರತ್ಯೇಕ ಪ್ರಕರಣದಲ್ಲಿ ನಾಲ್ವರ ಬಂಧನ

ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…

11 hours ago

ಹನೂರು| ತಾಲ್ಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…

11 hours ago

ಟಿ.ನರಸೀಪುರ: ಕೆಎಸ್‌ಐಸಿ ಫ್ಯಾಕ್ಟರಿ ಆವರಣದಲ್ಲಿ ಸ್ಟೇಡಿಯಂ ನಿರ್ಮಿಸುವ ಪ್ರಸ್ತಾವನೆ: ಬೀದಿಗಿಳಿದ ಕಾರ್ಮಿಕರು

ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್‌ಐಸಿ ಫಿಲೇಚರ್‌ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…

12 hours ago

ಕೇರಳ ಇನ್ನು ಮುಂದೆ ಕೇರಳಂ: ಹೆಸರು ಬದಲಾವಣೆಗೆ ಕೇಂದ್ರ ಸರ್ಕಾರ ಅಸ್ತು

ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…

12 hours ago