ಚಾಮರಾಜನಗರ: ಜಿಲ್ಲೆಯ ಪ್ರಸಿದ್ಧ ಪ್ರವಾಸಿಗರ ತಾಣವಾದ ಬಿಳಿಗಿರಿರಂಗನ ಬೆಟ್ಟಕ್ಕೆ ಶನಿವಾರ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸದೆ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಯಳಂದೂರು ಪಟ್ಟಣದ ಬಸ್ ನಿಲ್ದಾಣದಲ್ಲಿ ಗಂಟೆಗೊಂದು ಬಾರಿ ಬರುವ ಕೆಎಸ್ಸಾರ್ಟಿಸಿ ಬಸ್ ಗಳಿಂದ ಪ್ರವಾಸಿಗರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಭಕ್ತಾದಿಗಳು ಪರದಾಡುತ್ತಿದ್ದಾರೆ. ಶನಿವಾರದ ದಿನಗಳಂದು ಯಳಂದೂರಿನಿಂದ ಬಿಳಿಗಿರಿರಂಗನ ಬೆಟ್ಟಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ಭಕ್ತಾದಿಗಳು ತೆರಳುವುದರಿಂದ ಸಾಕಷ್ಟು ಸಂಖ್ಯೆಯಲ್ಲಿ ಬಸ್ ವ್ಯವಸ್ಥೆ ಕಲ್ಪಿಸಿ ಅನುಕೂಲ ಮಾಡಿಕೊಡಬೇಕು ಎಂದು ಭಕ್ತಾದಿಗಳು ಆಂದೋಲನ ಪತ್ರಿಕೆ ಮೂಲಕ ಮನವಿ ಮಾಡಿದ್ದಾರೆ.