ಜಿಲ್ಲೆಗಳು

ಬಿಳುಗಲಿ ಕೊಲೆ ಪ್ರಕರಣವನ್ನು CBIಗೆ ವಹಿಸಿ

ಚಾಮರಾಜನಗರ: ನಂಜನಗೂಡು ತಾಲ್ಲೂಕಿನ ಬಿಳುಗಲಿ ಗ್ರಾಮದ ತಾಯಿ-ಮಗಳ ಕೊಲೆ ಪ್ರಕರಣವನ್ನು ಮೈಸೂರು ಜಿಲ್ಲಾಡಳಿತ ಮತ್ತು ಪೊಲೀಸರು ಭೇದಿಸಿ ಆರೋಪಿಗಳನ್ನು ಬಂಧಿಸುವಲ್ಲಿ ವಿಫಲವಾದ್ದರಿಂದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಸಮಾಜವಾದಿ ಜನತಾ ಪಕ್ಷದ ಅಧ್ಯಕ್ಷ ಜಿ.ಎಂ.ಗಾಡ್ಕರ್ ಆಗ್ರಹಿಸಿದ್ದಾರೆ.

೧೨೬ ದಿನಗಳ ಹಿಂದೆ ಗ್ರಾಮದ ಪುಟ್ಟರಂಗಮ್ಮ ಮತ್ತು ಆಕೆಯ ಮಗಳು ಮಣಿ ಎಂಬುವರ ಮೇಲೆ ಗುಂಪೊoದು ಹಲ್ಲೆ ಮಾಡಿದ್ದಲ್ಲದೆ ಸಾಮೂಹಿಕ ಅತ್ಯಾಚಾರ ಮಾಡಿ ಕೊಲೆ ಮಾಡಿದೆ. ಬಳಿಕ ಇಬ್ಬರ ಶವವನ್ನು ಸೀರೆಯಿಂದ ಒಟ್ಟಿಗೆ ಬಿಗಿದು ಸಮೀಪದಲ್ಲಿದ್ದ ನೀರಿನ ಹಳ್ಳಕ್ಕೆ ಎಸೆದು ಹತ್ಯೆ ಮಾಡಲಾಗಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಕೊಲೆಯಾದ ೫ ದಿನಗಳ ನಂತರ ತಾಯಿ-ಮಗಳ ದೇಹ ಮೇಲೆದ್ದವು. ವಿಷಯ ತಿಳಿದ ಸ್ಥಳೀಯ ಪೊಲೀಸರು ಮೃತ ದೇಹಗಳನ್ನು ತಹಶೀಲ್ದಾರ್ ಅವರಿಂದ ಮಹಜರು ಮಾಡಿಸಲಿಲ್ಲ. ವೈದ್ಯರಿಂದ ಮರಣೋತ್ತರ ಪರೀಕ್ಷೆ ನಡೆಸದೆ ಆತುರದಲ್ಲಿ ಸುಟ್ಟು ಹಾಕಿದ್ದಾರೆ. ಈ ಭಯಾನಕ ಕೊಲೆ ಪ್ರಕರಣದ ಬಗ್ಗೆ ಪೊಲೀಸ್ ಕ್ರೈಂ ನ್ಯೂಸ್‌ಗೂ ಪ್ರಕಟಣೆಗೂ ನೀಡದೆ ಮುಚ್ಚಿ ಹಾಕುವ ಹುನ್ನಾರ ನಡೆದಿದೆ ಎಂದು ದೂರಿದರು.
ಈ ಪ್ರಕರಣವನ್ನು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಆಪ್ತ ಕುಮಾರ ಎಂಬಾತನ ನೇತೃತ್ವದಲ್ಲಿ ಸುಟ್ಟು ಹಾಕಲಾಗಿದೆ. ಇಲ್ಲಿಯ ತನಕ ಡಿವೈಎಸ್ಪಿ ಗೋವಿಂದರಾಜು, ಇನ್ಸ್ಪೆಕ್ಟರ್ ಲಕ್ಷ್ಮಿಕಾಂತ ತಳವಾರ್, ಎಸ್‌ಐ. ಆರತಿ ಅವರು ಒಬ್ಬ ಆರೋಪಿಯನ್ನು ಬಂಧಿಸಿಲ್ಲ ಎಂದು ಆಪಾದಿಸಿದರು.

andolanait

Recent Posts

ಕೆರೆ ಅಭಿವೃದ್ಧಿಪಡಿಸಿ ರೈತರಿಗೆ ಅನುಕೂಲ ಕಲ್ಪಿಸಲಾಗುವುದು : ಹನೂರು ಶಾಸಕ ಮಂಜುನಾಥ್‌

ಹನೂರು : ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಅಭಿವೃದ್ಧಿಪಡಿಸಿ ನೀರಾವರಿ ವ್ಯವಸ್ಥೆ ಕಲ್ಪಿಸುವುದರ ಮೂಲಕ ರೈತರಿಗೆ ವ್ಯವಸಾಯಕ್ಕೆ ಹೆಚ್ಚಿನ…

10 mins ago

ಹನೂರು | ಸುಗಮ ಸಂಚಾರಕ್ಕೆ 4.5ಕೋಟಿ ವೆಚ್ಚದಲ್ಲಿ 2 ಸೇತುವೆ ನಿರ್ಮಾಣ

ಹನೂರು : ಮಳೆಗಾಲದ ಸಂದರ್ಭದಲ್ಲಿ ರೈತರು ಹಾಗೂ ನೆರೆಯ ತಮಿಳುನಾಡಿಗೆ ತರಕಾರಿ ತೆಗೆದುಕೊಂಡು ಹೋಗುತ್ತಿದ್ದ ವಾಹನ ಸವಾರರಿಗೆ ತೊಂದರೆಯಾಗುತ್ತಿದ್ದ ಹಿನ್ನೆಲೆ,…

24 mins ago

ರಾಜ್ಯದ 2 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ : ಇಲ್ಲಿದೆ ಮಾಹಿತಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗವು(ಇಸಿಐ) ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕವನ್ನು ಭಾನುವಾರ ಪ್ರಕಟಿಸಿದೆ. ಈ ಕುರಿತು…

43 mins ago

ಪಂಚ ರಾಜ್ಯಗಳ ಚುನಾವಣೆಗೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ

ಹೊಸದಿಲ್ಲಿ : 4 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭಾ ಚುನಾವಣೆ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗ(ಇಸಿಐ) ಅಧಿಕೃತವಾಗಿ…

1 hour ago

ಸೌದಿ ಅರೇಬಿಯಾದಲ್ಲಿರುವ ಅಮೇರಿಕಾದ ವಾಯುನೆಲೆಯ ಮೇಲೆ ಇರಾನ್‌ ದಾಳಿ

ಟೆಹರಾನ್:‌ ಯುಎಸ್‌ ಮಿಲಿಟರಿ ಬಳಸುತ್ತಿದ್ದ ಸೌದಿ ಅರೇಬಿಯಾದ ಅಲ್‌ ಖಾರ್ಜ್‌ ವಾಯುನೆಲೆಯ ಮೇಲೆ ಇರಾನ್‌ ಕ್ಷಿಪಣಿ ದಾಳಿ ನಡೆಸಿದೆ. ಕೆಲವು…

3 hours ago

ಸ್ವಲ್ಪ ಮಟ್ಟಿಗೆ ಹೋಟೆಲ್‌ಗಳಿಗೆ ವಾಣಿಜ್ಯ ಎಲ್‌ಪಿಜಿ ನೀಡುವ ಬಗ್ಗೆ ಚರ್ಚೆ: ಸಚಿವ ಮುನಿಯಪ್ಪ

ಬೆಂಗಳೂರು: ನಗರದಲ್ಲಿ ವಾಣಿಜ್ಯ ಎಲ್‌ಪಿಜಿ ಕೊರತೆ ಮುಂದುವರಿದಿದ್ದು, ಸ್ವಲ್ಪ ಮಟ್ಟಿಗೆ ಹೋಟೆಲ್‌ಗಳಿಗೆ ಎಲ್‌ಪಿಜಿ ನೀಡಲು ಚರ್ಚಿಸುತ್ತೇವೆ ಎಂದು ಸಚಿವ ಮುನಿಯಪ್ಪ…

3 hours ago