ಮೈಸೂರು : ಬಿಜೆಪಿ ಸರ್ಕಾದ ದುರಾಡಳಿತದಿಂದಾಗಿ ಕರ್ನಾಟಕದಲ್ಲಿ ಈಗ ಶಾಂತಿಯು ಮನೆ ಮಾಡಿಲ್ಲ, ಕುವೆಂಪು ಅವರ ಸ್ವಜನಾಂಗದ ಶಾಂತಿಯ ತೋಟ ಎಂಬ ಅವರ ಮಾತಿಗೆ ಹಿನ್ನಡೆಯಾಗಿದೆ. ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬೇಸರವನ್ನು ಹೊರಹಾಕಿದ್ದಾರೆ.
ನಗರದಲ್ಲಿಂದು ಕಾಂಗ್ರೆಸ್ ಭವನದಲ್ಲಿ ಆಯೋಜನೆ ಮಾಡಲಾಗಿದ್ದ ಭಾರತ ಜೋಡೋ ಪಾದ ಯಾತ್ರೆಯ ಪೂರ್ವ ಸಿದ್ಧತಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮನುಷ್ಯರಾಗಿ ಬಾಳುವುದನ್ನು ನಮಗೆ ಸಂವಿಧಾನ ಹೇಳಿಕೊಟ್ಟಿದೆ.ಇಲ್ಲಿ ಎಲ್ಲಾ ಧರ್ಮದವರೂ ಒಂದೇ ಆದರೆ ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯಿದೆಯನ್ನು ವಾಪಸ್ ಪಡೆದುಕೊಂಡಿರುವುದು ಸಂವಿಧಾನದ ಮೂಲ ತತ್ವಗಳಿಗೆ ವಿರುದ್ಧವಾಗಿ ನಡೆದುಕೊಂಡಿದೆ ಎಂದರು.
ಭಾರತ್ ಜೋಡೋ ಯಾತ್ರೆಯು ಅ. 1ನೇ ತಾರೀಖಿನಂದು ಜಿಲ್ಲೆಯನ್ನು ಪ್ರವೇಶ ಮಾಡಲಿದ್ದು, 2ನೇ ತಾರೀಖಿನಂದು ನಂಜನಗೂಡಿನ ಬದನವಾಳು ಗ್ರಾಮಕ್ಕೆ ಕಾಂಗ್ರೆಸ್‌ನಾಯಕ ರಾಹುಲ್ ಗಾಂಧಿ ಅವರು ಭೇಟಿ ನೀಡಲಿದ್ದಾರೆ. ಇಲ್ಲಿ ಗಾಂಧಿ ಜಯಂತಿಯನ್ನು ಆಚರಣೆ ಮಾಡಲಾಗುವುದು. ಬಳಿಕ ಯಾತ್ರೆಯು ಕಡಕೊಳದಿಂದ ಮೈಸೂರಿನ ಅರಮನೆಯವರೆಗೆ ಸಾಗಲಿದೆ ಎಂದರು.
ಕಾರ್ಯಕ್ರಮದಲ್ಲಿ ಕೆಪಿಸಿಸಿಅಧ್ಯಕ್ಷ ಡಿಕೆ ಶಿವಕುಮಾರ್, ಕಾರ್ಯಾಧ್ಯಕ್ಷ ಧ್ರುವನಾರಾಯಣ,ಮಾಜಿ ಸಚಿವರಾದ ಮಹದೇವಪ್ಪ, ,ಕೆ.ವೆಂಕಟೇಶ್, ತನ್ವೀರ್ ಸೇಠ್, ವಿನಯ್ ಕುಮಾರ್ ಸೊರಕೆ, ಶಾಸಕರಾದ ಡಾ.ತಿಮ್ಮಯ್ಯ,ಅನಿಲ್ ಚಿಕ್ಕಮಾದು, ಸೇರಿದಂತೆ ಜಿಲ್ಲಾಧ್ಯಕ್ಷ ವಿಜಯ್ ಕುಮಾರ್ ಮುಂತಾದವರು ಭಾಗವಹಿಸಿದ್ದರು.





