ಜಿಲ್ಲೆಗಳು

ಬಿಜೆಪಿಯು ಧರ್ಮದ ಹೆಸರಲ್ಲಿ ಜನರನ್ನು ಒಡೆಯುವ ಕೆಲಸ ಮಾಡುತ್ತಿದೆ : ಸಿದ್ದರಾಮಯ್ಯ

ಮೈಸೂರು : ಬಿಜೆಪಿ ಸರ್ಕಾದ ದುರಾಡಳಿತದಿಂದಾಗಿ ಕರ್ನಾಟಕದಲ್ಲಿ ಈಗ ಶಾಂತಿಯು ಮನೆ ಮಾಡಿಲ್ಲ, ಕುವೆಂಪು ಅವರ ಸ್ವಜನಾಂಗದ ಶಾಂತಿಯ ತೋಟ ಎಂಬ ಅವರ ಮಾತಿಗೆ ಹಿನ್ನಡೆಯಾಗಿದೆ. ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬೇಸರವನ್ನು ಹೊರಹಾಕಿದ್ದಾರೆ.

ನಗರದಲ್ಲಿಂದು ಕಾಂಗ್ರೆಸ್ ಭವನದಲ್ಲಿ ಆಯೋಜನೆ ಮಾಡಲಾಗಿದ್ದ ಭಾರತ ಜೋಡೋ ಪಾದ ಯಾತ್ರೆಯ ಪೂರ್ವ ಸಿದ್ಧತಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮನುಷ್ಯರಾಗಿ ಬಾಳುವುದನ್ನು ನಮಗೆ ಸಂವಿಧಾನ ಹೇಳಿಕೊಟ್ಟಿದೆ.ಇಲ್ಲಿ ಎಲ್ಲಾ ಧರ್ಮದವರೂ ಒಂದೇ ಆದರೆ ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯಿದೆಯನ್ನು ವಾಪಸ್‌ ಪಡೆದುಕೊಂಡಿರುವುದು ಸಂವಿಧಾನದ ಮೂಲ ತತ್ವಗಳಿಗೆ ವಿರುದ್ಧವಾಗಿ ನಡೆದುಕೊಂಡಿದೆ ಎಂದರು.

ಭಾರತ್‌ ಜೋಡೋ ಯಾತ್ರೆಯು ಅ. 1ನೇ ತಾರೀಖಿನಂದು ಜಿಲ್ಲೆಯನ್ನು ಪ್ರವೇಶ ಮಾಡಲಿದ್ದು, 2ನೇ ತಾರೀಖಿನಂದು ನಂಜನಗೂಡಿನ ಬದನವಾಳು ಗ್ರಾಮಕ್ಕೆ ಕಾಂಗ್ರೆಸ್‌ನಾಯಕ ರಾಹುಲ್‌ ಗಾಂಧಿ ಅವರು ಭೇಟಿ ನೀಡಲಿದ್ದಾರೆ. ಇಲ್ಲಿ ಗಾಂಧಿ ಜಯಂತಿಯನ್ನು ಆಚರಣೆ ಮಾಡಲಾಗುವುದು. ಬಳಿಕ ಯಾತ್ರೆಯು ಕಡಕೊಳದಿಂದ ಮೈಸೂರಿನ ಅರಮನೆಯವರೆಗೆ ಸಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಕೆಪಿಸಿಸಿಅಧ್ಯಕ್ಷ ಡಿಕೆ ಶಿವಕುಮಾರ್‌, ಕಾರ್ಯಾಧ್ಯಕ್ಷ ಧ್ರುವನಾರಾಯಣ,ಮಾಜಿ ಸಚಿವರಾದ ಮಹದೇವಪ್ಪ, ,ಕೆ.ವೆಂಕಟೇಶ್, ತನ್ವೀರ್ ಸೇಠ್, ವಿನಯ್ ಕುಮಾರ್ ಸೊರಕೆ, ಶಾಸಕರಾದ ಡಾ.ತಿಮ್ಮಯ್ಯ,ಅನಿಲ್ ಚಿಕ್ಕಮಾದು, ಸೇರಿದಂತೆ ಜಿಲ್ಲಾಧ್ಯಕ್ಷ ವಿಜಯ್ ಕುಮಾರ್ ಮುಂತಾದವರು ಭಾಗವಹಿಸಿದ್ದರು.

andolanait

Recent Posts

ಸ್ವಾತಂತ್ರ್ಯ ಚಳುವಳಿಗೆ ವಂದೇ ಮಾತರಂ ಶಕ್ತಿ ತುಂಬಿತು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು. ಈ ಕುರಿತು…

1 hour ago

ಸಿಎಂ ಸಿದ್ದರಾಮಯ್ಯಗೆ ಬಿಗ್‌ಶಾಕ್‌ ಕೊಟ್ಟ ಸುಪ್ರೀಂಕೋರ್ಟ್‌

ನವದೆಹಲಿ: ಚುನಾವಣಾ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್‌ ನೋಟಿಸ್‌ ನೀಡಿದೆ. ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ…

1 hour ago

ಬೆಳಗಾವಿ ಚಳಿಗಾಲದ ಅಧಿವೇಶನ: ಮೊದಲಿಗೆ ಅಗಲಿದ ಗಣ್ಯರಿಗೆ ಸಂತಾಪ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇತ್ತೀಚೆಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಿದರು. ವಿಧಾನಸಭೆಯಲ್ಲಿ ವಂದೇಮಾತರಂ ಗೀತೆ…

2 hours ago

ಮುಂದುವರಿದ ಇಂಡಿಗೋ ಸಮಸ್ಯೆ: ದೇಶಾದ್ಯಂತ 450ಕ್ಕೂ ಹೆಚ್ಚು ವಿಮಾನಗಳು ರದ್ದು

ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ಸಂಚಾರ ವ್ಯತ್ಯಯ, ವಿಮಾನ ವಿಳಂಬ ಸಮಸ್ಯೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಇಂದು 127…

2 hours ago

ನಟಿ ಮೇಲೆ ಅತ್ಯಾಚಾರ ಕೇಸ್‌: ಮಲಯಾಳಂ ಸ್ಟಾರ್‌ ನಟ ದಿಲೀಪ್‌ ಖುಲಾಸೆ

ಕೇರಳ: ಸುಮಾರು ಎಂಟು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ, 2017ರಲ್ಲಿ ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಲಯಾಳಂ…

2 hours ago

ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋದ ನಟ ದರ್ಶನ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋಗಿದ್ದಾರೆ ಎನ್ನಲಾಗಿದೆ.…

3 hours ago