ಹನೂರು ( ಮಾರ್ಟಳ್ಳಿ): ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಆಗಿದ್ದ ಹೆಚ್‍ಡಿ ಕುಮಾರಸ್ವಾಮಿರವರ ಜನಪರ ಆಡಳಿತ ನೋಡಿ ಕ್ಷೇತ್ರ ವ್ಯಾಪ್ತಿಯಲ್ಲಿ ಜಾದಳ ಸೇರ್ಪಡೆಯಾಗುತ್ತಿರುವುದು ಸಂತಸದ ವಿಚಾರ ಎಂದು ಜಾದಳ ಮುಖಂಡ ಎಮ್ ಆರ್ ಮಂಜುನಾಥ್ ತಿಳಿಸಿದರು.
ಮುಂದಿನ ವಿಧಾನಸಭಾ ಚುನಾವಣೆಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರವರು ಪಂಚ ರತ್ನ ಕಾರ್ಯಕ್ರಮದ ಹಮ್ಮಿಕೊಂಡಿದ್ದಾರೆ.ಈ ಕಾರ್ಯಕ್ರಮಗಳಿಂದ ಎಲ್ಲ ಸಮಾಜದ ಹಾಗೂ ಬಡವರಿಗೆ ಅನುಕೂಲವಾಗಲಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೇವಲ 15 ದಿನಗಳಲ್ಲಿ 44,457 ಮತಗಳನ್ನು ನೀಡುವ ಮೂಲಕ ನನಗೆ ಹೆಚ್ಚಿನ ಜವಾಬ್ದಾರಿ ನೀಡಿದ್ದೀರಿ, ನಿಮ್ಮ ಈ ಋಣವನ್ನು ಎಂದಿಗೂ ತೀರಿಸಲು ಸಾಧ್ಯವಿಲ್ಲ. ಚುನಾವಣೆಯಲ್ಲಿ ಪರಾಭವ ಗೊಂಡರು ಸಹ ಎದೆಗುಂದದೆ ನಿಮ್ಮ ಕಷ್ಟ ಸುಖಗಳಲ್ಲಿ ಸದಾ ಭಾಗಿಯಾಗಿದ್ದೇನೆ.
ಕ್ಷೇತ್ರ ವ್ಯಾಪ್ತಿಯಲ್ಲಿನ ಬಡವರು ನಿರ್ಗತಿಕರು ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ತರಬೇತಿ ಶಿಬಿರಗಳನ್ನು ಹಮ್ಮಿಕೊಂಡು ನನ್ನ ಕೈಲಾದ ಸೇವೆ ಮಾಡಿದ್ದೇನೆ. ಮುಂದಿನ ಚುನಾವಣೆಯಲ್ಲಿ ನನಗೊಂದು ಅವಕಾಶ ಮಾಡಿಕೊಟ್ಟರೆ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಮೊದಲ ಆದ್ಯತೆ ಕೊಡಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮುಖಂಡರುಗಳು ನಮಗೆ ನೀವು ಯಾವುದೇ ಅನುಕೂಲ ಕಲ್ಪಿಸದಿದ್ದರೂ ಪರವಾಗಿಲ್ಲ ನಮ್ಮ ಗ್ರಾಮಕ್ಕೆ ರಸ್ತೆ ಸಮಸ್ಯೆ ಬಗೆಹರಿಸಿ ಎಂದು ಮನವಿ ಮಾಡಿಕೊಂಡರು.
ಬೆಂಗಳೂರು : ಹಿಂದೂ, ಬೌದ್ಧ ಮತ್ತು ಸಿಖ್ ಧರ್ಮೀಯರನ್ನು ಹೊರತುಪಡಿಸಿ ಇತರ ಧರ್ಮಕ್ಕೆ ಮತಾಂತರಗೊಂಡವರು ಪರಿಶಿಷ್ಟ ಜಾತಿ (ಎಸ್‌ಸಿ) ಸ್ಥಾನಮಾನ…
ಮಡಿಕೇರಿ : ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದ ಬಳಿ ಮುಳ್ಳುಹಂದಿ ಪ್ರತ್ಯಕ್ಷವಾಗಿದೆ. ಓಡಾಡಲು ಕಷ್ಟವಾಗುವ ಸ್ಥಿತಿಯಲ್ಲಿದ್ದ ಈ ಮುಳ್ಳುಹಂದಿ…
ಹನೂರು : ತಾಲೂಕಿನ ಲೊಕ್ಕನಹಳ್ಳಿ ಗ್ರಾಮದ ಮನೋಹರ್ ಎಂಬುವರಿಗೆ ಸೇರಿದ 500ಕ್ಕೂ ಹೆಚ್ಚು ನಾಟಿ ಕೋಳಿಗಳಿಗೆ ರೋಗ ತಗುಲಿ ಮೃತಪಟ್ಟಿದ್ದರು,…
ಮುಂಬೈ : ‘ಕಾಂತಾರ’ ಸಿನಿಮಾದಲ್ಲಿ ದೈವದ ಕುರಿತು ವೇದಿಕೆ ಮೇಲೆ ಅನುಕರಣೆ ಮಾಡಿ ‘ಫೀಮೇಲ್ ಗೋಸ್ಟ್’ ಎಂದು ಕರೆದು ವಿವಾದಕ್ಕೆ…
ಸಿಕ್ಕಿಂ : ಉತ್ತರ ಸಿಕ್ಕಿಂನಲ್ಲಿ ಭಾರೀ ಮಳೆಯಿಂದ ಭೂಕುಸಿತ ಸಂಭವಿಸಿ, ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸುಮಾರು 200 ಪ್ರವಾಸಿಗರು ಚುಂಗ್‌ಥಾಂಗ್‌ನಲ್ಲಿ…
ವಾಷಿಂಗ್ಟನ್ : ಪಶ್ಚಿಮ ಏಪ್ಯಾ ಸಂಘರ್ಷ ಶಮನಕ್ಕೆ ನಡೆಯುತ್ತಿರುವ ಪ್ರಯತ್ನಗಳ ಮಧ್ಯೆ, ಟ್ರಂಪ್ ಆಡಳಿತ 15 ಅಂಶಗಳ ಪ್ರಸ್ತಾವನೆಯನ್ನು ಇರಾನ್…