ಜಿಲ್ಲೆಗಳು

ಬಿಜೆಪಿ ತೊರೆದು ತೆನೆ ಪಕ್ಷಕ್ಕೆ ಸೇರ್ಪಡೆ

ಹನೂರು ( ಮಾರ್ಟಳ್ಳಿ): ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಆಗಿದ್ದ ಹೆಚ್‍ಡಿ ಕುಮಾರಸ್ವಾಮಿರವರ ಜನಪರ ಆಡಳಿತ ನೋಡಿ ಕ್ಷೇತ್ರ ವ್ಯಾಪ್ತಿಯಲ್ಲಿ ಜಾದಳ ಸೇರ್ಪಡೆಯಾಗುತ್ತಿರುವುದು ಸಂತಸದ ವಿಚಾರ ಎಂದು ಜಾದಳ ಮುಖಂಡ ಎಮ್ ಆರ್ ಮಂಜುನಾಥ್ ತಿಳಿಸಿದರು.

ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಟಗರ ಕೋಟಾಯಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಾದಳ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮುಂದಿನ ವಿಧಾನಸಭಾ ಚುನಾವಣೆಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರವರು ಪಂಚ ರತ್ನ ಕಾರ್ಯಕ್ರಮದ ಹಮ್ಮಿಕೊಂಡಿದ್ದಾರೆ.ಈ ಕಾರ್ಯಕ್ರಮಗಳಿಂದ ಎಲ್ಲ ಸಮಾಜದ ಹಾಗೂ ಬಡವರಿಗೆ ಅನುಕೂಲವಾಗಲಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೇವಲ 15 ದಿನಗಳಲ್ಲಿ 44,457 ಮತಗಳನ್ನು ನೀಡುವ ಮೂಲಕ ನನಗೆ ಹೆಚ್ಚಿನ ಜವಾಬ್ದಾರಿ ನೀಡಿದ್ದೀರಿ, ನಿಮ್ಮ ಈ ಋಣವನ್ನು ಎಂದಿಗೂ ತೀರಿಸಲು ಸಾಧ್ಯವಿಲ್ಲ. ಚುನಾವಣೆಯಲ್ಲಿ ಪರಾಭವ ಗೊಂಡರು ಸಹ ಎದೆಗುಂದದೆ ನಿಮ್ಮ ಕಷ್ಟ ಸುಖಗಳಲ್ಲಿ ಸದಾ ಭಾಗಿಯಾಗಿದ್ದೇನೆ.


ಕ್ಷೇತ್ರ ವ್ಯಾಪ್ತಿಯಲ್ಲಿನ ಬಡವರು ನಿರ್ಗತಿಕರು ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ತರಬೇತಿ ಶಿಬಿರಗಳನ್ನು ಹಮ್ಮಿಕೊಂಡು ನನ್ನ ಕೈಲಾದ ಸೇವೆ ಮಾಡಿದ್ದೇನೆ. ಮುಂದಿನ ಚುನಾವಣೆಯಲ್ಲಿ ನನಗೊಂದು ಅವಕಾಶ ಮಾಡಿಕೊಟ್ಟರೆ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಮೊದಲ ಆದ್ಯತೆ ಕೊಡಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮುಖಂಡರುಗಳು ನಮಗೆ ನೀವು ಯಾವುದೇ ಅನುಕೂಲ ಕಲ್ಪಿಸದಿದ್ದರೂ ಪರವಾಗಿಲ್ಲ ನಮ್ಮ ಗ್ರಾಮಕ್ಕೆ ರಸ್ತೆ ಸಮಸ್ಯೆ ಬಗೆಹರಿಸಿ ಎಂದು ಮನವಿ ಮಾಡಿಕೊಂಡರು.

ಮುಖಂಡರುಗಳಾದ ಮಹದೇವಸ್ವಾಮಿ ಭಾಗ್ಯರಾಜ್ ಪುಟ್ಟ ತಂಬಡಿ ಮಾದಯ್ಯ ತಂಬಡಿ ಬಸವರಾಜ್ ಮಹೇಶ್ ಪ್ರಸಾದ್ ನಾಗರಾಜ್ ಈರಣ್ಣ ಮಾದಯ್ಯ, ಶಿವಕುಮಾರ್ ರಾಮಪ್ಪ ಜಯಮ್ಮ ರಾಜಮ್ಮ ಸುಗಣ್ಯ ಚಿನ್ನ ತಾಯಿ ಸಗಾಯಿ ಮೇರಿ ಮಾರಮ್ಮ ರಾಜಮ್ಮ ರಾಣಿ ಕೆಂಪಮ್ಮ ಸಿದ್ದರಾಜು ರತ್ನಮ್ಮ ಪುಟ್ಟಮ್ಮ ಮಾದೇವಿ ಶಾಕಿ ರಾಣಿ ಚಿಕ್ಕತಾಯಿ ಚಿಕ್ಕಮ್ಮ ಮಾದಮ್ಮ ಸೇರಿದಂತೆ ಎಲ್ಲಿದ್ದರೂ ಬಿಜೆಪಿ ಪಕ್ಷ ತೊರೆದು ಜಾದಳ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಚಾಮುಲ್ ಅಧ್ಯಕ್ಷ ಗುರುಮಲ್ಲಪ್ಪ ಜಿ ಪಂ ಮಾಜಿ ಉಪಾಧ್ಯಕ್ಷ ಶಿವಮೂರ್ತಿ,ತಾಪಂ ಮಾಜಿ ಸದಸ್ಯ ಮಣಿ, ಗ್ರಾಪಂ ಸದಸ್ಯ ಅರುಳ್ ಸೆಲ್ವಮ್ ಸೇರಿದಂತೆ ಇನ್ನಿತರರು ಹಾಜರಿದ್ದರು.

andolanait

Recent Posts

ಓದುಗರ ಪತ್ರ | ರಾಜ್ಯ ವಿಧಾನ ಮಂಡಲ ಅಧಿವೇಶನ ಸದ್ಬಳಕೆಗೆ ದಾರಿ ಯಾವುದಯ್ಯ!?

ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…

24 mins ago

ಓದುಗರ ಪತ್ರ | ಹಿಂದಿ ಶಿಕ್ಷಕರ ನೇಮಕಾತಿ ಏಕಿಲ್ಲ?

15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…

32 mins ago

ಓದುಗರ ಪತ್ರ | ಕನ್ನಡ ಚಿತ್ರ; ಟಿಕೆಟ್‌ಗಳಲ್ಲಿ ಆಂಗ್ಲ ಹೆಸರು !

ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್‌ನಲ್ಲಿ ಚಿತ್ರದ…

36 mins ago

ಓದುಗರ ಪತ್ರ | ಮತದಾರರ ಕರಡು ಪಟ್ಟಿಯ ತಪ್ಪುಗಳನ್ನು ಸರಿಪಡಿಸಿ

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್‌ಐಆರ್ ಬಗ್ಗೆ ಹಲವಾರು ಅನುಮಾನ…

39 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಕಳಚಿದ ಚಲನಚಿತ್ರ ಪತ್ರಿಕೋದ್ಯಮದ ಹಿರಿಯ ಕೊಂಡಿ ಶ್ರೀಕೃಪಾ

ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…

50 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 28  ಶುಕ್ರವಾರ

1 hour ago