ಹನೂರು: ಮಲೆಮಹದೇಶ್ವರ ಬೆಟ್ಟ ಗ್ರಾಮಪಂಚಾಯಿತಿ ವ್ಯಾಪ್ತಿಯ 29 ಬಿಜೆಪಿ ಬೆಂಬಲಿತ ಸದಸ್ಯರು ಒಗ್ಗಟ್ಟಾಗಿದ್ದೇವೆ ಕೆಲವೊಂದು ಮಾಧ್ಯಮಗಳಲ್ಲಿ ಬಂದಿರುವ ವರದಿ ಸತ್ಯಕ್ಕೆ ದೂರವಾದುದು ಎಂದು ಮ,ಬೆಟ್ಟ ಗ್ರಾಪಂ ಅಧ್ಯಕ್ಷ ಕುಮಾರ್ ತಿಳಿಸಿದರು.
ಪಟ್ಟಣದ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ(ರಿ) ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಬಿಜೆಪಿ ಜಿಲ್ಲಾ ಸಂಯೋಜಕ ಜನಧ್ವನಿ ಬಿ ವೆಂಕಟೇಶ್ ಅವರ ನೇತೃತ್ವದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಎದುರಿಸಿದ್ದೇವೆ.ಇವರ ಸಹಕಾರದಿಂದ 29
ಬಿಜೆಪಿ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದೇವೆ. ಆಂತರಿಕ ಒಪ್ಪಂದದಂತೆ ಹದಿನೈದು ತಿಂಗಳ ಅವಧಿ ನನಗೆ ಅಧ್ಯಕ್ಷ ಸ್ಥಾನ ನಿಗದಿಪಡಿಸಲಾಗಿತ್ತು. ತದನಂತರ ರಾಜಿನಾಮೆಯನ್ನು ಸಹ ನೀಡಿದ್ದೆ ಆದರೆ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ರಾಜೀನಾಮೆ ವಾಪಸ್ ಪಡೆದುಕೊಂಡೆ,ಆ ನಂತರ ಕೆಲವರು ಅವಿಶ್ವಾಸ ಮಂಡನೆಗೆ ಉಪವಿಭಾಗಾಧಿಕಾರಿಗಳಿಗೆ ದೂರು ನೀಡಿದ್ದರು.ಆದರೆ ಕಾಂಗ್ರೆಸ್ ಬೆಂಬಲಿತ ಸದಸ್ಯರು ಸೇರಿದಂತೆ ಎಲ್ಲ ಸದಸ್ಯರು ನನಗೆ ಬೆಂಬಲ ನೀಡುವುದಾಗಿ ತಿಳಿಸಿ ನನಗೆ ಸಹಕಾರ ನೀಡಿದ್ದಾರೆ .ನಾನು ವಿಶ್ವಾಸ ಮಂಡಿಸಿದ್ದೇನೆ ಎಂದು ತಿಳಿಸಿದರು.
ಗ್ರಾಪಂ ಸದಸ್ಯ ಶರವಣ ಮಾತನಾಡಿ ನಾವು ಎಲ್ಲಾ ಸದಸ್ಯರು ಒಗ್ಗಟ್ಟಿನಿಂದ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿಯನ್ನು ಮಾದರಿ ಗ್ರಾಮ ಪಂಚಾಯಿತಿಯನ್ನಾಗಿ ಮಾಡಲು ಶ್ರಮಿಸುತ್ತಿದ್ದೇವೆ. ಆದರೆ ಕೆಲವರು ಇಲ್ಲಸಲ್ಲದ ಆರೋಪಗಳನ್ನು ಮಾಡಿ ನಮ್ಮ ಒಗ್ಗಟ್ಟನ್ನು ಮುರಿಯಲು ಯತ್ನಿಸುತ್ತಿದ್ದಾರೆ ಇದು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ. ನಾವು ಜನಧ್ವನಿ ಬಿ ವೆಂಕಟೇಶ್ ರವರ ಮಾರ್ಗದರ್ಶನದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ .ಅವರು ಯಾರನ್ನೂ ಸಹ ಎತ್ತಿಕಟ್ಟಿಲ್ಲ ಇದೆಲ್ಲ ಊಹಾಪೋಹ ಯಾರೂ ಸಹ ಇದಕ್ಕೆ ಕಿವಿಗೊಡಬಾರದು, ನಾವು ಒಂದೇ ಬಣ ಅದು ಜನಧ್ವನಿ ಬಿ ವೆಂಕಟೇಶ್ ಅವರ ಬಣ ಎಂದು ಸ್ಪಷ್ಟನೆ ನೀಡಿದರು.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…