ಮಂಡ್ಯ: ಮಹದಾಯಿ ನೀರನ್ನು ಕರ್ನಾಟಕಕ್ಕೆ ಕೊಡಬೇಡಿ ಎಂದಿದ್ದ ಸೋನಿಯಾ ಗಾಂಧಿಯೊಂದಿಗೆ ರಾಹುಲ್‌ಗಾಂಧಿ ಭಾರತ್ ಜೋಡೊ ಪಾದಯಾತ್ರೆ ಮಾಡುತ್ತಿರುವುದನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ನಗರದ ಸಾರಿಗೆ ಬಸ್ ನಿಲ್ದಾಣದಲ್ಲಿ ಪೋಸ್ಟರ್ ಅಂಟಿಸಿ ಅಭಿಯಾನ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್, ಗೋವಾದಲ್ಲಿ ನಡೆದ ವಿಧಾನ ಸಭಾ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ಅವರು ಕರ್ನಾಟಕ ರಾಜ್ಯಕ್ಕೆ ಒಂದು ಹನಿ ನೀರನ್ನೂ ಮಹದಾಯಿ ನದಿಯಿಂದ ಕೊಡಬೇಡಿ ಎಂದು ಹೇಳಿಕೆ ನೀಡುವ ಮೂಲಕ ಒಕ್ಕೂಟ ವ್ಯವಸ್ಥೆಗೆ ಅಪಮಾನ ಮಾಡಿದ್ದರು. ಈಗ ಮಂಡ್ಯದಲ್ಲಿ ಭಾರತ್ ಜೋಡೊ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಹನಿ ನೀರನ್ನೂ ಕೊಡಬೇಡಿ ಎಂದಿದ್ದ ಸೋನಿಯಾ ಮತ್ತು ರಾಹುಲ್ ಗಾಂಧಿಯವರಿಗೆ ಮಂಡ್ಯದಲ್ಲೇ ಬಿಸ್ಲರಿ ವಾಟರನ್ನು ನೀಡುತ್ತೇವೆ. ಒಕ್ಕೂಟ ವ್ಯವಸ್ಥೆಯಲ್ಲಿ ಎಲ್ಲ ರಾಜ್ಯಗಳನ್ನೂ ಸರಿಯಾಗಿ ಕೊಂಡೊಯ್ಯುವ ನಿಟ್ಟಿನಲ್ಲಿ ರಾಷ್ಟ್ರೀಯ ನಾಯಕರು ಉದಾರತೆಯನ್ನು ಮೆರೆಯಬೇಕು. ಅದನ್ನು ಬಿಟ್ಟು ಒಡೆದು ಆಳುವ ನೀತಿ ಅನುಸರಿಸುವುದು ಸರಿಯಲ್ಲ ಎಂದು ಕಿಡಿಕಾರಿದರು.
ಕರ್ನಾಟಕ ವಿರೋಧಿ ಹೇಳಿಕೆ ನೀಡಿದ್ದ ಸೋನಿಯಾಗಾಂಧಿ ಅವರ ವಿರುದ್ಧ ನಾವು ಪೋಸ್ಟರ್ ಅಭಿಯಾನ ಮಾಡುತ್ತಿದ್ದೇವೆ. ಇಂತಹ ಜನವಿರೋಧಿ ಹೇಳಿಕೆ ನೀಡಿರುವ ನಿಮಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುವಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರೊಂದಿಗೆ ರಾಜ್ಯದಲ್ಲಿ ಪಾದಯಾತ್ರೆ ನಡೆಸುವ ನೈತಿಕತೆಯಾದರೂ ಇದೆಯೇ ಎಂದು ಪ್ರಶ್ನಿಸಿದರು.
ಬಿಜೆಪಿ ಮುಖಂಡರಾದ ಹೊಸಹಳ್ಳಿ ಶಿವು, ಹನಿಯಂಬಾಡಿ ನಾಗರಾಜು, ಮಾದರಾಜ ಅರಸ್ ಇತರರು ಪೋಸ್ಟರ್ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…