ಹನೂರು: ದೇಶದಲ್ಲಿ ಧರ್ಮ ಧರ್ಮಗಳ ನಡುವೆ ಕಂದಕ ಸೃಷ್ಟಿಸಿ ಶಾಂತಿ ಕದಡುವ ಮೂಲಕ ಬಿಜೆಪಿ ಸಮುದಾಯಗಳನ್ನು ಒಡೆಯುವ ಪ್ರಯತ್ನ ಮಾಡುತ್ತಿದೆ. ಇದನ್ನು ಒಗ್ಗೂಡಿಸುವ ಸಲುವಾಗಿ ಭಾರತ್ ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಮನವಿ ಮಾಡಿದರು.
ರಾಜ್ಯದಲ್ಲಿ 40% ಸರ್ಕಾರ ನಡೆಸುತ್ತಿರುವ ರಾಜ್ಯ ಬಿಜೆಪಿ ನಾಯಕರಿಗೆ ರಾಜ್ಯದ ಜನತೆಯ ಮೇಲೆ ಒಲವಿಲ್ಲ. ಪ್ರತಿ ಕೆಲಸದಲ್ಲೂ ಪರ್ಸೆಂಟೇಜ್ ತಗೆದುಕೊಳ್ಳುವ ಮೂಲಕ ದೇಶದ ಗಮನ ಸೆಳೆಯುವ ಮೂಲಕ ಕುಖ್ಯಾತಿ ಗಳಿಸಿದೆ. ಇದೆಲ್ಲವನ್ನು ಜನರಿಗೆ ತಿಳಿಸುವ ಉದ್ದೇಶದಿಂದ ಈ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ.
ಬಿಜೆಪಿ ಇಂದು ಹೆಣ ಹಾಗೂ ಹಣದ ಮೇಲೆ ರಾಜಕಾರಣ ಮಾಡುತ್ತಿದೆ. ಸಾಕಷ್ಟು ಸಾಮಾಜಿಕ ಕೃತ್ಯಗಳನ್ನು ನಡೆಸಿ ಅದನ್ನು ಅಮಾಯಕರು ಅಥವಾ ಬೇರೆ ಪಕ್ಷದ ನಾಯಕರ ತಲೆಗೆ ಕಟ್ಟುವ ಪ್ರಯತ್ನ ಮಾಡುತ್ತಿದೆ. ಘಟನೆಗಳ ನಡೆದ ಬಳಿಕ ಮಾಡಿದ ತನಿಖೆಗಳಲ್ಲಿ ಇದು ಬಯಲಾಗಿದೆ. ಬೆಲೆ ಏರಿಕೆ ಹಾಗೂ ನಿರುದ್ಯೋಗ ಸಮಸ್ಯೆಯನ್ನು ಹುಟ್ಟು ಹಾಕುವ ಮೂಲಕ ಬಿಜೆಪಿ ಸಾಮಾನ್ಯರನ್ನು ಸಾವಿನ ದವಡೆಗೆ ಸಿಲುಕಿಸುವ ಪಯತ್ನ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಈಶ್ವರ್, ದೇವರಾಜು,ಕೆಪಿಸಿಸಿ ಸದಸ್ಯ ರಾಮಪುರ ಬಸವರಾಜು ಪಪಂ ಉಪಾಧ್ಯಕ್ಷ ಗಿರೀಶ್,ಸದಸ್ಯರುಗಳಾದ ಸುದೇಶ್, ಸಂಪತ್, ಹರೀಶ್ ಟಿಎಪಿಸಿಎಂಎಸ್ ಅಧ್ಯಕ್ಷ ಚಿಕ್ಕಮಾದನಾಯಕ,ನಿರ್ದೇಶಕ ಮುರುಡೇಶ್ವರ ಸ್ವಾಮಿ, ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳಾದ ಮುರುಗೇಶ್, ಸುಧಾ,ಯೂತ್ ಕಾಂಗ್ರೆಸ್ ಅಧ್ಯಕ್ಷ ಗುಂಡಾಪುರ ಮಾದೇಶ್,ಸುರೇಶ್ ಹಿರಿಯ ಮುಖಂಡರುಗಳ ಪೆದ್ದನಪಾಳ್ಯ ಮಣಿ, ಚಿಕ್ಕತಮ್ಮಯ್ಯ,ಅಜ್ಜಿಪುರ ನಾಗರಾಜು,ಮತೀನ್ ವೆಂಕಟರಮಣನಾಯ್ಡು, ಪಾಳ್ಯ ಕೃಷ್ಣ ಹಾಗೂ ಕಾರ್ಯಕರ್ತರು ಹಾಜರಿದ್ದರು
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…
ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…
ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…
ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…
ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…