ಬೆಂಗಳೂರು-ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಿರುವ ಬಿಜೆಪಿ ಮುಂದೆ ಭಯೋತ್ಪಾದಕರನ್ನು ಸೇರಿಸಿಕೊಂಡು ಇವರೇ ನೋಡಿ ನಮ್ಮ ದೇಶದ ನಿಜವಾದ ರಾಷ್ಟ್ರಪ್ರೇಮಿಗಳೆಂದು ಹೇಳಬಹುದು ಎಂಬ ಆತಂಕವನ್ನು ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ವ್ಯಕ್ತಪಡಿಸಿದ್ದಾರೆ.
ಟ್ವಿಟರ್ ನಲ್ಲಿ ಆಕ್ಷೇಪ ವ್ಯಕ್ತಪಡಿಸಿರುವ ಅವರು, 30-40 ಕೊಲೆ ಮಾಡಿರುವಂತಹ ರೌಡಿಗಳನ್ನು ಚುನಾವಣೆ ಹೊತ್ತಿನಲ್ಲಿ ಪಕ್ಷಕ್ಕೆ ಸೇರಿಸಿಕೊಂಡು ಏನೇನೋ ಸಮರ್ಥನೆ ನೀಡುತ್ತಾರೆ ಎಂದು ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಇಸ್ಲಾಮಾಬಾದ್‍ನಲ್ಲಿ ನಮ್ಮ ಧ್ವಜ ಹಾರಿಸುತ್ತೇವೆ ಎಂದು ಪದೇ ಪದೇ ಹೇಳುವುದನ್ನು ನೋಡಿದರೆ ಮುಂದೊಂದು ದಿನ ಭಯೋತ್ಪಾದಕರನ್ನು ಸೇರಿಸಿಕೊಂಡು ದೇಶಪ್ರೇಮಿಗಳೆಂದು ಬಿಂಬಿಸಬಹುದೇನೋ ಎಂಬ ಅನುಮಾನ ಕಾಡುತ್ತಿದೆ ಎಂದಿದ್ದಾರೆ.
ದೇಶಕ್ಕೆ ಮೊದಲ ಭಯೋತ್ಪಾದಕನನ್ನು ನೀಡಿದ ಗೋಡ್ಸೆ ಸಂತತಿಯವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ. ಮುಂದಿನ ರೌಡಿಗಳೇ ಮುಂದಿನ ಬಿಜೆಪಿ ಮುಖಂಡರು ಎಂಬುದು ವಾಸ್ತವ ಎಂದು ಲೇವಡಿ ಮಾಡಿದ್ದಾರೆ.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…