ಜಿಲ್ಲೆಗಳು

ಮಂಗಳೂರು ಸ್ಛೋಟ ಪ್ರಕರಣ: ಹೊಣೆ ಹೊತ್ತ ಐಆರ್‌ಸಿ

ಕದ್ರಿ ದೇವಸ್ಥಾನ ನಮ್ಮ ಟಾರ್ಗೆಟ್ ಆಗಿತ್ತು: ಉಗ್ರ ಸಂಘಟನೆ

ಮಂಗಳೂರು: ಮಂಗಳೂರಿನ ಆಟೋರಿಕ್ಷಾದಲ್ಲಿ ಸಂಭವಿಸಿದ ಸ್ಛೋಟ ಪ್ರಕರಣದ ಹೊಣೆಯನ್ನು ‘ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್’ (ಐಆರ್‌ಸಿ) ಎಂಬ ಉಗ್ರ ಸಂಘಟನೆ ಹೊತ್ತುಕೊಂಡಿದ್ದು, ಕದ್ರಿ ದೇವಸ್ಥಾನ ನಮ್ಮ ಗುರಿಯಾಗಿತ್ತು ಎಂದು ಹೇಳಿದೆ.
ಶಾರಿಖ್ ಪಂಪ್‌ವೆಲ್ ಬಳಿ ಬಾಂಬ್ ಸ್ಛೋಟ ನಡೆಸಲು ಪ್ಲ್ಯಾನ್ ನಡೆಸಿದ್ದ ಎಂಬ ಮಾಹಿತಿ ಆರಂಭದಲ್ಲಿ ಸಿಕ್ಕಿತ್ತು. ಆದರೆ, ಈಗ ಕದ್ರಿ ದೇವಸ್ಥಾನ ಟಾರ್ಗೆಟ್ ಆಗಿದ್ದರಿಂದ ಈ ಪ್ರಕರಣ ಈಗ ಮತ್ತೊಂದು ಮಹತ್ವದ ತಿರುವು ಪಡೆದುಕೊಂಡಿದೆ. ಕದ್ರಿಯಲ್ಲಿರುವ ಮಂಜುನಾಥ ದೇವಸ್ಥಾನ ೧೦ನೇ ಶತಮಾನದಲ್ಲಿ ನಿರ್ಮಾಣವಾಗಿದ್ದು ಮಂಗಳೂರಿನ ಪ್ರಸಿದ್ಧ ದೇವಸ್ಥಾನವಾಗಿದೆ.
ಈ ಕುರಿತು ಪೋಸ್ಟ್‌ವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ವೈರಲ್ ಆಗಿದೆ. ಈ ನಡುವೆ ಕೆಲ ವಿಚಾರಗಳ ಕುರಿತಂತೆ ಉಗ್ರ ಸಂಘಟನೆ ಪೋಸ್ಟ್‌ನಲ್ಲಿ ಹೇಳಿದ್ದು, ಈ ಬಗ್ಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
‘ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್’ ಉಗ್ರ ಸಂಘಟನೆ ಪೋಸ್ಟ್ ಹಂಚಿಕೊಂಡಿದ್ದು, ಮೂಲವಾಗಿ ಕದ್ರಿ ದೇವಸ್ಥಾನದ ಮೇಲೆ ದಾಳಿ ನಡೆಸಲು ಯೋಜನೆ ರೂಪಿಸಲಾಗಿತ್ತು. ಆದರೆ, ಉದ್ದೇಶಿತ ಗುರಿ ತಲುಪುವ ಮೊದಲೇ ಬಾಂಬ್ ಸ್ಛೋಟಗೊಂಡಿದೆ ಎಂದು ಸಂಘಟನೆ ಹೇಳಿರುವುದು ಪೋಸ್ಟ್‌ನಲ್ಲಿ ಕಂಡು ಬಂದಿದೆ. ನ.೨೩ರಂದು ಪ್ರಕಟಿಸಲಾಗಿರುವ ಪೋಸ್ಟ್ ಜೊತೆ ಬಾಂಬ್ ದಾಳಿಯಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾರಿಖ್‌ನ ಎರಡು ಫೋಟೋಗಳನ್ನೂ ಕೂಡ ಅಪ್‌ಲೋಡ್ ಮಾಡಲಾಗಿದೆ. ಅಲ್ಲದೇ, ಎಡಿಜಿಪಿ ಅಲೋಕ್ ಕುಮಾರ್ ಅವರಿಗೆ ಬೆದರಿಕೆ ಹಾಕಿರುವುದು ಕಂಡು ಬಂದಿದೆ.
ರಾಜ್ಯದಲ್ಲಿ ಗುಂಪು ಹತ್ಯೆ, ದಬ್ಬಾಳಿಕೆಯ ಕಾನೂನುಗಳು ಮತ್ತು ಶಾಸನಗಳು ಮತ್ತು ಧರ್ಮದಲ್ಲಿ ಹಸ್ತಕ್ಷೇಪ ನಡೆಸುವ ಮೂಲಕ ನಮ್ಮ ಮೇಲೆ ಯುದ್ಧ ಸಾರಲಾಗಿದೆ. ಈ ಯುದ್ಧಕ್ಕೆ ಪ್ರತಿಯಾಗಿ ದಾಳಿ ನಡೆಸಲಾಗುತ್ತಿದೆ ಎಂದು ಎಚ್ಚರಿಸಿದೆ.
ಮಂಗಳೂರಿನ ಪ್ರಮುಖ ಹಿಂದೂ ದೇವಾಲಯಗಳಾದ ಕದ್ರಿಯಲ್ಲಿರುವ ಮಂಜುನಾಥಸ್ವಾಮಿ, ಕುದ್ರೋಳಿ ಗೋಕರ್ಣನಾಥಸ್ವಾಮಿ ಹಾಗೂ ಮಂಗಳಾದೇವಿ ದೇವಾಲಯ, ಮಣ್ಣಗುಡ್ಡೆಯಲ್ಲಿರುವ ಸಂಗನಿಕೇತನ ಈತನ ಟಾರ್ಗೆಟ್ ಆಗಿತ್ತು ಎಂದು ಎನ್‌ಐಎ ಮೂಲಗಳು ತಿಳಿಸಿವೆ.
ಲಕ್ಷದಿಪೋತ್ಸವ ಸಂದರ್ಭದಲ್ಲಿ ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯ ನಡೆಸಲು ಶಾರಿಖ್ ಮೊಹಮ್ಮದ್ ಹೊಂಚು ಹಾಕಿದ್ದ. ಜೊತೆಗೆ ಮಂಗಳೂರಿನ ಪಡಿಲು ಬಳಿ ಇರುವ ರೈಲ್ವೆ ನಿಲ್ದಾಣ, ಬಸ್ ಮತ್ತು ವಿಮಾನ ನಿಲ್ದಾಣಗಳನ್ನು ಕೂಡ ಈತ ಟಾರ್ಗೆಟ್ ಮಾಡಿದ್ದ ಎನ್ನಲಾಗಿದೆ.

andolanait

Recent Posts

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

43 mins ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

56 mins ago

ಹೊಸ ವರ್ಷಾಚರಣೆಗೆ ಮುನ್ನೆಚ್ಚರಿಕೆ : ಸೂಕ್ಷ ಪ್ರದೇಶಗಳ ಬಗ್ಗೆ ಸಮೀಕ್ಷೆ ವರದಿಗೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…

2 hours ago

ಸಿಲಿಂಡರ್‌ ಸ್ಪೋಟ ಪ್ರಕರಣ : ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮಂಜುಳ ಸಾವು

ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…

3 hours ago

ಇತಿಹಾಸ ಸೃಷ್ಟಿಸಿದ ಬಿಜೆಪಿ : ತಿರುವನಂತಪುರಂನ ಮೇಯರ್ ಆಗಿ ವಿ.ವಿ.ರಾಜೇಶ್ ಆಯ್ಕೆ

ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…

3 hours ago

ಅಧಿಕಾರ ಶಾಶ್ವತವಲ್ಲ : ‘ನನ್ನ ತಂದೆಯ ಇಚ್ಛೆಯಂತೆಯೇ ನಡೆಯುವೆ’ ; ಯತೀಂದ್ರ

ಚಿಕ್ಕೋಡಿ : ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಯಾವುದೇ…

3 hours ago