ಮೈಸೂರು: ಕರ್ನಾಟಕ ರತ್ನ ಡಾ.ಪುನೀತ್ ರಾಜಕುಮಾರ್ ಅವರ ಪುಣ್ಯಸ್ಮರಣೆ ಅಂಗವಾಗಿ ವಿದ್ಯಾರ್ಥಿಗಳು ರಕ್ತದಾನ ಮಾಡಿ ಅರ್ಥ ಪೂರ್ಣವಾಗಿ ಆಚರಿಸಿದರು. ನಗರದ ಮಾನಂದವಾಡಿ ರಸ್ತೆಯಲ್ಲಿರುವ ಎನ್‌ಐಇ ಕಾಲೇಜಿನ ಆವರಣದಲ್ಲಿ ಕಾಲೇಜಿನ ಐಇಇಇ ಹಾಗೂ ಡಬ್ಲ್ಯೂಐಇ ವಿದ್ಯಾರ್ಥಿಗಳು ಮತ್ತು ಜೀವದಾರ ರಕ್ತ ನಿಧಿ ಕೇಂದ್ರದ ಸಹಂಗದಲ್ಲಿ ನಡೆದ ಅಪ್ಪು ಸ್ಮರಣೆ ಕಾರ್ಯಕ್ರಮದಲ್ಲಿ ಕಾಲೇಜಿನ ೩೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ವಯಂ ಪ್ರೇರಿತ ರಕ್ತದಾನ ಮಾಡಿ ನಮನ ಸಲ್ಲಿಸಿದರು.
ಕಾರ್ಯಕ್ರಮ ಉದ್ಘಾಟಿಸಿದ ಜೀವದಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಮಾತನಾಡಿ, ರಕ್ತದ ಅನಿವಾರ್ಯ ಮತ್ತು ಮಹತ್ವ ಅರಿತು ಆರೋಗ್ಯವಂತ ಪ್ರತಿಯೊಬ್ಬರೂ ರಕ್ತದಾನ ಮಾಡಬೇಕು. ಇತ್ತೀಚಿನ ದಿನಗಳಲ್ಲಿ ರಕ್ತ ವಿಭಜಿಸಿ ಯಾವ ಅಂಶದ ಕೊರತೆ ಇದೆಯೋ ಅದನ್ನು ಮಾತ್ರ ರೋಗಿಗೆ ನೀಡುವ ತಂತ್ರಜ್ಞಾನ ಅಭಿವೃದ್ಧಿಯಾಗಿದೆ. ಇದರಿಂದ ರಕ್ತದ ಅಭಾವಕ್ಕೆ ಸ್ವಲ್ಪಮಟ್ಟಿಗೆ ಪರಿಹಾರ ಸಿಗಲಿದೆ. ಮಹಿಳೆಯರಲ್ಲಿ ಶೇ.೮೦ರಷ್ಟು ಮಂದಿಗೆ ರಕ್ತಹೀನತೆ ಸಮಸ್ಯೆ ಕಾಡುತ್ತಿದೆ. ದಿನದಿಂದ ದಿನಕ್ಕೆ ರಕ್ತದ ಬೇಡಿಕೆ ಹೆಚ್ಚುತ್ತಿದೆ. ಆದರೆ ಕೃತಕವಾಗಿ ರಕ್ತ ಉತ್ಪಾದಿಸಲು ಸಾಧ್ಯವಿಲ್ಲ. ರಕ್ತದ ಕೊರತೆ ನೀಗಿಸುವ ನಿಟ್ಟಿನಲ್ಲಿ ರಕ್ತದಾನ ಶಿಬಿರಗಳ ಸಂಖ್ಯೆ ಹೆಚ್ಚಿಸಬೇಕು ಎಂದರು.
ರಕ್ತದಾನ ಶಿಬಿರದ ಆಂಜಕ ಸಿ.ಕೆ.ವನಮಾಲ ಮಾತನಾಡಿ, ಒಳ್ಳೆಂ ಕೆಲಸ ಮಾಡುವ ಜನರಿಗೆ ಸಮಾಜ ಎಂದೂ ಮರೆಯುವುದಿಲ್ಲ ಎನ್ನುವುದಕ್ಕೆ ಅಪ್ಪು ಸಾಕ್ಷಿಂಗಿದ್ದಾರೆ. ಕಲಾವಿದರಿಗೆ ಎಂದಿಗೂ ಸಾವಿಲ್ಲ. ಪುನೀತ್ ರಾಜಕುಮಾರ್ ಅವರು ನಟಿಸಿದ ಚಿತ್ರಗಳ ಮೂಲಕ ಸದಾ ನಮ್ಮೆಲ್ಲರ ಮನದಲ್ಲಿ ಸಾರ್ವಕಾಲಿಕವಾಗಿ ನೆಲೆಸಿದ್ದಾರೆ ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಡಾ.ರೋಹಿಣಿ ನಾಗಪದ್ಮ, ವೈಸ್ ಪ್ರಿನ್ಸಿಪಾಲರಾದ ಗಣೇಶ್ ಪ್ರಸಾದ್, ಎನ್‌ಎಸ್‌ಎಸ್ ಅಧಿಕಾರಿ ಡಾ.ಚಂದ್ರ, ಮುತ್ತಣ್ಣ ಮುಂತಾದವರು ಹಾಜರಿದ್ದರು.
ಮೈಸೂರಿನ ಮಾನಂದವಾಡಿ ರಸ್ತೆಯ ಎನ್‌ಐಇ ಕಾಲೇಜಿನ ಆವರಣದಲ್ಲಿ ಕಾಲೇಜಿನ ಐಇಇಇ ಹಾಗೂ ಡಬ್ಲ್ಯೂಐಇ ವಿದ್ಯಾರ್ಥಿಗಳು ಮತ್ತು ಜೀವದಾರ ರಕ್ತ ನಿಧಿ ಕೇಂದ್ರದ ಸಹಂಗದಲ್ಲಿ ಡಾ.ಪುನೀತ್ ರಾಜ್‌ಕುಮಾರ್ ಅವರ ಸ್ಮರಣೆಯ ಅಂಗವಾಗಿ ನಡೆದ ರಕ್ತದಾನ ಶಿಬಿರದಲ್ಲಿ ವಿದ್ಯಾರ್ಥಿಗಳು ರಕ್ತದಾನ ಮಾಡಿದರು.