ಮೈಸೂರು ಜಿಲ್ಲೆಯಲ್ಲಿ ಎರಡು ವಾರಗಳಲ್ಲಿ ಎಂಟು ಚಿರತೆಗಳು ಬೋನಿಗೆ
ಮೈಸೂರು:ಜಿಲ್ಲೆಯಲ್ಲಿ ಚಿರತೆಗಳ ಸೆರೆ ಕಾರ್ಯಾಚರಣೆ ಮುಂದುವರಿದಿದೆ. ತಾಲ್ಲೂಕಿನ ವರುಣಾ ಪೊಲೀಸ್ ಠಾಣೆಗೆ ಸೇರಿದ ಮಾಧವಗೆರೆ ಗ್ರಾಮದಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದ ಚಿರತೆ ಗುರುವಾರ ಬೋನಿಗೆ ಬಿದ್ದಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕಳೆದ ಎರಡು ವಾರಗಳಲ್ಲಿ ಎಂಟು ಚಿರತೆಗಳು ಸೆರೆ ಸಿಕ್ಕಂತಾಗಿದೆ.
ಮಾಧವಗೆರೆ ಗ್ರಾಮದಲ್ಲಿ ಕಳೆದ 15 ದಿನಗಳಿಂದ ಈ ಚಿರತೆಯ ಓಡಾಟ ಕಂಡು ಬಂದಿತ್ತು. ಮಾಧವಗೆರೆ ಗ್ರಾಮದ ಗ್ರಾಮ ಪಂಚಾಯಿತಿ ಸದಸ್ಯ ಕುಮಾರ್ ಅವರ ದೂರಿನ ಹಿನ್ನೆಲೆಯಲ್ಲಿ ಬುಧವಾರ ಮಧ್ಯಾಹ್ನ ಬೋನನ್ನು ಇಡಲಾಗಿತ್ತು. ಬೋನಿನಲ್ಲಿ ಜೀವಂತ ಕೋಳಿ ಇರಿಸಿ ಕೊಟ್ಟಿಗೆ ಮಾದರಿಯಲ್ಲಿ ಸುತ್ತ ಮತ್ತ ಕಸ ಚೆಲ್ಲಲಾಗಿತ್ತು. ಕೋಳಿ ತಿನ್ನುವ ಆಸೆಯಿಂದ ಬಂದ ಚಿರತೆ ರಾತ್ರಿ ಬೋನಿಗೆ ಬಿದ್ದಿದೆ.
ಸುಮಾರು ಐದರಿಂದ ಆರು ವರ್ಷ ಪ್ರಾಯದ ಗಂಡು ಚಿರತೆ ಇದಾಗಿದ್ದು ಕಾಣಲು ದಷ್ಟಪುಷ್ಟವಾಗಿದೆ. ಚಿರತೆಗೆ ಚಿಪ್ ಅಳವಡಿಸಿದ ಬಳಿಕ ಮೇಲಧಿಕಾರಿಗಳ ಆದೇಶದಂತೆ ಸುರಕ್ಷಿತ ಪ್ರದೇಶಕ್ಕೆ ರವಾನಿಸಲಾಗುವುದು ಎಂದು ಉಪ ವಲಯ ಅರಣ್ಯಾಧಿಕಾರಿ ವಿಜಯಕುಮಾರ್ ತಿಳಿಸಿದ್ದಾರೆ.
ಆರ್ ಎಫ್ ಓ ಸುರೇಂದ್ರ, ಡಿಆರ್‌ಎಫ್‌ಓ ವಿಜಯಕುಮಾರ್, ಅರಣ್ಯ ರಕ್ಷಕ ಜಗದೀಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ವರುಣ ಹೋಬಳಿ ವ್ಯಾಪ್ತಿಯ ಎಂಸಿ ಹುಂಡಿ, ಹೊಸಹಳ್ಳಿ, ಟಿ.ಎಂ.ಹುಂಡಿ, ಮಾದಿಗೆರೆ, ಪಿಲ್ಲಹಳ್ಳಿ, ಯಾಂದಹಳ್ಳಿ ಹಾಗೂ ಮಾದ ಶೆಟ್ಟಿ ಹಳ್ಳಿ ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂಬ ಹಿನ್ನೆಲೆಯಲ್ಲಿ ನಾನಾ ಕಡೆ ಬೋನುಗಳನ್ನು ಇರಿಸಲಾಗಿದೆ. ಎಷ್ಟು ಚಿರತೆಗಳಿವೆ ಎಂಬ ಬಗ್ಗೆ ನಿಖರವಾದ ಮಾಹಿತಿಗಳಿಲ್ಲ. ಸಾರ್ವಜನಿಕರ ದೂರುಗಳನ್ನು ಆಲಿಸಿ ಸ್ಥಳಕ್ಕೆ ಭೇಟಿ ನೀಡಿ ಹೆಜ್ಜೆ ಗುರುತುಗಳನ್ನು ಪರಿಶೀಲಿಸಿ ಬೋನುಗಳನ್ನು ಇಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…
ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…
ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…
ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…
ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…