ಹೊಸ ವರ್ಷಕ್ಕೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ ಮೈಸೂರು ನಗರ ಪೊಲೀಸರು
೩೩೪ ಸಿಸಿಟಿವಿ ಕಣ್ಗಾವಲು ಇರಲಿದೆ ಹುಷಾರ್
ಪೊಲೀಸ್ ಗಸ್ತು ತಂಡಗಳೂ ಸಂಚರಿಸಲಿವೆ
ನಾಲ್ಕು ಪಿಂಕ್ ತಂಡಗಳೂ ಸುತ್ತು ಹಾಕಲಿವೆ
ಪಟಾಕಿ ಸಿಡಿಮದ್ದು ಸಿಡಿಸಲು ಇಲ್ಲ ಅವಕಾಶ
ಮೈಸೂರು: ಹೊಸ ವರ್ಷದ ಸಂಭ್ರಮಾಚರಣೆಯನ್ನು ಡಿ.31ರ ತಡರಾತ್ರಿ ೧ಗಂಟೆಗೆ ಕಡ್ಡಾಯವಾಗಿ ಮುಕ್ತಾಯಗೊಳಿಸಬೇಕು ಎಂದು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶಿಸಿದ್ದಾರೆ.
ಹೊಸ ವರ್ಷದ ಆಚರಣೆಯ ಸಂಬಂಧ ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಸಾರ್ವಜನಿರಿಗೆ, ಹೋಟೆಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್, ಹೋಂ ಸ್ಟೇ, ಅಪಾರ್ಟ್‌ಮೆಂಟ್ ಅಸೋಸಿಯೇಷನ್, ಮಾಲ್ಸ್ ಮತ್ತು ಸಂಘಸಂಸ್ಥೆಗಳಿಗೆ ಕಟ್ಟುನಿಟ್ಟಾಗಿ ಸೂಚನೆಗಳನ್ನು ಪಾಲಿಸುವಂತೆ ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಹಾಗೂ ಯುವಕರು ಡಿ.೩೧ ರಾತ್ರಿ ಹೊಸ ವರ್ಷ ಅಚಾರಣೆ ನೆಪದಲ್ಲಿ ರಸ್ತೆಗಳಲ್ಲಿ ಅಸಭ್ಯವಾಗಿ ವರ್ತಿಸಬಾರದು. ಡಿಜೆಗಳನ್ನು ಕಡ್ಡಾಯ ನಿಷೇಧಿಸಲಾಗಿದೆ. ತಮ್ಮ ಪ್ರದೇಶಕ್ಕೆ ಮಾತ್ರ ಸೀಮಿತವಾಗಿರುವಂತೆ ಬಾಕ್ಸ್ ಮಾದರಿ ಧ್ವನಿವರ್ಧಕವನ್ನು ಅಳವಡಿಸಿಕೊಂಡು ಧ್ವನಿವರ್ಧಕಗಳ ಶಬ್ಧವು ಕಾನೂನಿನ ಅಡಿಯಲ್ಲಿ ನಿರ್ದಿಷ್ಟ ಪಡಿಸಿರುವ ಡೆಸಿಬಲ್‌ಗಳನ್ನು ಮೀರದಂತೆ ಕಾರ್ಯಕ್ರಮ ನಡೆಸಬೇಕು. ನಗರದಲ್ಲಿ ಈಗಾಗಲೇ ೫೯ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಿದ್ದು, ಹೊಸದಾಗಿ ೨೭೫ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಿ ಪೊಲೀಸ್ ಕಂಟ್ರೋಲ್ ರೂಂ ಮೂಲಕ ನಿರ್ವಹಿಸಲಾಗುತ್ತದೆ. ಅಂಗಡಿ, ಮನೆ ಇತ್ಯಾದಿ ಸ್ಥಳಗಳ ಸಿಸಿಟಿವಿ ಕ್ಯಾಮರಾಗಳು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕು. ಹೋಟೆಲ್, ಕ್ಲಬ್ ವ್ಯವಸ್ಥಾಪಕರು ಅಹಿತಕರ ಘಟನೆಗಳಾಗದಂತೆ ಕ್ರಮ ತೆಗೆದುಕೊಳ್ಳಬೇಕು. ಸಾಂಸ್ಕೃತಿಕ ಕಾರ್ಯಕ್ರಮದ ನೆಪದಲ್ಲಿ ಅಶ್ಲೀಲ, ಅರೆಬೆತ್ತಲೆ, ಮಾದಕ ವಸ್ತುಗಳ ಸೇವನೆ, ಜೂಜಾಟ ನಡೆಸುವುದನ್ನು ನಿಷೇಧಿಸಲಾಗಿದೆ.
ಪ್ರತ್ಯೇಕ ಪೊಲೀಸ್ ತಂಡಗಳ ರಚನೆ: ಸಾರ್ವಜನಿಕರ ನೆಮ್ಮದಿಗೆ ಭಂಗ ತರುವ ರೀತಿಯಲ್ಲಿ ಪಟಾಕಿ ಸಿಡಿಮದ್ದುಗಳನ್ನು ಸಿಡಿಸುವುದನ್ನು ನಿಷೇಧಿಸಲಾಗಿದೆ. ರಿಂಗ್‌ರೋಡ್‌ನಲ್ಲಿ ನಿಗಾವಹಿಸಲು ಹೈವೇ ಪೆಟ್ರೋಲ್ ವಾಹನ ಮತ್ತು ಇಂಟರ್‌ಸೆಪ್ಟರ್ ವಾಹನಗಳನ್ನು ನಿಯೋಜಿಸಲಾಗಿದೆ. ರಸ್ತೆ, ಪಾರ್ಕ್, ವಾಹನಗಳಲ್ಲಿ ಕುಳಿತು ಮದ್ಯಪಾನ ಮಾಡುವವರ ವಿರುದ್ಧ ಅಬಕಾರಿ ಕಾಯ್ದೆಯಲ್ಲಿ ಪ್ರಕರಣ ದಾಖಲು ಮಾಡಲಾಗುವುದು.
ರಸ್ತೆಯಲ್ಲಿ ಓಡಾಡುವವರನ್ನು ಬಲವಂತವಾಗಿ ನಿಲ್ಲಿಸಿ ಶುಭ ಕೋರುವ ನೆಪದಲ್ಲಿ ಕಿರಿಕಿರಿ ಮಾಡಬಾರದು.ಕೀಟಲೆ, ಅಸಭ್ಯವಾಗಿ ವರ್ತಿಸುವುದನ್ನು ತಡೆಯಲು ನಗರದಲ್ಲಿ ೧೮ ವಿಶೇಷ ಕಾರ್ಯಪಡೆ ತಂಡಗಳನ್ನು ರಚಿಸಲಾಗಿದೆ. ಮಹಿಳೆಯರ ರಕ್ಷಣೆಗಾಗಿ ಮಹಿಳಾ ಅಧಿಕಾರಿ ಮತ್ತು ಸಿಬ್ಬಂದಿಗಳ ೬ ವಿಶೇಷ ತಂಡಗಳನ್ನು ಹಾಗೂ ನಾಲ್ಕು ಪಿಂಕ್ ಗರುಡಾ ತಂಡಗಳನ್ನು ನಿಯೋಜಿಸಲಾಗಿದೆ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ಬಗ್ಗೆ ನಿಗಾವಹಿಸಲು ಸಂಚಾರ ಪೊಲೀಸರು ಮತ್ತು ತಜ್ಞರನ್ನೊಳಗೊಂಡ ಐದು ಸಂಚಾರಿ ಕ್ಷಿಪ್ರ ಕಾರ್ಯಪಡೆ ರಚಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರು ಎಚ್ಚರಿಸಿದ್ದಾರೆ.
ಹೀಗಿರಲಿ ಕಾರ‌್ಯಕ್ರಮ
-ದೊಡ್ಡ ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ಹೊರಾಂಗಣದಲ್ಲಿ ಆಯೋಜಿಸಬೇಕು.
-ಹೊಟೇಲ್‌ಗಳು, ಪಬ್‌ಗಳು, ರೆಸ್ಟೋರೆಂಟ್‌ಗಳು ಮತ್ತು ರೆಸಾರ್ಟ್‌ಗಳಲ್ಲಿ ನಿಗದಿತ ಸಾಮರ್ಥ್ಯ ಮೀರಬಾರದು.
-ಕಾರ್ಯಕ್ರಮದ ಸಂಘಟಕರು, ನಿರ್ವಾಹಕರು ಮತ್ತು ಸೇವಾ ಸಿಬ್ಬಂದಿಗಳು ಎರಡು ಡೋಸ್ ಲಸಿಕೆ ಪಡೆದಿರಬೇಕು.
-ಯಾವುದೇ ಕಾರ್ಯಕ್ರಮ ಅಥವಾ ಇತರೆ ಪ್ರವೇಶ ದ್ವಾರದಲ್ಲಿ ಜನಸಂದಣಿ ಹೆಚ್ಚಾಗದಂತೆ ಕ್ರಮ ಕೈಗೊಳ್ಳಬೇಕು.
ಕೋವಿಡ್ ಮುನ್ನೆಚರಿಕೆ ಇರಲಿ
-ತುರ್ತು ಚಿಕಿತ್ಸಾ ವಾಹನದ ವ್ಯವಸ್ಥೆ ಮಾಡಿಕೊಂಡು ಆಸ್ಪತ್ರೆಗಳೊಂದಿಗೆ ಸಂಪರ್ಕವನ್ನು ಇಟ್ಟುಕೊಳ್ಳಬೇಕು.
– ಕಡ್ಡಾಯವಾಗಿ ಮಾಸ್ಕ್ ಮತ್ತು ಫೇಸ್ ಶೀಲ್ಡ್ ಹಾಕಿಕೊಳ್ಳುವುದು.
– ಮಾಸ್ಕ್ ಇಲ್ಲದೇ ಪ್ರವೇಶ ಇಲ್ಲ ಎಂಬ ನಾಮಫಲಕ ಅಳವಡಿಸಬೇಕು.
– ಹ್ಯಾಂಡ್ ಸ್ಯಾನಿಟೈಸರ್, ಥರ್ಮಲ್ ಸ್ಕ್ರೀನಿಂಗ್ ಮಾಡಿ ಅವರ ದೇಹದ ತಾಪಮಾನ ಖಚಿತಪಡಿಸಿಕೊಳ್ಳಬೇಕು.
– ಜ್ವರ ಹಾಗೂ ಉಸಿರಾಟದ ತೊಂದರೆ, ಕೆಮ್ಮು, ನೆಗಡಿ ಇರುವವರು ವೈದ್ಯಕೀಯ ತಪಾಸಣೆಗೆ ಒಳಗಾಗುವಂತೆ ಸೂಚಿಸುವುದು.
ನೂತನ ವರ್ಷಾಚರಣೆಗೆ ಅಬಕಾರಿ ಇಲಾಖೆಯಿಂದ ಲಿಖಿತವಾಗಿ ಹೆಚ್ಚಿನ ಅವಧಿಗೆ ಅನುಮತಿಯನ್ನು ಕಡ್ಡಾಯವಾಗಿ ಪಡೆಯಬೇಕು. ಒಂದು ದಿನದ ಮಟ್ಟಿಗೆ ಮದ್ಯಮಾರಾಟಕ್ಕೆ ಮತ್ತು ಸರಬರಾಜಿಗೆ ಅನುಮತಿ ಪಡೆದವರೂ ಪೊಲೀಸ್ ಆಯುಕ್ತರ ಕಚೇರಿಯಿಂದ ಅನುಮತಿ ಪಡೆದುಕೊಳ್ಳುವುದು.
– ರಮೇಶ್ ಬಾನೋತ್, ನಗರ ಪೊಲೀಸ್ ಆಯುಕ್ತ.
ಚಾ.ಬೆೆಟ್ಟಕ್ಕೆ ನಿರ್ಬಂಧ
ಡಿ.೩೧ ಸಂಜೆ ೭ ಗಂಟೆ ನಂತರ ಚಾಮುಂಡಿ ಬೆೆಟ್ಟ ಉತ್ತನಹಳ್ಳಿ ಕ್ರಾಸ್ ಗೇಟ್, ದೈವಿವನ ಗೇಟ್, ಚಾಮುಂಡಿಬೆಟ್ಟ ಪಾದದ ಗೇಟ್, ಲಲಿತಮಹಲ್ ಗೇಟ್ ಮೂಲಕ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ತಾವರೆಕಟ್ಟೆ ಗೇಟ್ ಮುಖಾಂತರ ಡಿ.೩೧ ರಾತ್ರಿ ೯ ಗಂಟೆ ನಂತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಯಾವುದೇ ರೀತಿಯ ಊಟ, ಮದ್ಯದ ಬಾಟಲಿಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ರಾತ್ರಿ ೯ ಗಂಟೆ ನಂತರ ಬೆಟ್ಟದಿಂದ ವಾಪಸ್ಸು ಬರುವಂತೆ ಸೂಚಿಸಲಾಗಿದೆ.
ಮೈಸೂರು: ಹೊಸ ವರ್ಷ 2025ರ ಆಗಮನಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಜನತೆ ಸಂಭ್ರಮಾಚರಣೆ ಮಾಡಲು…
ಹಾಸನ/ಸಕಲೇಶಪುರ: ಕೇಂದ್ರ ಸರ್ಕಾರದ ನೆರವಿನೊಂದಿಗೆ ಕಾಫಿ ಬೆಳೆಗಾರರಿಗೆ ಪರಿಹಾರಗಳನ್ನು ಒದಗಿಸಲಾಗುವುದು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಶ್ವಾಸನೆ ನೀಡಿದ್ದಾರೆ. ಹಾಸನ…
ಬೆಂಗಳೂರು: ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿಯು ಬೆಳಗಾವಿ ಚಲೋ ನಡೆಸಲು ಮುಂದಾಗಿದೆ. ಈ ಬಗ್ಗೆ…
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗದೊಂದಿಗೆ ಸಭೆ ನಡೆಸಿ ಕಾಂಗ್ರೆಸ್ ಸರ್ಕಾರ ರೈತರ…
ಹಾಸನ: ಈ ಜಿಲ್ಲೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬ ನೀಡಿದ ಕೊಡುಗೆ ಏನು ಎಂದು ಕೇಳಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ…
ಮೈಸೂರು: ಎಂಎಲ್‌ಸಿ ಸಿ.ಟಿ.ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಫೇಕ್ ಎನ್‌ಕೌಂಟರ್ ಮಾಡಲು ಯತ್ನಿಸಿದ್ದರು ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…