ಚಾಮರಾಜನಗರ: ಅರಣ್ಯ ಅಪರಾಧಗಳ ಪತ್ತೆಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಬಿಳಿಗಿರಿ ರಂಗನಾಥಸ್ವಾಮಿ ದೇವಾಲಯ (ಬಿಆರ್‌ಟಿ) ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಿಯೋಜಿಸಲಾಗಿದ್ದ ತರಬೇತಿ ಪಡೆದ ಶ್ವಾನ ಝಾನ್ಸಿ ವಾರದ ಹಿಂದೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದೆ.
ಡಿ.30ರಂದೇ ಘಟನೆ ನಡೆದಿದ್ದರೂ, ಮಾಹಿತಿ ಬಹಿರಂಗಗೊಂಡಿರಲಿಲ್ಲ. ಶ್ವಾನವನ್ನು ಪುಣಜನೂರಿನಲ್ಲಿ ನಿಯೋಜಿಸಲಾಗಿತ್ತು. ತರಬೇತಿ ಪಡೆದು ಬರುತ್ತಿದ್ದ ಸಂದರ್ಭದಲ್ಲಿ ರಸ್ತೆಯಲ್ಲಿ ಹೋಗುತ್ತಿದ್ದ ನಾಯೊಂದನ್ನು ಬೆನ್ನಟ್ಟಿಕೊಂಡು ಹೋದಾಗ ಲಾರಿ ಡಿಕ್ಕಿ ಹೊಡೆದು ಮೃತಪಟ್ಟಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಚಾಮರಾಜನಗರದ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜರ್ಮನ್ ಶೆಫರ್ಡ್ ತಳಿಯಹೆಣ್ಣು ಶ್ವಾನವನ್ನು 2021ರ ನವೆಂಬರ್ 25ರಂದು ಅರಣ್ಯ ಇಲಾಖೆಗೆ ಸೇರ್ಪಡೆಗೊಳಿಸಲಾಗಿತ್ತು. ಆಗ ಅದಕ್ಕೆ ಒಂಬತ್ತು ತಿಂಗಳು ವಯಸ್ಸಾಗಿತ್ತು.
ಟ್ರಾಫಿಕ್ ಇಂಡಿಯಾ ಎಂಬ ಸ್ವಯಂ ಸೇವಾ ಸಂಸ್ಥೆಯ ಸಹಕಾರದೊಂದಿಗೆ ಝಾನ್ಸಿಯನ್ನು ಇಲಾಖೆಯ ಸೇವೆಗೆ ನಿಯೋಜಿಸಲಾಗಿತ್ತು. ಇದಕ್ಕೂ ಮೊದಲು ಏಳು ತಿಂಗಳ ಕಾಲ ಚಂಡೀಗಡದ ಐಟಿಬಿಪಿ ತರಬೇತಿ ಕೇಂದ್ರದಲ್ಲಿ ಅಪರಾಧ ಪತ್ತೆಗೆ ಸಂಬಂಧಿಸಿದ ತರಬೇತಿಯನ್ನು ಅದಕ್ಕೆ ನೀಡಲಾಗಿತ್ತು.
ಅರಣ್ಯ ಇಲಾಖೆಗೆ ಸೇರ್ಪಡೆಗೊಂಡ ಬಳಿಕ ಯಾವುದೇ ಕಾರ್ಯಾಚರಣೆಗಳಲ್ಲಿ ಶ್ವಾನ ಭಾಗವಹಿಸಿರಲಿಲ್ಲ.
ಶಿವಮೊಗ್ಗ: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವುದಾಗಿ ದೂರು ನೀಡಿ ಬಂಧಿತನಾಗಿದ್ದ ಮಾಸ್ಕ್‌ಮ್ಯಾನ್ ಚಿನ್ನಯ್ಯ ಈಗ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಚಿನ್ನಯ್ಯನಿಗೆ…
ರಾಮನಗರ: ರಾಮನಗರದಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಎಸಗಲಾಗಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ವಿಕಾಸ್, ಪ್ರಶಾಂತ್, ಚೇತನ್…
ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವನ್ಯಜೀವಿ ವಲಯದ ಜಲ್ಲಿಪಾಳ್ಯ ಹತ್ತಿರ ಬೈಕ್‌ನಲ್ಲಿ…
ಬೆಳಗಾವಿ: ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ. ಇದು ಅವರ ಕೊನೆಯ ಅಧಿವೇಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಲೇವಡಿ ಮಾಡಿದ್ದಾರೆ.…
ಮೈಸೂರಿನ ಕುವೆಂಪು ನಗರದ ಅಪೋಲೋ ಆಸ್ಪತ್ರೆಯ ಹಿಂಭಾಗ ದಲ್ಲಿರುವ ಬಿಜಿಎಸ್ ಪದವಿಪೂರ್ವ ಕಾಲೇಜಿನ ಎದುರಿನ ದೊಡ್ಡಮೋರಿ ಯಿಂದ ತೆಗೆದ ಕಸವನ್ನು…
ಕಳೆದ ಮೂರು ವರ್ಷಗಳ ಅವಧಿಯಲ್ಲಿ, ರಾಜ್ಯದಲ್ಲಿ ೨,೮೪೭ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ವಿಭಾಗ (ಎನ್‌ಸಿಆರ್‌ಬಿ)…