ಮಂಡ್ಯ: ಪ್ರಸಿದ್ಧ ಪ್ರವಾಸಿ ತಾಣ ಕೆ.ಆರ್.ಎಸ್.ನ ಬೃಂದಾವನಕ್ಕೆ ಪ್ರವಾಸಿಗರಿಗೆ ಭಾನುವಾರದಿಂದ ಅವಕಾಶ ಕಲ್ಪಿಸಲಾಗಿದೆ.
ಕಳೆದ ಎರಡು ದಿನಗಳ ಹಿಂದೆ ಬೃಂದಾವನದಲ್ಲಿ ಚಿರತೆ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಶನಿವಾರ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಏರಲಾಗಿತ್ತು.
ಚಿರತೆ ಹಿಡಿಯಲು ಅರಣ್ಯ ಇಲಾಖೆ ಬೋನುಗಳನ್ನು ಇಟ್ಟಿರುವ ಹಿನ್ನೆಲೆಯಲ್ಲಿ ಇಂದಿನಿAದ ಪ್ರವಾಸಿಗರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ ಎಂದು ಕಾವೇರಿ ನೀರಾವರಿ ನಿಗಮದ ಇಇ ರಾಮಮೂರ್ತಿ ಅವರು ತಿಳಿಸಿದ್ದಾರೆ.





