ಮೈಸೂರು: ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ಉಪ ನಿರ್ದೇಶಕರಾಗಿ ಬಿ.ಎಸ್.ಪ್ರಭಾ ವರ್ಗಾವಣೆಯಾಗಿದ್ದು, ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಯೋಜನಾ ಸಮನ್ವಯಾಧಿಕಾರಿಯಾಗಿದ್ದ ಪ್ರಭಾ ಅವರನ್ನು ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರನ್ನಾಗಿ ನೇಮಿಸಲಾಗಿತ್ತು. ಆದರೆ, ಗಿರಿಜನರ ಅಭಿವೃದ್ಧಿ ವಿಚಾರದಲ್ಲಿ ಜಿಲ್ಲಾ ಮಟ್ಟದಲ್ಲಿ ಹಲವಾರು ಸುಧಾರಣಾ ಕ್ರಮಗಳನ್ನು ತಂದ ಫಲವಾಗಿ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರು ಖಾಲಿ ಇದ್ದ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ಉಪ ನಿರ್ದೇಶಕರಾಗಿ ನೇಮಿಸಿದ್ದರು. ಅದರಂತೆ,ಬುಧವಾರ ಅಧಿಕಾರ ಸ್ವೀಕರಿಸಿದರು.





