ಜಿಲ್ಲೆಗಳು

ಮನೆಗಳ್ಳತನ: ಮೂವರ ಬಂಧನ

ಚಿನ್ನಾಭರಣ, ಮೂರು ಕಾರುಗಳ ವಶ; ಭಾಗಿಯಾದವರ ಬಂಧನಕ್ಕೂ ಕ್ರಮ

ಕುಶಾಲನಗರ: ಕುಶಾಲನಗರ ಠಾಣೆ ಪೊಲೀಸರು ಮೂವರು ಮನೆಗಳ್ಳರನ್ನು ಬಂಧಿಸಿದ್ದು, ಆರೋಪಿಗಳಿಂದ 12 ಲಕ್ಷ ರೂ. ಮೌಲ್ಯದ 190 ಗ್ರಾಂ ಚಿನ್ನಾಭರಣ ಮತ್ತು ಮೂರು ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ.
ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಗ್ರಾಮದ ಎಂ.ಪಿ.ಖಾದರ್ ಎಂಬವರ ಪುತ್ರ ಎಂ.ಎ.ಇಬ್ರಾಹಿಂ(27), ನಾಪೋಕ್ಲು ಸಮೀಪದ ಕೊಕೇರಿ ಗ್ರಾಮದ ಸುರೇಶ್ ಎಂಬುವರ ಪುತ್ರ ಸುದೀಪ್(21) ಮತ್ತು ಮಡಿಕೇರಿಯ ಅಜಾದ್ ನಗರದ ಎಂ.ಎಂ.ಮೊಹಮ್ಮದ್ ಅವರ ಪುತ್ರ ಎಂ.ಎಂ.ವಾಸಿಂ(29) ಬಂಧಿತ ಆರೋಪಿಗಳು. ಕಳ್ಳತನದಲ್ಲಿ ಭಾಗಿಯಾಗಿದ್ದ ಇನ್ನೂ ಮೂವರನ್ನು ಬಂಧಿಸಬೇಕಾಗಿದೆ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಕಳ್ಳತನದ ಹಣದಿಂದ ಖರೀದಿಸಿದ ಬಲೆನೋ ಕಾರು(ಕೆಎ 01 ಬಿಎಸ್‌ಎಸ್ 7724), ಮಾರುತಿ 800(ಕೆಎ 40 ಎಂ 418) ವಶಪಡಿಸಿಕೊಳ್ಳಲಾಗಿದೆ. ಇವರ ಬಂಧನದಿಂದ ಕುಶಾಲನಗರ ವ್ಯಾಪ್ತಿಯ 2, ನಾಪೋಕ್ಲು ವ್ಯಾಪ್ತಿಯ 2, ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ 1 ಪ್ರಕರಣ ಭೇದಿಸಲಾಗಿದೆ.
ಸಹಾಯಕ ಎಸ್‌ಪಿ ಕೆ.ಎಸ್.ಸುಂದರರಾಜು, ಡಿವೈಎಸ್‌ಪಿ ಆರ್.ವಿ.ಗಂಗಾಧರಪ್ಪ, ವೃತ್ತ ನಿರೀಕ್ಷಕ ಬಿ.ಜಿ.ಮಹೇಶ್ ಮತ್ತು ಜಿ.ಎನ್.ಶ್ರೀಕಾಂತ ಮಾರ್ಗದರ್ಶನದಲ್ಲಿ ಕುಶಾಲನಗರ ಗ್ರಾಮಾಂತರ ಠಾಣಾಧಿಕಾರಿ ಚಂದ್ರಶೇಖರ್ ನೇತೃತ್ವದಲ್ಲಿ ಪಿಎಸ್‌ಐಗಳಾದ ಅಪ್ಪಾಜಿ, ಭಾರತಿ, ಶ್ರೀಧರ್, ಲೋಹಿತ್, ಎಎಸ್‌ಐ ವೆಂಕಟೇಶ್, ಗೋಪಾಲ್, ಗಣಪತಿ, ಪೇದೆಗಳಾದ ಸತೀಶ್, ಮಂಜುನಾಥ್, ದಯಾನಂದ, ನಾಗರಾಜ್, ಸುಧೀಶ್ ಕುಮಾರ್, ಪ್ರಕಾಶ್, ಪ್ರವೀಣ್, ಸಂದೇಶ್, ದಿವೇಶ್, ರಂಜಿತ್, ಗಣೇಶ್, ಸಹನಾ, ಶರ್ಮಿಳಾ, ಸಿಡಿಆರ್ ಘಟಕದ ರಾಜೇಶ್, ಗಿರೀಶ್, ಪ್ರವೀಣ್, ಚಾಲಕರಾದ ರಾಜು, ಅರುಣ್, ಯೋಗೀಶ್ ಮತ್ತು ಶೇಷಪ್ಪ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

andolanait

Recent Posts

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ: ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ

ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…

22 mins ago

ಬೆಂಗಳೂರು| 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ: ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…

23 mins ago

ಕೋಲ್ಕತ್ತಾ: ಟೆನಿಸ್‌ ದಂತಕಥೆ ಲಿಯಾಂಡರ್‌ ಪೇಸ್‌ ಬಿಜೆಪಿ ಸೇರ್ಪಡೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್‌ ಐಕಾನ್‌ ಲಿಯಾಂಡರ್‌ ಪೇಸ್‌ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

25 mins ago

ಖಾಸಗಿ ಶಾಲೆಗಳಿಂದ ಶುಲ್ಕ ಏರಿಕೆ: ಮಧ್ಯಮ ವರ್ಗದ ಪೋಷಕರಿಗೆ ಸಂಕಷ್ಟ

ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…

26 mins ago

ಬೂದಿಪಡಗ ಆನೆ ಶಿಬಿರದಿಂದ 63 ವರ್ಷದ ಗಜೇಂದ್ರ ಆನೆ ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರ

ಬೆಂಗಳೂರು: ಚಾಮರಾಜನಗರ ಜಿಲ್ಲೆ ಬೂದಿಪಡಗ ಆನೆ ಶಿಬಿರದಲ್ಲಿ ಒಂಟಿಯಾಗಿದ್ದ 63 ವರ್ಷದ ಗಜೇಂದ್ರ ಆನೆಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ…

32 mins ago

ಡಿಜಿಟಲ್‌ ಪಾವತಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ ಆರ್‌ಬಿಐ

ನವದೆಹಲಿ: ಡಿಜಿಟಲ್‌ ವಹಿವಾಟುಗಳನ್ನು ಹೆಚ್ಚು ಸುರಕ್ಷಿತಗೊಳಿಸಲು ಹಾಗೂ ವಂಚನೆಗಳನ್ನು ತಡೆಯುವ ಉದ್ದೇಸದಿಂದ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಹೊಸ ಮಾರ್ಗಸೂಚಿ…

41 mins ago