ಮೈಸೂರು: ಮೈಸೂರು-ಊಟಿ ರಸ್ತೆಯಲ್ಲಿರುವ ಜೆಎಸ್‌ಎಸ್ ಪದವಿ ಕಾಲೇಜು ಬಳಿ ನಿರ್ಮಿಸಿರುವ ಬಸ್ ಪ್ರಯಾಣಿಕರ ತಂಗುದಾಣ ವಿವಾದ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಕಳೆದೆರಡು ದಿನಗಳ ಹಿಂದಷ್ಟೇ ಕಳಸ ನಿರ್ಮಾಣದ ಬೆನ್ನಲ್ಲೇ, ಸುತ್ತೂರು ಆದಿಜಗದ್ಗುರು ಶ್ರೀ ಶಿವರಾತ್ರಿ ಶಿವಯೋಗಿ, ಡಾ.ಶ್ರೀ ಶಿವರಾತ್ರಿ ರಾಜೇಂದ್ರ ಶ್ರೀಗಳು, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾವಚಿತ್ರದೊಂದಿಗೆ ಜೆಎಸ್‌ಎಸ್ ಕಾಲೇಜು ಬಸ್ ನಿಲ್ದಾಣ ಎಂದು ನಾಮಫಲಕ ಅಳವಡಿಸಲಾಗಿದೆ.
ಬೆಳಗಾಗುವುದರೊಳಗೆ ಬಸ್ ನಿಲ್ದಾಣದಕ್ಕೆ ಜೆಎಸ್‌ಎಸ್ ಕಾಲೇಜು ಬಸ್ ನಿಲ್ದಾಣ ಎಂದು ನಾಮಕರಣ ಮಾಡಲಾಗಿದ್ದು, ವಿವಾದಕ್ಕೆ ಇತಿಶ್ರೀ ಹಾಡುವ ಕೆಲಸ ನಡೆಯುತ್ತಿರುವಾಗಲೆ, ಹೊಸ ತಿರುವು ಪಡೆದಿದೆ.
ಮಸೀದಿ ಮಾದರಿಯಲ್ಲಿರುವ ಪ್ರಯಾಣಿಕರ ತಂಗುದಾಣ ತೆಗೆಯುವಂತೆ ಸಂಸದ ಪ್ರತಾಪ್ ಸಿಂಹ ತಾಕೀತು ಮಾಡಿದ್ದರು. ಇಲ್ಲದಿದ್ದರೆ ತಾನೇ ಜೆಸಿಬಿ ಮೂಲಕ ಕೆಡವಿಸುವುದಾಗಿ ಎಚ್ಚರಿಕೆ ಕೂಡಾ ನೀಡಿದ್ದರು ಇದರ ಬೆನ್ನಲ್ಲೇ ರಾತ್ರೋರಾತ್ರಿ ಇಂತಹ ಬದಲಾವಣೆಯಾಗಿದೆ. ಅಲ್ಲದೆ ನಿರ್ಮಾಣದ ಸ್ವರೂಪವನ್ನು ಶಾಸಕ ಎಸ್.ಎ.ರಾಮದಾಸ್ ಸಮರ್ಥಿಸಿಕೊಂಡಿದ್ದರು. ಗುಮ್ಮಟಕ್ಕೆ ಕಳಸ ಅಳವಡಿಕೆ, ಶ್ರೀಗಳು, ಪ್ರಧಾನಿ, ಮುಖ್ಯಮಂತ್ರಿಗಳ ಭಾವಚಿತ್ರ ಎಲ್ಲದರ ನಡುವೆ ಈ ಸಮಸ್ಯೆಯನ್ನು ಮೈಸೂರು ಮಹಾನಗರ ಪಾಲಿಕೆ ಹೇಗೆ ಬಗೆಹರಿಸುತ್ತದೆ ಎಂದು ಕಾದುನೋಡಬೇಕಿದೆ.
ಏನಿದು ನೋಟಿಸ್?
ರಾಷ್ಟ್ರೀಯ ಹೆದ್ದಾರಿಯಲ್ಲಿ ಅನಧಿಕೃತವಾಗಿ ಬಸ್ ನಿಲ್ದಾಣ ನಿರ್ಮಿಸಲಾಗಿದೆ. ಮೈಸೂರು ಮಹಾನಗರ ಪಾಲಿಕೆ ಒಂದು ವಾರದೊಳಗೆ ಬಸ್ ನಿಲ್ದಾಣ ತೆರವುಗೊಳಿಸಬೇಕು ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಬಲ ಭಾಗದಲ್ಲಿ ಶೆಲ್ಟರ್ ನಿರ್ಮಿಸಲಾಗಿದೆ. ಈ ಹಿಂದೆೆಯೇ ಈ ಜಾಗದಲ್ಲಿ ಶೆಲ್ಟರ್ ನಿರ್ಮಿಸದಂತೆ ಸೂಚಿಸಲಾಗಿತ್ತು. ಆದರೂ ಅನಧಿಕೃತವಾಗಿ ನಿರ್ಮಿಸಲಾಗಿದೆ. ಹೀಗಾಗಿ ಪ್ರಯಾಣಿಕರ ತಂಗುದಾಣವನ್ನು ತೆಗೆಯುವಂತೆ ಮೈಸೂರು ಮಹಾನಗರ ಪಾಲಿಕೆ ಆಯುಕ್ತರಿಗೆ ನೋಟಿಸ್ ನೀಡಿ, ಒಂದು ವಾರಗಳ ಕಾಲ ಗಡುವು ನೀಡಿದೆ.
ಪೊಲೀಸ್ ಬಂದೋಬಸ್ತ್
ಮುನ್ನೆಚ್ಚರಿಕೆ ಕ್ರಮವಾಗಿ ಬುಧವಾರ ಬೆಳಿಗ್ಗೆಯಿಂದಲೇ ಜೆಎಸ್‌ಎಸ್ ಕಾಲೇಜು ಬಳಿ ಇರುವ ಪ್ರಯಾಣಿಕರ ತಂಗುದಾಣಕ್ಕೆ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ. ಪಾಳಿಯಲ್ಲಿ ಪೊಲೀಸರು ಬಸ್ ನಿಲ್ದಾಣವನ್ನು ಕಾಯುತ್ತಿದ್ದಾರೆ.
ನಾವು ಕಟ್ಟಿಸಿಲ್ಲ
ಮೈಸೂರು-ಊಟಿ ರಸ್ತೆಯಲ್ಲಿ ನಿರ್ಮಿಸಿರುವ ಬಸ್ ತಂಗುದಾಣಕ್ಕೆ ನಗರಪಾಲಿಕೆಯಿಂದ ಯಾವುದೇ ಅನುದಾನ ನೀಡಿಲ್ಲ. ಜೊತೆಗೆ ಸ್ಥಳವೂ ಕೂಡ ನಮ್ಮದಲ್ಲ. ಹೀಗಾಗಿ ಕಟ್ಟಡವನ್ನು ನಾವು ಕೆಡವುವ ಪ್ರಶ್ನೆಯೇ ಇಲ್ಲ ಎಂದು ನಗರಪಾಲಿಕೆ ಇಂಜಿನಿಯರುಗಳು ಹೇಳುತ್ತಾರೆ.
ಮಹಾನಗರಪಾಲಿಕೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ,ಕೆಆರ್‌ಡಿಸಿಎಲ್ ಅಧಿಕಾರಿಗಳಿಂದ ವರದಿ ತರಿಸಿಕೊಂಡು ಅವುಗಳನ್ನು ಪರಿಶೀಲಿಸಿ ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳುತ್ತೇನೆ.
-ಕೆ ವಿ ರಾಜೇಂದ್ರ, ಜಿಲ್ಲಾಧಿಕಾರಿ
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ನೀಡಿರುವ ನೋಟೀಸ್ ನನಗೆ ತಲುಪಿಲ್ಲ. ನೋಟೀಸ್ ಪರಿಶೀಲಿಸಿದ ಬಳಿಕ ಪ್ರತಿಕ್ರಿಯಿಸುತ್ತೇನೆ.
–ಲಕ್ಷ್ಮೀಕಾಂತ ರೆಡ್ಡಿ ನಗರಪಾಲಿಕೆ ಆಯುಕ್ತರು
ಸಿಎಂಗೆ ದೂರು ಸಲ್ಲಿಸಿದ ರಾಮದಾಸ್
ಬೆಂಗಳೂರು: ಮೈಸೂರಿನ ಬಸ್ ತಂಗುದಾಣದ ವಿವಾದ ರಾಜಧಾನಿಯನ್ನು ತಲುಪಿದ್ದು, ದೊರೆಗೆ ದೂರು ಹೋಗಿದೆ. ಹೌದು… ವಿವಾದದಿಂದ ಅಸಮಾಧಾನಗೊಂಡಿರುವ ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ಅವರು ಸಂಸದ ಪ್ರತಾಪ್ ಸಿಂಹ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ದೂರು ಸಲ್ಲಿಸಿದ್ದಾರೆ.
ನಂಜನಗೂಡು : ಬೈಕ್ ಸಮೇತ ಯುವಕ ಸಜೀವ ದಹನವಾಗಿರುವ ಘಟನೆ ತಾಲ್ಲೂಕಿನ ಕೊರೆಹುಂಡಿ ಗ್ರಾಮದ ಹುಲ್ಲಹಳ್ಳಿ ನಾಲೆ ಬಳಿ ನಡೆದಿದೆ.…
ಹನೂರು : ಯಾರು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತಾರೆ ಅನ್ನೋದು ಮುಖ್ಯವಲ್ಲ. ಅಭಿವೃದ್ಧಿ ಮಾಡ್ತಿದ್ದಾರಾ, ರಾಜ್ಯವನ್ನು ಅಭಿವೃದ್ಧಿಯ ದಿಕ್ಕಿನತ್ತ ಕೊಂಡೊಯ್ಯುತ್ತಿದ್ದಾರಾ ಅನ್ನೋದೇ…
ಮೈಸೂರು : ಕರ್ನಾಟಕ ರತ್ನ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ 16 ನೇ ವರ್ಷದ ಸ್ಮರಣೆಯನ್ನು ನಗರದ ವಿವಿಧೆಡೆ ವಿಷ್ಣುವರ್ಧನ್…
ಉತ್ತರಾಖಂಡ: ಇಲ್ಲಿನ ಅಲ್ಮೋರಾದ ಭಿಕಿಯಾಸೈನ್ ಪ್ರದೇಶದಲ್ಲಿ ಪ್ರಯಾಣಿಕರಿದ್ದ ಬಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, 12 ಮಂದಿ…
ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹಾಗೂ ಉದ್ಯಮಿ ರಾಬರ್ಟ್ ವಾದ್ರಾ ಪುತ್ರ ರೈಹಾನ್ ವಾದ್ರಾ ತಮ್ಮ ಬಹುಕಾಲದ ಗೆಳತಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಆಡಳಿತ ನಡೆಸಲು ಬಿಜೆಪಿಗೆ ಒಂದು ಅವಕಾಶ ಕೊಡಿ. ಭಯ, ಭ್ರಷ್ಟಾಚಾರ ಹಾಗೂ ದುರಾಡಳಿತವನ್ನು ಉತ್ತಮ ಆಡಳಿತದೊಂದಿಗೆ…