ಜಿಲ್ಲೆಗಳು

ಮೈಸೂರು: ಕ್ರೈಂ ಬ್ರಾಂಚ್‌ ಪೊಲೀಸ್‌ ಎಂದು ಹಣ ವಸೂಲಿ ಮಾಡುತ್ತಿದ್ದವನ ಬಂಧನ

ಹಣ ವಸೂಲಿ ಮಾಡಲು ಕ್ರೈಂ ಬ್ರಾಂಚ್‌ ಪೊಲೀಸ್‌ ಎಂದು ಹೇಳಿಕೊಂಡವ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ವ್ಯಕ್ತಿಯೋರ್ವರು ಅನುಮಾನ ವ್ಯಕ್ತಪಡಿಸಿ ಬೈಲುಕುಪ್ಪೆ ಪೊಲೀಸ್‌ ಠಾಣೆಯಲ್ಲಿ ನೀಡಿದ ದೂರಿನ ಮೇರೆಗೆ ತನಿಖೆ ನಡೆಸಿದಾಗ ಸತ್ಯಾಂಶ ಬೆಳಕಿಗೆ ಬಂದಿದೆ.

ಮೈಸೂರು ಜಿಲ್ಲೆಯ ಕೆಆರ್‌ ನಗರ ತಾಲೂಕಿನ ಮಧುವನಹಳ್ಳಿ ನಿವಾಸಿ ದಿವ್ಯರಾಜ್‌ ಬಂಧಿತ ಆರೋಪಿಯಾಗಿದ್ದು, ಈತ ಈಗಾಗಲೇ ಹಲವರ ಬಳಿ ತಾನು ಕ್ರೈಂ ಬ್ರಾಂಚ್‌ ಪೊಲೀಸ್‌ ಎಂದು ನಂಬಿಸಿ ಹಣ ಪಡೆದಿದ್ದು, ಕೊಪ್ಪ ಗ್ರಾಮದ ಆಯುರ್ವೇದಿಕ್‌ ಸ್ಪಾ ಮಾಲೀಕ ಪುಷ್ಪ ಕುಮಾರ್‌ ಅವರು ಈತನ ಮಾತನ್ನು ನಂಬದೇ ಪೊಲೀಸ್‌ ದೂರು ನೀಡಿದ್ದರು. ಸದ್ಯ ದಿವ್ಯರಾಜ್‌ ಅನ್ನು ಬೈಲುಕುಪ್ಪೆ ಪೊಲೀಸರು ಬಂಧಿಸಿದ್ದಾರೆ.

andolana

Recent Posts

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

52 mins ago

ಓದುಗರ ಪತ್ರ: ಸರ್ಕಾರಿ ಶಾಲಾ, ಕಾಲೇಜುಗಳೆಂದರೆ ತಾತ್ಸಾರವೇಕೆ?

ಇತ್ತೀಚೆಗೆ ಮೈಸೂರಿನ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ನಗರದ ಸರ್ಕಾರಿ ಹಾಗೂ…

54 mins ago

ಓದುಗರ ಪತ್ರ: ಕೆಪಿಎಸ್‌ಸಿ ರದ್ದತಿಗಿಂತ ‘ಶುದ್ಧೀಕರಣ’ ತುರ್ತು ಅಗತ್ಯ

ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ ವ್ಯವಸ್ಥೆಯಲ್ಲಿನ ಲೋಪದೋಷಗಳನ್ನು…

56 mins ago

ಆರೋಗ್ಯಕರ ನಾಳೆಗಾಗಿ ಆಯುರ್ವೇದ – ಒಂದು ಆರೋಗ್ಯ, ಒಂದು ಭವಿಷ್ಯ

ಡಾ. ಮಾನಸ ಎಸ್.ಡಿ. ವೈಯಕ್ತಿಕ ಆರೋಗ್ಯದ ಜೊತೆಗೆ ಸಾಮೂಹಿಕ ಆರೋಗ್ಯ ಹಾಗೂ ಪರಿಸರದ ಅರೋಗ್ಯವನ್ನೂ ಕಾಪಾಡುವುದು ಅಗತ್ಯ ಆರೋಗ್ಯವೆಂದರೆ ಕೇವಲ…

58 mins ago

ಡಾ.ಎಸ್.ಜೆ. ನಾಗಲೋಟಿಮಠ ಅವರ ಸ್ಛೂರ್ತಿದಾಯಕ ನಡವಳಿಕೆ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಅಧಿಕಾರದ ಶಕ್ತಿಯಿಂದಲ್ಲ, ಆದರ್ಶದ ನಡವಳಿಕೆಯಿಂದ ಮುನ್ನಡೆಸುವುದೇ ನಿಜವಾದ ನಾಯಕತ ಕೆಲವೊಮ್ಮೆ…

1 hour ago

ಯುವನಿಧಿ; ೨,೧೭೯ ಮಂದಿಗೆ ೬.೩೦ ಕೋಟಿ ರೂ. ನೆರವು

ನವೀನ್ ಡಿಸೋಜ ೨,೪೫೯ ನಿರುದ್ಯೋಗಿ ಯುವಕ-ಯುವತಿಯರಿಂದ ನೋಂದಣಿ; ಶೇ.೮೮.೦೬ ಫಲಾನುಭವಿಗಳಿಗೆ ಡಿಬಿಟಿ ಮೂಲಕ ಹಣ ವರ್ಗಾವಣೆ  ಮಡಿಕೇರಿ: ಉದ್ಯೋಗದ ನಿರೀಕ್ಷೆಯಲ್ಲಿರುವ…

1 hour ago