ನಾಗಮಂಗಲ: ಕಾರಿನ ಟೈರ್ ಸಿಡಿದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಎದುರು ಬದಿ ರಸ್ತೆಯಲ್ಲಿ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟು, ಮತ್ತೊಬ್ಬ ಆಸ್ಪತ್ರೆಗೆ ಸಾಗಿಸುವ ರಸ್ತೆ ಮಧ್ಯೆ ಮೃತಪಟ್ಟಿರುವ ಧಾರುಣ ಘಟನೆ ತಾಲ್ಲೂಕಿನ ಎ.ನಾಗತಿಹಳ್ಳಿ ಸಮೀಪ ಭಾನುವಾರ ರಾತ್ರಿ ಸಂಭವಿಸಿದೆ.
ಹಾಸನ ಮೂಲದ ಜಯಂತಿ (೬೦) ಮತ್ತು ಶ್ರೀನಿವಾಸ್ ಮೂರ್ತಿ(೬೦), ಚೆನ್ನೈ ಮೂಲದ ಕಿಶೋರ್ (೨೫) ಮತ್ತು ಪ್ರಭಾಕರ್(೭೫) ಮೃತಪಟ್ಟವರಾಗಿದ್ದು, ಮತ್ತೋರ್ವ ೪೦ ವರ್ಷದ ಪುರುಷನಾಗಿದ್ದು, ಮಾಹಿತಿ ತಿಳಿದುಬಂದಿಲ್ಲ.
ಬೆAಗಳೂರಿನಿAದ ಹಾಸನ ಕಡೆಗೆ ಹೋಗುತ್ತಿದ್ದ ಇನೋವಾ ಕಾರಿನ ಟೈರ್ ಸಿಡಿದ ಪರಿಣಾಮ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಪಲ್ಟಿ ಹೊಡೆದು ಹಾಸನದಿಂದ ಬೆಂಗಳೂರಿನ ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದ್ದು, ಮೂವರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೂ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಬಿಜಿ ನಗರದ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ಮೃತದೇಹಗಳನ್ನು ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಪಂಚನಾಮೆ ನಡೆಸಿ, ಸಂಬAಧಿಸಿದವರಿಗೆ ನೀಡಲಾಯಿತು.
ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್:
ಹಾಸನದಿಂದ ಬೆಂಗಳೂರು ಮಾರ್ಗವಾಗಿ ಭಾನುವಾರ ಸಂಜೆ ತೆರಳುತ್ತಿದ್ದ ನೂರಾರು ವಾಹನಗಳು ಈ ಘಟನೆಯಿಂದ ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿಕೊಂಡವು. ಮೃತರನ್ನು ಆಸ್ಪತ್ರೆಗೆ ಸಾಗಿಸುವ ಕೆಲಸ ಹಾಗೂ ಕಾರುಗಳನ್ನು ರಸ್ತೆಯಿಂದ ತೆರವುಗೊಳಿಸಲು ಕೆಲಸವಾಗಬೇಕಾಗಿದ್ದರಿಂದ ಬೆಂಗಳೂರು ಕಡೆಗೆ ತೆರಳುವ ನೂರಾರು ವಾಹನಗಳು ಕಿ.ಮೀ.ಗಟ್ಟಲೆ ಸಾಲುಗಟ್ಟಿ ನಿಂತಿದ್ದವು. ಕಾರುಗಳನ್ನು ತೆರವುಗೊಳಿಸಿದ ನಂತರ ಪೊಲೀಸರು ಸಂಚಾರಕ್ಕೆ ಅನುವು ಮಾಡಿಕೊಟ್ಟರು. 0ಬಿಂಡಿಗನವಿಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಸಿಪಿಐ ಸುಧಾಕರ್, ಪಿಎಸ್‌ಐ ಶ್ರೀಧರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ…
ಮೈಸೂರು: ಯೂನಿಟಿ ಮಾಲ್ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…
ಬೆಳಗಾವಿ: ಬೆಳಗಾವಿ ಅಧಿವೇಶನದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ಬೆಂಗಳೂರು: ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಒಟ್ಟು 377 ಪ್ರಕರಣಗಳ ಪೈಕಿ…
ಎಚ್.ಡಿ.ಕೋಟೆ: ತಾಲ್ಲೂಕಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಿಸಲು ಶಿಕ್ಷಣಾಧಿಕಾರಿ ಸಿ.ಎನ್.ರಾಜು ಅವರು ಕಾಡಂಚಿನ ಶಾಲೆಗಳಲ್ಲಿ ರಾತ್ರಿ ವಾಸ್ತವ್ಯ ಹಮ್ಮಿಕೊಂಡಿದ್ದಾರೆ. ತಾಲ್ಲೂಕಿನ ಗಡಿಭಾಗದ…
ನಂಜನಗೂಡು: ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ಚರಂಡಿಗಳು ಗಬ್ಬೆದ್ದು ನಾರುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ…