ಹನೂರು :ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನದ ಮೂವರು ಸವಾರರು ಗಾಯಗೊಂಡಿದ್ದಾರೆ.
ತಾಲೂಕಿನ ಭದ್ರಯ್ಯನ ಹಳ್ಳಿ ಗ್ರಾಮದ ರಾಜು ಹರೀಶ್ ರಂಗಸ್ವಾಮಿ ಗಾಯಗೊಂಡ ವ್ಯಕ್ತಿಗಳಾಗಿದ್ದಾರೆ.
ಘಟನೆಯ ವಿವರ: ತಾಲೂಕಿನ ಭದ್ರಯ್ಯನಳ್ಳಿ ಗ್ರಾಮದಿಂದ ಕಾಮಗೆರೆ ಗ್ರಾಮಕ್ಕೆ ಕೂಲಿ ಕೆಲಸಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮೂವರಿಗೂ ಕಾಲು ಮುರಿದಿದೆ. ತಕ್ಷಣ ಮಾಹಿತಿ ತಿಳಿದ 112 ಪೊಲೀಸ್ ಸಿಬ್ಬಂದಿಗಳಾದ ಎ ಎಸ್ ಐ ಬಸವಣ್ಣ, ಮುಖ್ಯಪೇದೆ ಗಳಾದ ಸಿದ್ದೇಶ್ , ಲೋಕೇಶ್ ತಕ್ಷಣ 108 ಆಂಬುಲೆನ್ಸ್ ಮೂಲಕ ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಗೆ ದಾಖಲು ಮಾಡಿಸಿದ್ದಾರೆ. ಅಪಘಾತವಾದ ನಂತರ ಕಾರಿನ ಚಾಲಕ ಪರಾರಿಯಾಗಿದ್ದು ಈತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಬೆಂಗಳೂರು : ಆಸ್ಪ್ರೇಲಿಯಾದ ಬೀಚ್‌ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…
ಮೈಸೂರು : ಇಲ್ಲಿನ ರಾಘವೇಂದ್ರ ನಗರದ ಸುಮನ್ ವಿದ್ಯಾಸಂಸ್ಥೆಯ ಕಾರ್ಯದರ್ಶಿಗೆ ಕೊಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಈ ಸಂಬಂಧ…
ಬೆಂಗಳೂರು : ದೇಶದ ಹಿರಿಯ ಶಾಸಕ, ಸೋಲಿಲ್ಲದ ಸರದಾರ ಎಂಬ ಖ್ಯಾತಿಗೆ ಪಾತ್ರವಾಗಿದ್ದ ಶಾಮನೂರು ಶಿವಶಂಕರಪ್ಪ ಭಾನುವಾರ ಇಹಲೋಕ ತ್ಯಜಿಸಿದ್ದಾರೆ.…
ಬೆಂಗಳೂರು : ಪ್ರಧಾನ ಮಂತ್ರಿ ಬೆಳೆ ವಿಮೆ ಯೋಜನೆಯಡಿ ರೈತರು, ಕೇಂದ್ರ ಸ ರ್ಕಾರ ಮತ್ತು ರಾಜ್ಯ ಸರ್ಕಾರ ಪಾವತಿಸಿರುವ…
ಹೊಸದಿಲ್ಲಿ : ಮೂರು ದಿನಗಳ ಕಾಲ ಭಾರತ ಪ್ರವಾಸಕ್ಕೆ ಆಗಮಿಸಿರುವ ಫುಟ್ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ ಅವರು ಸೋಮವಾರ ಬೆಳಗ್ಗೆ…