ಜಿಲ್ಲೆಗಳು

ಕಾರು ಬೈಕ್ ಡಿಕ್ಕಿ : ಇಬ್ಬರ ಸಾವಿಗೆ ಕಾರಣರಾದ ಇಂಜಿನಿಯರ್ ಪೊಲೀಸರಿಗೆ ಶರಣು!

ನಂಜನಗೂಡು : ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕಿನ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಪಟ್ಟಣದ ಹೊರವಲಯದ ವಿದ್ಯಾಪೀಠದ ಬಳಿ ಇಂದು ಸಂಜೆ ನಡೆದಿದೆ.

ಸಾವಿಗೀಡಾದವರನ್ನು ಚಾಮರಾಜನಗರ ತಾಲೂಕಿನ ಹೆಗ್ಗೊಟರ ಗ್ರಾಮದ ಮಹೇಶ್ ನಾಗಣ್ಣ (40 ವರ್ಷ), ಹಾಗೂ ಮಹದೇವ ನಾಗರಾಜು (50 ವರ್ಷ) ಎಂದು ಗುರುತಿಸಲಾಗಿದೆ. ಎದುರಿನಿಂದ ಬರುವಾಗ ಡಿಕ್ಕಿಯಾದ ಕಾರು ಇಬ್ಬರ ಸಾವಿಗೆ ಕಾರಣರಾದ ಕಾರಿನ ಚಾಲಕ ಜಲಸಂಪನ್ಮೂಲ ಇಲಾಖೆ ಇಂಜಿನಿಯರ್ ನಟೇಶ್ ಅವರು ತಾವೇ ನಂಜನಗೂಡು ಠಾಣೆಗೆ ಶರಣಾಗಿದ್ದಾರೆ.

ನಂಜನಗೂಡಿನಲ್ಲಿ ಕೆಲಸ ಮುಗಿಸಿ ಊರು ಕಡೆ ಹೊರಟಿದ್ದ ಮಹೇಶ್ ಹಾಗೂ ಮಹದೇವ ಅವರ ಬೈಕಿಗೆ ಫಾರಂ ಹೌಸ್ ಗೆ ಹೋಗಿ ವಾಪಸ್ ಆಗುತ್ತಿದ್ದವರಿಗೆ ಕಾರು ನಂಜನಗೂಡು ಚಾಮರಾಜನಗರ ರಸ್ತೆಯಲ್ಲಿರುವ ವಿದ್ಯಾಪೀಠದ ಬಳಿ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಬೇರೆ ಬೇರೆ ಕಡೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಪಘಾತದಿಂದಾಗಿ ಬೈಕ್ ಸಂಪೂರ್ಣ ಜಖಂಗೊಂಡಿದ್ದು, ಕಾರು ಕೂಡ ಮತ್ತೊಂದು ಕಡೆ ಹೋಗಿ ನಿಂತಿದೆ. ಸ್ಥಳಕ್ಕೆ ನಂಜನಗೂಡು ಪೊಲೀಸ್ ಅಧಿಕಾರಿಗಳಾದ ಲಕ್ಷ್ಮಿಕಾಂತ ತಳವಾರ್, ಯಾಸ್ಮಿನ್ ತಾಜ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ..

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

12 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

12 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

14 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

14 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

1 day ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago