Mysore
26
clear sky

Social Media

ಸೋಮವಾರ, 29 ಡಿಸೆಂಬರ್ 2025
Light
Dark

ಕಾರು ಪಲ್ಟಿ : ಮಗು ಸಾವು, 6 ಜನರಿಗೆ ಗಾಯ

ಮಲೆ ಮಹದೇಶ್ವರ ಬೆಟ್ಟದಿಂದ ಹಿಂತಿರುಗುವ ವೇಳೆ ದುರ್ಘಟನೆ

ಹನೂರು: ತಾಲೂಕಿನ ಮಂಗಲ ಗ್ರಾಮದ ಬಳಿ ಮಲೆಮಹದೇಶ್ವರ ಬೆಟ್ಟದಿಂದ ಗ್ರಾಮಕ್ಕೆ ಹಿಂತಿರುಗುತ್ತಿದ್ದ ವೇಳೆ ಕಾರು ಪಲ್ಟಿ ಹೊಡೆದು ಮಗು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಚಾಲಕ ಸೇರಿದಂತೆ 6 ಜನರು ಗಾಯಗೊಂಡಿದ್ದಾರೆ.

ಮೈಸೂರು ತಾಲೂಕು ಮಾರ್ಬಳ್ಳಿ ಗ್ರಾಮದ ತನ್ಮಯ್ (3) ಮೃತಪಟ್ಟ ಮಗು. ಮಂಜು, ಸಾಕಮ್ಮ, ಕಿರಣ್, ಚಂದ್ರಮ್ಮ, ಸಂತೇಯಮ್ಮ ಹಾಗೂ ಚಾಲಕ ವೆಂಕಟೇಶ್ ಎಂಬವರೇ ಗಾಯಗೊಂಡವರು.

ಮಲೆ ಮಾದೇಶ್ವರ ಬೆಟ್ಟದಲ್ಲಿ ಪೂಜೆ ಮುಗಿಸಿ ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ತಾಲೂಕಿನ ಮಂಗಲ ಗ್ರಾಮದ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಲ್ಟಿ ಹೊಡೆದಿದೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಹನೂರು ಪೊಲೀಸರು ಸಾರ್ವಜನಿಕರ ಸಹಾಯದಿಂದ ಗಾಯಾಳುಗಳನ್ನು ಸಮೀಪದ ಕಾಮಗೆರೆ ಹೋಲಿಕ್ರಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!