ಚಾಮರಾಜನಗರ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಪರಿಣಾಮ 6 ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಹನೂರು ಪಟ್ಟಣದಲ್ಲಿ ಸಂಭವಿಸಿದೆ.
ಕೊಳ್ಳೇಗಾಲ ಮೂಲಕ ಹನೂರಿಗೆ ಬರುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹನೂರಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮೀಪದ ಸ್ವಾಮಿಹಳ್ಳದ ಎಡಬದಿಯಲ್ಲಿನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಕಾರು ಅತಿ ವೇಗದಲ್ಲಿ ಬಂದಿದ್ದರಿಂದ ವಿದ್ಯುತ್ ಕಂಬ ತುಂಡಾಗಿ ಕೆಶಿಪ್ ರಸ್ತೆ ಕಾಮಗಾರಿಗಾಗಿ ಅಗೆಯಲಾಗಿದ್ದ ಗುಂಡಿಗೆ ಬಿದ್ದಿದೆ ಎಂದು ತಿಳಿದುಬಂದಿದೆ.ಅಪಘಾತದಲ್ಲಿ 6 ಮಂದಿ ಗಾಯಗೊಂಡಿದ್ದು, ಇವರಲ್ಲಿ ಓರ್ವರ ಸ್ಥಿತಿ ಗಂಭೀರವಾಗಿದ್ದು, ಇವರನ್ನು ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದವರನ್ನು ಕಾಮಗೆರೆಯ ಹೋಲಿಕ್ರಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹನೂರು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…